ಶಿವಮೊಗ್ಗ: 70 ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ದಾಳಿ ; ಭ್ರಷ್ಟ ಪಿಡಿಓ ಅರೆಸ್ಟ್
Team Udayavani, Jan 11, 2022, 7:10 PM IST
ಶಿವಮೊಗ್ಗ: ಲಂಚ ಸ್ವೀಕರಿಸುವಾಗ ಪಿಡಿಓಯೊಬ್ಬರು ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಭದ್ರಾವತಿ ತಾಲೂಕಿನ ಬಿಳಕಿ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ.
ಬಿಳಕಿ ಗ್ರಾಮ ಪಂಚಾಯತ್ ಪಿಡಿಓ ಡಿ.ಕೇಶವಮೂರ್ತಿ ಎಸಿಬಿ ಕೈಗೆ ಸಿಕ್ಕಿಬಿದ್ದ ಅಧಿಕಾರಿ.
ಜಮೀನಿಗೆ ಸಂಬಂಧಿತ ಎನ್ಓಸಿ ನೀಡಲು 1 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಪಿಡಿಓ ಈ ಹಿಂದೆ 5 ಸಾವಿರ ಲಂಚ ಪಡೆದುಕೊಂಡಿದ್ದ. 70 ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ಶಿವಮೊಗ್ಗ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾನೆ.
ಸದ್ಯ ಪಿಡಿಓ ಕೇಶವಮೂರ್ತಿಯನ್ನು ಬಂಧಿಸಿ, ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ದಾಳಿಯಲ್ಲಿ ಇನ್ಸ್ಪೆಕ್ಟರ್ ವಸಂತ್ ಕುಮಾರ್, ಪಿಎಸ್ಐ ಇಮ್ರಾನ್ ಬೇಗ್ ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವೈಜ್ಞಾನಿಕ ಕಾಮಗಾರಿಯಿಂದ ಪ್ರವಾಹ ಸ್ಥಿತಿ
ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಉದ್ದೇಶದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ: ಈಶ್ವರಪ್ಪ
ಸೊರಬ : ಎಸ್ಸೆಸ್ಸೆಲ್ಸಿ ಯಲ್ಲಿ ಸಮಾನ ಅಂಕ ಗಳಿಸುವ ಮೂಲಕ ಗಮನ ಸೆಳೆದ ಅವಳಿ ಸಹೋದರಿಯರು
ಮಳೆಯಿಂದ ಬೆಳೆ ನಷ್ಟ: ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು; ಮಾಜಿ ಶಾಸಕ ಮಧು ಬಂಗಾರಪ್ಪ
ಸಾಗರ: ನೆಡುತೋಪು ಕಾವಲು ಕಾಯುತ್ತಿದ್ದವನಿಂದಲೇ ಪ್ಲಾಂಟೇಶನ್ನಿಂದ ಮರ ಕಳ್ಳತನ; ಆರೋಪಿಗಳ ಬಂಧನ