ಅನುದಾನ ದುರ್ಬಳಕೆ ಆರೋಪ

ತಾಪಂ ಕಚೇರಿ ಎದುರು ಕೆಆರ್‌ಡಿಎಸ್‌ಎಸ್‌ ಕಾರ್ಯಕರ್ತರ ಧರಣಿ

Team Udayavani, Aug 14, 2019, 11:52 AM IST

ಶಹಾಪುರ: ತಾಲೂಕು ಪಂಚಾಯಿತಿ ಕಚೇರಿ ಎದುರು ಕೆಆರ್‌ಡಿಎಸ್‌ಎಸ್‌ ಕಾರ್ಯಕರ್ತರು ಧರಣಿ ನಡೆಸಿ ಕಂದಾಯ ಇಲಾಖೆ ಅಧಿಕಾರಿ ವೆಂಕಟೇಶ ಅವರಿಗೆ ಮನವಿ ಸಲ್ಲಿಸಿದರು.

ಶಹಾಪುರ: ತಾಲೂಕಿನ ಹಲವಾರು ಗ್ರಾಮಗಳಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು 14ನೇ ಹಣಕಾಸು ಯೋಜನೆ ಅನುದಾನ ಸದ್ಬಳಕೆ ಮಾಡಿಕೊಳ್ಳದೆ ಅಕ್ರಮವಾಗಿ ಬಳಸಿಕೊಂಡಿದ್ದು, ಕೂಡಲೇ ತನಿಖೆ ನಡಸಬೇಕೆಂದು ಆಗ್ರಹಿಸಿ ಇಲ್ಲಿನ ಕೆಆರ್‌ಡಿಎಸ್‌ಎಸ್‌ ಕಾರ್ಯಕರ್ತರು ತಾಪಂ ಕಚೇರಿ ಮುಂದೆ ಧರಣಿ ಕೈಗೊಂಡು ಸ್ಥಳಕ್ಕೆ ಆಗಮಿಸಿದ ಕಂದಾಯ ಇಲಾಖೆ ಅಧಿಕಾರಿ ವೆಂಕಟೇಶ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಶಿವಪುತ್ರ ಜವಳಿ, ತಾಲೂಕಿನ ಮದ್ರಿಕಿ, ಕಾಡಂಗೇರಾ, ಗುಲಸರಂ, ಖಾನಾಪುರ, ತಡಿಬಿಡಿ, ಉಕ್ಕಿನಾಳ, ಗೋಗಿ ಪೇಟ ಗ್ರಾಮಗಳಲ್ಲಿ 14ನೇ ಹಣಕಾಸು ಯೊಜನೆಯಡಿ ಬರುವ ಅನುದಾನ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳದೆ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಆಯಾ ಗ್ರಾಪಂ ಅಧ್ಯಕ್ಷರು ಜನಪ್ರತಿನಿಧಿಗಳು ಶಾಮೀಲಾಗಿ ಅನುದಾನವನ್ನು ಅಕ್ರಮವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಗೋಗಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಬಹುತೇಕ ಗ್ರಾಪಂ ಪ್ರಭಾರಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಅಧ್ಯಕ್ಷರು ಕೊಟ್ಟಿ ದಾಖಲಾತಿಗಳನ್ನು ಸೃಷ್ಟಿಸಿ ಲಕ್ಷಾಂತರ ಅನುದಾನ ಅಕ್ರಮವಾಗಿ ಬಳಸಿಕೊಂಡಿದ್ದಾರೆ. ಈ ಕುರಿತು ಕೂಡಲೇ ಸಮಗ್ರ ತನಿಖೆ ಕೈಗೊಂಡು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

2018-19ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆಯಡಿ ಆಯ್ಕೆಗೊಂಡ ಗ್ರಾಮಗಳಲ್ಲಿ ಸಮರ್ಪಕವಾಗಿ ಕಾಮಗಾರಿ ನಿರ್ವಹಿಸಿರುವುದಿಲ್ಲ. ಕಳಪೆ ಮಟ್ಟದಿಂದ ಕಾಮಗಾರಿ ನಡೆದಿವೆ ಎಂದು ಆರೋಪಿಸಿದರು.

ಅಲ್ಲದೆ ದಲಿತರ ಕೇರಿಯಲ್ಲಿ ಚರಂಡಿ ಹುಳೆತ್ತಲು ಸಹ ಗ್ರಾಪಂ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆ. ಕೂಡಲೇ ಸಮರ್ಪಕ ಕರ್ತವ್ಯ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಅವರು ಆಗ್ರಹಿಸಿದರು.

ಬಾಲರಾಜ ಖಾನಾಪುರ, ಸಂತೋಷ ನಾಟೇಕಾರ, ಮಲ್ಲಿಕಾರ್ಜುನ ಹುರಸಗುಂಡಗಿ, ಮರೆಪ್ಪ ಕುದರಿ, ಯಲ್ಲಾಲಿಂಗ ಹೊಸಮನಿ, ಶರಣಪ್ಪ ಕೋಟೆ, ಹಣಮಂತ ರೋಜಾ, ಶಿವಲಿಂಗ ಹಸನಾಪುರ ಸೇರಿದಂತೆ ದಸಂಸ ಕಾರ್ಯಕರ್ತರು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ