ಬಸ್‌ ನಿಲುಗಡೆಗೆ ತಾತ್ಕಾಲಿಕ ಕ್ರಮಕ್ಕೆ ಒತ್ತಾಯ

Team Udayavani, Oct 31, 2019, 12:18 PM IST

ಶಹಾಪುರ: ನಗರದ ಹಳೇ ಬಸ್‌ ನಿಲ್ದಾಣ ಮುಂಭಾಗದ ರಸ್ತೆಯಲ್ಲಿ ಹೆಚ್ಚಾಗಿ ರಸ್ತೆ ಅಪಘಾತ ಸಂಭವಿಸುತ್ತಿದ್ದು, ಬಸ್‌ ನಿಲುಗಡೆಗೆ ತಾತ್ಕಾಲಿಕ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಇಲ್ಲಿನ ನಾಗರಿಕ ಹೋರಾಟ ಒಕ್ಕೂಟ ಸಮಿತಿ ರಸ್ತೆ ತಡೆ ನಡೆಸಿ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಅವರಿಗೆ ಮನವಿ ಸಲ್ಲಿಸಿತು.

ಅ. 29ರಂದು ನಗರದಲ್ಲಿ ನಡೆದ ಅಪಘಾತದಲ್ಲಿ ಬಾಲಕ ಕೆಎಸ್‌ಆರ್‌ಟಿಸಿ ಬಸ್‌ನ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟರೆ, ಜೊತೆಯಲ್ಲಿದ್ದ ಬಾಲಕನ ಅಜ್ಜಿ ನೂರಜಾಹ ತೀವ್ರಗಾಯಗೊಂಡಿದ್ದು, ಕಲಬುರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಸಾವು ನೋವಿನ ನಡುವೆ ಹೋರಾಡುತ್ತಿದ್ದಾಳೆ. ಕೂಲಿ ಮಾಡಿ ಬದುಕುವ ಈ ಬಡ ಕುಟುಂಬಕ್ಕೆ ಜಿಲ್ಲಾಡಳಿತ ಸೂಕ್ತ ಸ್ಪಂದನೆ ನೀಡಬೇಕಿದೆ.

ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು. ಹಳೇ ಬಸ್‌ ನಿಲ್ದಾಣ ಕಾಮಗಾರಿ ಆಮೆಗತಿಯಲ್ಲಿ ಸಾಗಿದ್ದು, ಬಸ್‌ ನಿಲುಗಡೆಗೆ ಸೂಕ್ತ ಸ್ಥಳವಕಾಶ ಇಲ್ಲದ ಕಾರಣ ಹೆದ್ದಾರಿ ಮೇಲೆ ಬಸ್‌ ನಿಲ್ಲುತ್ತಿವೆ.

ಅಲ್ಲದೇ ಹೆದ್ದಾರಿ ಬದಿಯಲ್ಲಿ ಆಟೋಗಳ ನಿಲುಗಡೆ ಮತ್ತು ಇತರೆ ವಾಹನಗಳ ಅಡ್ಡಾದಿಡ್ಡಿ ನಿಲುಗಡೆಯಿಂದಾಗಿ ನಿತ್ಯ ಒಂದಿಲ್ಲೊಂದು ಅವಘಡಗಳು ಸಂಭವಿಸುತ್ತಿವೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಬಸ್‌ ನಿಲ್ದಾಣದ ಎರಡು ಗೇಟ್‌ ಮುಂಭಾಗದಲ್ಲಿ ನಿರ್ಮಿಸಲಾದ ರಸ್ತೆ ವಿಭಜಕ ಒಡೆದು ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು. ಸರ್ಕಾರಿ ಬಾಲಕಿಯರ ಕಾಲೇಜಿಗೆ ಹೋಗಲು ನಿಲ್ದಾಣ ಎದುರುಗಡೆ ಇರುವ ರಸ್ತೆ ವಿಭಜಕವನ್ನು ಒಡೆದು ಸುಗಮವಾಗಿ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಅನುಕೂಲ ಕಲ್ಪಿಸಬೇಕು. ಕೂಡಲೇ ನಿಲ್ದಾಣ ಕಾಮಗಾರಿ ಮುಗಿಸಿ ಸಾರ್ವಜನಿಕ ಸೇವೆಗೆ ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಸೈಯ್ಯದ್‌ ಇಸಾಕ ಹುಸೇನಿ ಖಾಲಿದ್‌, ತಾಪಂ ಸದಸ್ಯ ಪರಶುರಾಮ ಕುರುಕುಂದಿ, ಮಲ್ಲಿಕಾರ್ಜುನ ಗಂಗಾಧರಮಠ, ಲಾಲನಸಾಬ ಖುರೇಶಿ, ಶಿವಕುಮಾರ ತಳವಾರ, ಅಪ್ಪಣ್ಣ ದಶವಂತ, ಸತೀಶ ಪಂಚಬಾವಿ, ರವಿ ಯಕ್ಷಂತಿ, ಉಮೇಶ ಬಾಗೇವಾಡಿ, ಭಾಷಾ ಪಟೇಲ್‌, ನಾಗಣ್ಣ ಬಡಿಗೇರ, ಸಂಗಯ್ಯ ಸ್ವಾಮಿ, ಅಮೃತ ಹೂಗಾರ, ಶಿವುಪುತ್ರ ಜವಳಿ, ರಾಯಪ್ಪ ಸಾಲಿಮನಿ, ಮೌನೇಶ ನಾಟೇಕಾರ ಸೇರಿದಂತೆ ವಿವಿಧ ಸಂಘಟನೆ ಮುಖಂಡರು ಇದ್ದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • „ಡಿ.ಎಸ್‌. ಕೊಪ್ಪದ ಸವದತ್ತಿ: ಪಟ್ಟಣದಲ್ಲಿ ಟ್ರಾಫಿಕ್‌ ಸಮಸ್ಯೆಗೆ ಕಡಿವಾಣ ಹಾಕಲು ಏಕಮುಖೀ ಸಂಚಾರ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಆದರೆ ಸಾರಿಗೆ ಬಸ್‌ಗಳು...

  • ಜಮಖಂಡಿ: ನಗರದಲ್ಲಿ ಮಾವಾ ಮಾರಾಟ ದಂಧೆ ಜೋರಾಗಿದೆ. ತಂಬಾಕು, ಅಡಿಕೆ ಉಪಯೋಗಿಸಿ ಮನೆಯಲ್ಲಿ ಮಾವಾ ಸಿದ್ಧಗೊಳಿಸಿ ಮಾರಾಟ ಮಾಡುವ ದಂಧೆ ರಾಜಾರೋಷವಾಗಿ ನಡೆಯುತ್ತಿದ್ದು,...

  • ಬಸವರಾಜ ಹೊಂಗಲ್‌ ಧಾರವಾಡ: ಈ ಜಿಲ್ಲೆ ಸಹಕಾರಿ ಕ್ಷೇತ್ರಕ್ಕೆ ಕೊಟ್ಟ ಕೊಡುಗೆಯನ್ನು ದೇಶವಷ್ಟೇ ಅಲ್ಲ ಏಷಿಯಾ ಖಂಡವೇ ಸ್ಮರಿಸುತ್ತದೆ. ಇಲ್ಲಿ ಸರ್ಕಾರಕ್ಕೂ ಮೊದಲೇ...

  • ಇಂಧೋರ್: ಭಾರತದ ವೇಗಿಗಳ ಬಿಗು ದಾಳಿಗೆ ನಲುಗಿದ ಬಾಂಗ್ಲಾದೇಶ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 150 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದೆ. ಮುಶ್ಫಿಕರ್...

  • ಚಿಕ್ಕಮಗಳೂರು: ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಸಾಂತ್ವನ ಹೇಳುವುದರೊಂದಿಗೆ ಅವರಿಗೆ ಅಗತ್ಯ ಕಾನೂನಡಿ ನೆರವು, ಚಿಕಿತ್ಸೆ ಹಾಗೂ ಪರಿಹಾರ ಕಲ್ಪಿಸಲು...