Kanakapura: ಮಹಿಳೆ ಮೇಲೆ ಕಾಡಾನೆ ದಾಳಿ, ತೀವ್ರವಾಗಿ ಗಾಯಗೊಂಡು ಅಸ್ವಸ್ಥಗೊಂಡಿರುವ ಮಹಿಳೆ
Team Udayavani, Jan 1, 2024, 10:46 AM IST
ಕನಕಪುರ: ತಾಲೂಕಿನ ಕಸಬಾ ಹೋಬಳಿ ಬರಡನಹಳ್ಳಿ ಗ್ರಾಮದಲ್ಲಿ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಜ.1ರ ಸೋಮವಾರ ಬೆಳಗ್ಗೆ ನಡೆದಿದೆ.
ಆನೆ ದಾಳಿಯಿಂದ ತೀವ್ರ ಅಸ್ವಸ್ಥಗೊಂಡಿರುವ ಮಹಿಳೆಯನ್ನು ಬರಡನಹಳ್ಳಿ ಉಪ್ಪಾಕೆರೆದೊಡ್ಡಿ ಗ್ರಾಮದ 30 ವರ್ಷದ ದುಂಡಮ್ಮ ಎಂದು ಗುರುತಿಸಲಾಗಿದೆ.
ಇವರು ರೇಷ್ಮೆ ಹುಳುಗಳಿಗೆ ಸೊಪ್ಪು ಹಾಕಲು ಹೋಗುತ್ತಿದ್ದಾಗ ಬೆಳಗಿನ ಜಾವ ಸುಮಾರು ನಾಲ್ಕು ಗಂಟೆಗೆ ಆನೆಯ ದಾಳಿ ನಡೆಸಿ, ಮಹಿಳೆ ಸತ್ತಿರಬಹುದು ಎಂದು ಬಿಟ್ಟು ಹೋಗಿದೆ.
ಆನೆ ದಾಳಿಯಿಂದ ಮಹಿಳೆಯ ಎಡ ತೋಳು ಸಂಪೂರ್ಣ ಜಜ್ಜಿ ಹೋಗಿದೆ. ಜಮೀನಿನ ಕಡೆ ಹೋದವರು ನೋಡಿಕೊಂಡು ಗ್ರಾಮಸ್ಥರಿಗೆ ಮತ್ತು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ದಾಳೇಶ್, ಘಟನೆಯ ಮಾಹಿತಿ ಪಡೆದುಕೊಂಡಿದ್ದು, ಆನೆ ದಾಳಿಯಿಂದ ತೀವ್ರ ಗಾಯಗೊಂಡಿರುವ ಸಂತ್ರಸ್ತ ಮಹಿಳೆಗೆ ಚಿಕಿತ್ಸೆ ಕೊಡಿಸಿ, ಇಲಾಖೆಯಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು