ಪಪಂ ಫೈಟ್‌: 43 ಜನ ಅಖಾಡದಲ್ಲಿ

17 ಪಕ್ಷೇತರ ಅಭ್ಯರ್ಥಿಗಳು ಮತಯಂತ್ರಗಳಿಗೆ ಪೊಲೀಸ್‌ ಕಾವಲು

Team Udayavani, Nov 6, 2019, 3:39 PM IST

ಸಾಗರ: ತಾಲೂಕಿನ ಕಾರ್ಗಲ್‌- ಜೋಗ ಪಪಂನ ಒಟ್ಟು 11 ವಾರ್ಡ್‌ಗಳಿಗೆ ನ. 12ಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಅಂತಿಮವಾಗಿ 43 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಧಿಕಾರಿ, ತಹಶೀಲ್ದಾರ್‌ ಚಂದ್ರಶೇಖರ್‌ ನಾಯ್ಕ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಮಪತ್ರ ವಾಪಸ್‌ ಪಡೆಯಲು ಸೋಮವಾರ ಕೊನೆಯ ದಿನವಾಗಿತ್ತು. ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಎಲ್ಲಾ 11 ವಾರ್ಡ್‌ಗಳಿಗೂ ಅಭ್ಯರ್ಥಿಗಳನ್ನು ನಿಲ್ಲಿಸಲಾಗಿದೆ. ನಾಲ್ಕು ವಾರ್ಡ್‌ಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

17 ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಈಗಾಗಲೇ 60 ಮತಯಂತ್ರಗಳನ್ನು ಕಾರ್ಗಲ್‌ ಸರ್ಕಾರಿ ಪ್ರೌಢಶಾಲೆಯಲ್ಲಿನ ಭದ್ರತಾ ಕೊಠಡಿಯಲ್ಲಿ ಪೊಲೀಸ್‌ ಬೆಂಗಾವಲಿನಲ್ಲಿ ಇರಿಸಲಾಗಿದೆ ಎಂದು ಮಾಹಿತಿ ನೀಡಿದರು.

ನ. 12ರಂದು ಚುನಾವಣೆ ನಡೆಯಲಿದ್ದು, 14ರಂದು ಮತ ಎಣಿಕೆ ನಡೆಯಲಿದೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ನೀತಿ ಸಂಹಿತೆ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

2001ರಲ್ಲಿ ಜೋಗ- ಕಾರ್ಗಲ್‌ ಪಟ್ಟಣ ಪಂಚಾಯತ್‌ ಆಗಿ ಘೋಷಣೆಯಾದ ನಂತರ ಈಗ ನಡೆಯುತ್ತಿರುವುದು ನಾಲ್ಕನೇ ಚುನಾವಣೆ. 2002ರಲ್ಲಿ ಮೊದಲ ಬಾರಿಗೆ ಜೆಡಿಎಸ್‌ ಆಡಳಿತ ಚುಕ್ಕಾಣಿ ಹಿಡಿದಿತ್ತು.

2008ರಲ್ಲಿ ಬಿಜೆಪಿ ಅಧಿಕಾರ ಹಿಡಿದಿದ್ದರೆ, 2014ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿತ್ತು. ಈಗ ಯಾವ ಪಕ್ಷ ಅಧಿಕಾರ ಪಡೆಯಬಹುದು ಎಂಬ ಕುತೂಹಲ ಮೂಡಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ