ನಾಲ್ಕು ವರ್ಷ ಧರಣಿ ನಡೆಸಿದ್ರೂ ದೊರಕಿಲ್ಲ ನ್ಯಾಯ

ಪರಿಹಾರದ ನಿರೀಕ್ಷೆಯಲ್ಲೇ ಹತ್ತಾರು ರೈತರ ಸಾವು

Team Udayavani, Jul 21, 2019, 12:47 PM IST

ಸೇಡಂ: ಪಟ್ಟಣದ ಸಹಾಯಕ ಆಯುಕ್ತರ ಕಚೇರಿ ಎದುರು ರಾಜಶ್ರೀ ಸಿಮೆಂಟ್ ಕಾರ್ಖಾನೆ ವಿರುದ್ಧ ನಿರಂತರ ಧರಣಿ ನಡೆಸುತ್ತಿರುವ ರೈತರು.

ಸೇಡಂ: ತಾಲೂಕಿನ ಮಳಖೇಡ ಗ್ರಾಮದಲ್ಲಿರುವ ಅಲ್ಟ್ರಾಟೆಕ್‌ ರಾಜಶ್ರೀ ಸಿಮೆಂಟ್ ಕಾರ್ಖಾನೆ ಮೋಸ ಮಾಡಿದೆ ಎಂದು ಆರೋಪಿಸಿ ಹಂಗನಹಳ್ಳಿ ಮತ್ತು ನೃಪತುಂಗ ನಗರದ ರೈತರು ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿ ಶನಿವಾರಕ್ಕೆ ನಾಲ್ಕು ವರ್ಷ ಪೂರೈಸಿದೆ.

ಪಟ್ಟಣದ ಸಹಾಯಕ ಆಯುಕ್ತರ ಕಚೇರಿ ಎದುರು ಕಾರ್ಮಿಕ ಖಾತೆ ಮಾಜಿ ಸಚಿವ ಎಸ್‌.ಕೆ. ಕಾಂತಾ ನೇತೃತ್ವದಲ್ಲಿ ನಡೆಯುತ್ತಿರುವ ರೈತರ ಅನಿರ್ದಿಷ್ಟಾವಧಿ ಧರಣಿ ನಾಲ್ಕು ವರ್ಷ ಪೂರೈಸಿದರೂ ಪರಿಹಾರ ದೊರಕುವ ಯಾವ ಮುನ್ಸೂಚನೆಯೂ ಕಾಣುತ್ತಿಲ್ಲ.

ಕೇವಲ ಚುನಾವಣೆಗಳು ಬಂದಾಗ ಧರಣಿ ಸ್ಥಳಕ್ಕೆ ಬಂದು ಸಮಜಾಯಿಷಿ ನೀಡುತ್ತಿದ್ದ ರಾಜಕಾರಣಿಗಳು ನಂತರ ಒಮ್ಮೆಯೂ ಇತ್ತ ಸುಳಿದಿಲ್ಲ. ಹಗಲು-ರಾತ್ರಿ ಎನ್ನದೆ, ಬಿಸಿಲು, ಮಳೆ, ಚಳಿಯನ್ನು ಲೆಕ್ಕಿಸದೇ ರೈತರು ಧರಣಿ ಕುಳಿತ ಸ್ಥಳ ಬಿಟ್ಟು ಕದಲುತ್ತಿಲ್ಲ.

20 ಜುಲೈ 2015 ರಂದು ಪ್ರಾರಂಭವಾದ ಧರಣಿ ಇಂದಿಗೂ ಮುಂದುವರಿದಿದೆ. ಅನೇಕ ರೈತರು ಪರಿಹಾರದ ನಿರೀಕ್ಷೆಯಲ್ಲೇ ಮೃತಪಟ್ಟಿದ್ದಾರೆ. ಇಷ್ಟಾದರೂ ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳುತ್ತಿಲ್ಲ. ಕೇವಲ ನಾಮಕೆವಾಸ್ತೇ ಎನ್ನುವಂತೆ ಅಧಿಕಾರಿಗಳ ಸಭೆ ಕರೆದು ಕೈ ತೊಳೆದುಕೊಳ್ಳುತ್ತಿದೆ ಎನ್ನುವುದು ರೈತರ ದೂರಾಗಿದೆ.

ರೈತರ ದೂರು: ಆರಂಭದಲ್ಲಿ ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಧರಣಿ ನಿರತರ ಸ್ಥಳಕ್ಕೆ ತೆರಳಿ ಚರ್ಚಿಸಿ, ಭರವಸೆ ನೀಡಿದ್ದರು. ತದನಂತರ ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ ಪರಿಣಾಮಕಾರಿಯಾಗಿ ಧ್ವನಿ ಎತ್ತುತ್ತಿಲ್ಲ ಎನ್ನುವುದು ರೈತರ ದೂರಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಚಿಕ್ಕೋಡಿ: ತಾಲೂಕಿನ ನಾಗರಮುನ್ನೋಳ್ಳಿ ಗ್ರಾಮದಲ್ಲಿ ಸಮರ್ಪಕ ಬಸ್‌ ನಿಲ್ಲಿಸಬೇಕೆಂದು ಒತ್ತಾಯಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಸಂಘಟನೆಯಿಂದ ಗುರುವಾರ...

  • ಚಿಕ್ಕಮಗಳೂರು: ಬೇಸಿಗೆ ಕಾಲ ಆರಂಭವಾಗುತ್ತಿದ್ದು, ಕಾಡು ಪ್ರಾಣಿಗಳ ಕುಡಿಯುವ ನೀರಿಗಾಗಿ ಜಲಮೂಲ ಉಳಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕಾರ್ಯಪ್ರವೃತ್ತವಾಗಿದೆ...

  • ಬಳ್ಳಾರಿ: ಶರಣರ ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗಬಾರದು. ಅವರ ವ್ಯಕ್ತಿತ್ವ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು...

  • ಬಾಗಲಕೋಟೆ: ಕೂಲಿ ಕಾರ್ಮಿಕರೊಂದಿಗೆ ತಾವು ಸಹ ಕೆಲಸದಲ್ಲಿ ಸಾಥ್‌ ನೀಡುವ ಮೂಲಕ ಜಿಪಂ ಸಿಇಒ ಗಂಗೂಬಾಯಿ ಮಾನಕರ ಕಾರ್ಮಿಕರಿಗೆ ಪ್ರೇರಣೆಯಾದರು. ಜಿಪಂ ಹಾಗೂ ವಾರ್ತಾ...

  • ಹುಣಸಗಿ: ನಾಡಿನ ಕಲೆ-ಸಂಸ್ಕೃತಿ-ಸಾಹಿತ್ಯ ಉಳಿಸುವ ನಿಟ್ಟಿನಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಶ್ರಮಿಸುತ್ತಿದ್ದು, ಇವುಗಳನ್ನು ಉಳಿಸಿ-ಬೆಳೆಸುವಲ್ಲಿ ಸಮುದಾಯದ ಸಹಕಾರ...

ಹೊಸ ಸೇರ್ಪಡೆ