ಕುವೆಂಪು ಮನುಕುಲದ ಮಾರ್ಗದರ್ಶಕ

ವಿಶ್ವ ಮಾನವ ದಿನಾಚರಣೆ ಸಾಮಾಜಿಕ ಚಿಂತನೆ-ಜೀವನದ ಮೌಲ್ಯ ಪ್ರತಿಯೊಬ್ಬರ ಬದುಕಿಗೆ ಕೊಡುಗೆ

Team Udayavani, Dec 30, 2019, 12:23 PM IST

30-December-5

ಶಹಾಪುರ: ಕನ್ನಡಾಂಬೆ ವರ ಪುತ್ರರಾಗಿ ತಮ್ಮ ಸರಳ ಸಾಹಿತ್ಯದೊಂದಿಗೆ ಸಾಮಾಜಿಕ ಚಿಂತನೆ ಹಾಗೂ ಜೀವನದ ಮೌಲ್ಯ ಪ್ರತಿಯೊಬ್ಬರ ಬದುಕಿಗೆ ಕೊಡುಗೆಯಾಗಿ ನೀಡಿದ ರಾಷ್ಟ್ರಕವಿ ಕುವೆಂಪು ಮನುಕುಲದ ಮಾರ್ಗದರ್ಶಕರಾಗಿದ್ದರು ಎಂದು ಸಾಹಿತಿ ಶಿವಣ್ಣ ಇಜೇರಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಕಸಾಪ ಭವನದಲ್ಲಿ ತಾಲೂಕು ಆಡಳಿತದ ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜೀವನಾದರ್ಶಗಳ ಪ್ರತಿಬಿಂಬಗಳಂತೆ ಹಲವಾರು ಗ್ರಂಥ ಭಂಡಾರಗಳನ್ನು ನಾಡಿಗೆ ಬಳುವಳಿಯಾಗಿ ನೀಡಿದ ಅವರು ಅಜರಾಮರಾಗಿದ್ದಾರೆ. ನಾಡು, ದೇಶ ಪರಂಪರೆ ಅಲ್ಲದೆ ಜೀವನ, ಸಂಸಾರ ಬದುಕಿನ ಕುರಿತು ಸಾಕಷ್ಟು ಮಜಲುಗಳ ಬಗ್ಗೆ ಸಮರ್ಪಕವಾಗಿ ಕಾವ್ಯ ಮತ್ತು ಕೃತಿಗಳ ಮೂಲಕ ತಿಳಿಸಿಕೊಟ್ಟ ಕುವೆಂಪು ಸ್ಮರಣೀಯರಾಗಿದ್ದಾರೆ ಎಂದು ಹೇಳಿದರು.

ಸರ್ಕಾರ ಅವರ ಜನ್ಮ ದಿನವನ್ನು ವಿಶ್ವ ಮಾನವ ದಿನವನ್ನಾಗಿ ಆಚರಿಸುತ್ತಿರುವದು ಅರ್ಥಬದ್ಧವಾಗಿದೆ ಎಂದು ಹೇಳಿದರು. ಸಾಹಿತಿ ವಿಶ್ವರಾಧ್ಯ ಸತ್ಯಂಪೇಟೆ ಮಾತನಾಡಿ, ಕನ್ನಡ ಶ್ರೀಮಂತಗೊಳಿಸಿದ ಮಹಾನ್‌ ಚೇತನ ಕುವೆಂಪು. ಅವರ ಆದರ್ಶಗಳು ಮುಂದಿನ ಪೀಳಿಗೆಗೆ ಸೂಕ್ತ ಮಾರ್ಗವಾಗಬೇಕು. ವಿಶ್ವ ಮಾನವ ಸ್ವರೂಪಿಯಾದ ಅವರು, ಅವರ ನಡೆ ನುಡಿ ಬರಹಗಳಿಂದ ಸಾಕಷ್ಟು ಕಲಿಯಬೇಕಾಗಿದೆ ಎಂದು ಹೇಳಿದರು.

ತಹಶೀಲ್ದಾರ್‌ ಜಗನಾಥರಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಅಧ್ಯಕ್ಷ ಸಿದ್ದಲಿಂಗಣ್ಣ ಆನೇಗುಂದಿ, ಹಿರಿಯ ಸಾಹಿತಿ ದೊಡ್ಡಬಸ್ಸಪ್ಪ ಬಳ್ಳೂರಿಗಿ, ತಾಪಂ ಅಧ್ಯಕ್ಷ ನಾಗಣ್ಣ ಪೂಜಾರಿ, ನಗರಸಭೆ ಪೌರಾಯುಕ್ತ ಬಸವರಾಜ ಶಿವಪೂಜೆ, ಡಾ| ಅಬ್ದುಲ್‌ ಕರಿಂ, ಡಾ| ಮೋನಪ್ಪ ಶಿರವಾಳ, ಗುರುಬಸವಯ್ಯ ಗದ್ದುಗೆ, ಸಿಡಿಪಿಒ ಟಿ.ಪಿ. ದೊಡ್ಮನಿ, ಗುಂಡಪ್ಪ ತುಂಬಗಿ ಇದ್ದರು.

ಇದೇ ಸಂದರ್ಭದಲ್ಲಿ ಉಡುಪಿ ಪೇಜಾವರ ಶ್ರೀಗಳಿಗೆ ಎರಡು ನಿಮಿಷ ಮೌನಾಚರಣೆ ನಡೆಸುವ ಮೂಲಕ ಸಂತಾಪ ಸೂಚಿಸಿದರು.

ಕವಿತಾ ಪ್ರಾರ್ಥಿಸಿದರು. ದೇವಿಂದ್ರಪ್ಪ ಕನ್ಯಾಕೋಳೂರ ಸ್ವಾಗತಿಸಿದರು. ಬಸವರಾಜ ಸಿನ್ನೂರ ನಿರೂಪಿಸಿದರು. ಸಂತೋಷ ಉದ್ಧಾರ ವಂದಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.