ಯೋಜನೆಗಳು ಸಕಾರಗೊಳ್ಳಲು ಶ್ರಮಿಸಿ

ತಾಲೂಕಿನ ಕೈಲಾಂಚ ಗ್ರಾಪಂ ಅಧ್ಯಕ್ಷ ಪಾಂಡುರಂಗ ಅಭಿಮತ • ಗ್ರಾಪಂಗೆ ಸಹಕಾರ ನೀಡಲು ಮನವಿ

Team Udayavani, Aug 11, 2019, 5:48 PM IST

RN-TDY-3

ರಾಮನಗರದ ಕೈಲಾಂಚ ಗ್ರಾಮ ಪಂಚಾಯ್ತಿ ಅಧ್ಯಕ್ಷ ಆರ್‌. ಪಾಂಡುರಂಗ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಿತು.

ರಾಮನಗರ: ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಗ್ರಾಪಂ ಜೊತೆಗೆ ಕೈಜೋಡಿಸಿ ಪ್ರತೀ ಹಂತದಲ್ಲಿ ಗ್ರಾಪಂ ಜೊತೆಗಿದ್ದು ಸರ್ಕಾರದ ಯೋಜನೆಗಳು ಸಾಕಾರಗೊಳ್ಳಲು ಶ್ರಮಿಸಬೇಕು ಎಂದು ತಾಲೂಕಿನ ಕೈಲಾಂಚ ಗ್ರಾಪಂ ಅಧ್ಯಕ್ಷ ಆರ್‌. ಪಾಂಡುರಂಗ ಅಭಿಪ್ರಾಯ ಪಟ್ಟರು.

ಕೈಲಾಂಚ ಗ್ರಾಪಂ ಆವರಣದಲ್ಲಿ ಆಯೋಜಿಸಿದ್ದ ಗ್ರಾಪಂ ಕರ್ನಾಟಕ ಅಭಿವೃದ್ಧಿ ಯೋಜನೆಯ (ಕೆಡಿಪಿ) ತ್ತೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಧಿಕಾರಿಗಳು ಸಾರ್ವಜನಿಕ ಕೆಲಸದಲ್ಲಿ ಇಚ್ಛಾಶಕ್ತಿ ಬೆಳೆಸಿಕೊಂಡಾಗ ಮಾತ್ರ ಗ್ರಾಮಾಭಿವೃದ್ಧಿ, ಸಮುದಾಯ ಕೆಲಸಗಳು, ಗ್ರಾಮೀಣ ರೈತಪರ ಯೋಜನೆಗಳು, ಸಾಕಾರ ಗೊಳ್ಳಲು ಸಾಧ್ಯ. ಸರ್ಕಾರ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಿದ್ದು ವಿವಿಧ ಇಲಾಖೆಗಳ ಮುಖಾಂತರ ಗ್ರಾಪಂ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತಗೊಳಿಸುತ್ತಿದೆ ಎಂದರು.

ಸಾರ್ವಜನಿಕರಿಗೆ ಕಾಲಕಾಲಕ್ಕೆ ವಿವಿಧ ಇಲಾಖೆಯಲ್ಲಿ ಸಿಗುವ ಸವಲತ್ತುಗಳ ಬಗ್ಗೆ ತಿಳಿವಳಿಕೆ ನೀಡಿ, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಪ್ರತೀ ವಾರ್ಡ್‌ಸಭೆ, ಗ್ರಾಮಸಭೆಗಳಲ್ಲಿ ಮಾಹಿತಿ ನೀಡಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ರೈತರ ಏಳಿಗೆಗಾಗಿ ಇರುವ ಹತ್ತು ಹಲವಾರು ಕಾರ್ಯಕ್ರಮಗಳ ಯೋಜನೆಗಳ ಸಾಕಾರಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಗ್ರಾಪಂ ಜೊತೆಗೆ ಕೈಜೋಡಿಸಬೇಕು ಎಂದರು.

ಕೃಷಿ ಅಧಿಕಾರಿ ಪ್ರದೀಪ್‌ ಮಾತನಾಡಿ, ಕೈಲಾಂಚ ಗ್ರಾಪಂನಲ್ಲಿ ರೈತಸಿರಿ ಯೋಜನೆಯಲ್ಲಿ ಸಿರಿಧಾನ್ಯ ಬೆಳೆಯಲು ಎಕರೆಗೆ 10 ಸಾವಿರ ಪ್ರೋತ್ಸಾಹ ಧನ ಸರ್ಕಾರ ನೀಡಲಿದ್ದು ಆರೂವರೆ ಎಕ್ಟೇರ್‌ ಪ್ರದೇಶದಲ್ಲಿ ರೈತರು ಸಿರಿಧಾನ್ಯ ಬೆಳೆಯಲು ಹೆಸರು ನೊಂದಾಯಿಸಿಕೊಂಡಿದ್ದಾರೆ. ಪಿ.ಎಂ. ಕಿಶಾನ್‌ ಯೋಜನೆಯಲ್ಲಿ 1058 ಜನ ರೈತರು ಹೆಸರು ನೊಂದಾಯಿಸಿದ್ದಾರೆ. ನರೇಗಾ ಕಾಮಗಾರಿಯಲ್ಲಿ 32 ಕಾಮಗಾರಿ ಕೈಗೊಂಡಿದ್ದು 2070 ಮಾನವ ದಿನಗಳನ್ನು ಸೃಷ್ಟಿಸಲಾಗಿದೆ. ಎಂದು ಮಾಹಿತಿ ನೀಡಿದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿ ಸತೀಶ್‌ ಮಾತನಾಡಿ, ಗ್ರಾಪಂ ಮಟ್ಟದಲ್ಲಿ ಎಲ್ಲಾ ಇಲಾಖೆಗಳ ಯೋಜನೆಗಳ ಸಮರ್ಪಕ ಅನುಷ್ಠಾನ ಇಲಾಖೆಗಳ ಕಾರ್ಯ ವೈಖರಿ ಬಗ್ಗೆ ತಿಳಿಯಲು ಕೆಡಿಪಿ ಸಭೆ ನಡೆಸುವಂತೆ ಸರ್ಕಾರ ತಿಳಿಸಿದ್ದು, ಗ್ರಾಪಂನಲ್ಲಿ ಕೆಡಿಪಿ ಸಭೆ ಆಯೋಜಿಸಲಾಗಿದೆ. ಸಭೆಯಲ್ಲಿ ಇಲಾಖಾವಾರು ಮಾಹಿತಿ, ಫಲಾನುಭವಿಗಳು, ಯೋಜನೆಗಳು, ಅಭಿವೃದ್ಧಿ ಕೆಲಸಗಳು ತಿಳಿಯುವುದರಿಂದ ಕೆಡಿಪಿ ಸಭೆ ಸಹಕಾರಿಯಾಗಿದೆ. ಗ್ರಾಮೀಣಾಭಿವೃದ್ಧಿ ಸರ್ಕಾರದ ಮೂಲ ಮಂತ್ರವಾಗಿದೆ ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುವಲ್ಲಿ ಎಲ್ಲಾ ಇಲಾಖೆಗಳ ಪಾತ್ರ ಪ್ರಮುಖಗಿದೆ ಎಂದು ತಿಳಿಸಿದರು.

ತೋಟಗಾರಿಕೆ, ರೇಷ್ಮೆ, ಆರೋಗ್ಯ, ಕಂದಾಯ, ಬೆಸ್ಕಾಂ, ಖಾದಿ ಮತ್ತು ಗ್ರಾಮೋದ್ಯೋಗ, ಶಿಕ್ಷಣ, ಪಶುಪಾಲನೆ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿರುವ ಯೋಜನೆಗಳ ಪ್ರಗತಿ ಅನುಷ್ಟಾನ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು.

ಸಭೆಯಲ್ಲಿ ಗ್ರಾಪಂ ಸದಸ್ಯ ಬೋರಯ್ಯ, ಗ್ರಾಪಂ ಮಾಜಿ ಉಪಾಧ್ಯಕ್ಷ ವಡ್ಡರಹಳ್ಳಿ ವೆಂಕಟೇಶ್‌, ತೋಟಗಾರಿಕೆ ಅಧಿಕಾರಿ ಅನಿಲ್, ರೇಷ್ಮೆ ಅಧಿಕಾರಿ ಆನಂದ್‌, ಜಾನುವಾರು ಅಧಿಕಾರಿ ಕರಿಯಪ್ಪ, ರೇಷ್ಮೆ ವಿಸ್ತರಣಾಧಿಕಾರಿ ವಸಂತರಾವ್‌, ಕರ್ನಾಟಕ ಗ್ರಾಮೀಣ ಬ್ಯಾಂಕ್‌ ವ್ಯವಸ್ಥಾಪಕ ಶಿವಕುಮಾರ್‌, ಖಾದಿ ಗ್ರಾಮೋದ್ಯೋಗ ಇಲಾಖೆ ಅಧಿಕಾರಿ ಸಿ. ಮಂಜುಳಾದೇವಿ, ಆರೋಗ್ಯ ಇಲಾಖೆ ಶಿವರಾಮಯ್ಯ, ಮುಖ್ಯಶಿಕ್ಷಕಿ ಗಾಯತ್ರಿದೇವಿ, ಶಿಕ್ಷಕ ಪ್ರಕಾಶ್‌, ಬೆಸ್ಕಾಂ ನಾಗರಾಜು, ವಿಎಸ್‌ಎಸ್‌ಎನ್‌ ರೇಣುಕಾಮೂರ್ತಿ, ಸಾವಿತ್ರಮ್ಮ, ಕಂದಾಯ ಇಲಾಖೆ ವೆಂಕಟೇಶ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.