ದೇಶದ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡಿ

ಮೋದಿ ಮತ್ತೊಮ್ಮೆ ಪ್ರಧಾನಿಯನ್ನಾಗಿಸಿಚುನಾವಣೆಯಲ್ಲಿ ಆಶೀರ್ವದಿಸುವಂತೆ ಸಂಗಣ್ಣ ಮನವಿ

Team Udayavani, Apr 20, 2019, 1:39 PM IST

ಸಿಂಧನೂರು: ಕೊಪ್ಪಳ ಲೋಕಸಭೆ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಮತದಾರರಿಗೆ ಕರಪತ್ರ ನೀಡಿ ಮತಯಾಚಿಸಿದರು.

ಸಿಂಧನೂರು: ಕಳೆದ ಐದು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅನೇಕ ಅಭಿವೃದ್ಧಿ ಕಾಮಗಾರಿ ಜಾರಿಗೆ ತಂದಿದೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಯೋಜನೆಗಳು ದೇಶದಲ್ಲಿ ಜಾರಿಯಾಗಲು ಮತ್ತೂಮ್ಮೆ ಬಿಜೆಪಿಗೆ ಮತ ಹಾಕಬೇಕು ಎಂದು ಕೊಪ್ಪಳ ಲೋಕಸಭೆ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಹೇಳಿದರು.

ತಾಲೂಕಿನ ಆರ್‌.ಎಚ್‌ ನಂ-3ರಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಐದು ವರ್ಷದಲ್ಲಿ ಇಡೀ ವಿಶ್ವವೇ ಭಾರತದತ್ತ ನೋಡುವಂತೆ ಮಾಡಿದ ವ್ಯಕ್ತಿ ನರೇಂದ್ರ ಮೋದಿ. ಅವರಿಗೆ ಇನ್ನೂ ಸ್ವಲ್ಪ ಕಾಲಾವಕಾಶ ಕೊಟ್ಟರೆ ಭಾರತವನ್ನು ನಂಬರ್‌
1 ಮಾಡಲು ಮುಂದಾಗುತ್ತಾರೆ. ಆದ್ದರಿಂದ ಪ್ರತಿಯೊಬ್ಬರೂ ಮತ್ತೂಮ್ಮೆ ಬಿಜೆಪಿಗೆ ಮತ ಹಾಕಬೇಕು. ಕಳೆದ ಬಾರಿ ಆಶೀರ್ವದಿಸಿದಂತೆ ಈ ಬಾರಿಯೂ ನನಗೆ ಮತ ಹಾಕಿ ಗೆಲ್ಲಿಸಬೇಕು ಎಂದು
ಮನವಿ ಮಾಡಿದರು.

ತಾಲೂಕು ಅಧ್ಯಕ್ಷ್ಯ ಅಮರೇಗೌಡ ವಿರುಪಾಪೂರ ಮಾತನಾಡಿ, ಲೋಕಸಭೆ ಚುನಾವಣೆ ರೈತರ ಚುನಾವಣೆಯಾಗಿದ್ದು, ರೈತರ ಏಳ್ಗೆಗಾಗಿ ಬಿಜೆಪಿ ಬೆಂಬಲಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಸಂಗಣ್ಣ ಕರಡಿ ಸಿಂಧನೂರು ತಾಲೂಕಿನಲ್ಲಿ ಪ್ರಚಾರ ಕಾರ್ಯದಲ್ಲಿಯೂ ಬಿಡುವು
ಮಾಡಿಕೊಂಡು ನಾನಾ ದೇವಸ್ಥಾನಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದರು.ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ , ಸದಸ್ಯ ಎನ್‌. ಶಿವನಗೌಡ ಗೊರೇಬಾಳ, ದೇವೇಂದ್ರಪ್ಪ,ಪರಮೇಶ್ವರಪ್ಪ ಇತರರು ಇದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಸದ್ಯ ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌ "ಗಾಳಿಪಟ-2' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆಯೇ ಗಣೇಶ್‌ ಅಭಿನಯಿಸಲಿರುವ ಮುಂಬರುವ ಚಿತ್ರದ ಕುರಿತಾದ...

  • ನಟ ಶ್ರೀಮುರುಳಿ ಅಭಿನಯದ "ಮದಗಜ' ಚಿತ್ರ ಆರಂಭದಿಂದಲೂ ನಾನಾ ವಿಚಾರಗಳಿಗೆ ಸುದ್ದಿಯಾಗುತ್ತಲೇ ಇದೆ. ಮುಖ್ಯವಾಗಿ ಚಿತ್ರದ ನಾಯಕಿಯರ ಕುರಿತಾಗಿ ಸುದ್ದಿಯಾಗಿದ್ದೇ...

  • ಇಲ್ಲಿಯವರೆಗೆ ತನ್ನ ಹಾಟ್‌ ಆ್ಯಂಡ್‌ ಬೋಲ್ಡ್‌ ಪಾತ್ರಗಳ ಮೂಲಕ ಸಿನಿಪ್ರಿಯರ ಗಮನ ಸೆಳೆದಿದ್ದ "ಗಂಡ ಹೆಂಡತಿ' ಖ್ಯಾತಿಯ ನಟಿ ಸಂಜನಾ ಗಲ್ರಾನಿ ಈಗ ರೆಟ್ರೋ ಲುಕ್‌ನಲ್ಲಿ,...

  • ಕನ್ನಡದಲ್ಲಿ "ಗಣಪ' ಹಾಗು "ಕರಿಯ 2' ಸಿನಿಮಾಗಳ ನಂತರ ಸಂತೋಷ್‌ ಹೊಸದೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಇನ್ನೂ ಹೆಸರಿಡದ ಚಿತ್ರದ ಚಿತ್ರೀಕರಣ ಈಗಾಗಲೇ ಸದ್ದಿಲ್ಲದೆಯೇ...

  • ಸಾಹಸ ಸಿಂಹ ಡಾ.ವಿಷ್ಣುವರ್ಧನ್‌ ಅವರ ಜಯನಗರದ ಹಳೆಯ ಮನೆಯ ಜಾಗದಲ್ಲಿ ಹೊಸ ಮನೆ ತಲೆ ಎತ್ತಲಿದೆ! ಹೌದು, ಡಾ.ವಿಷ್ಣುವರ್ಧನ್‌ ಕುಟುಂಬ ಅವರ ಹಳೆಯ ಮನೆಯ ಜಾಗದಲ್ಲೇ ಹೊಸ...