Sagara: ಸಂವಿಧಾನದ ಆಶಯ, ಆತ್ಮಕ್ಕೆ ದ್ರೋಹ ಮಾಡುತ್ತಿರುವ ಅನಂತಕುಮಾರ್ ಹೆಗಡೆ; ಜಯಂತ್ ಆಕ್ರೋಶ

Team Udayavani, Jan 16, 2024, 3:57 PM IST

Sagara: ಸಂವಿಧಾನದ ಆಶಯ, ಆತ್ಮಕ್ಕೆ ದ್ರೋಹ ಮಾಡುತ್ತಿರುವ ಅನಂತಕುಮಾರ್ ಹೆಗಡೆ; ಜಯಂತ್ ಆಕ್ರೋಶ

ಸಾಗರ: ಕಾರವಾರ ಸಂಸದ ಅನಂತಕುಮಾರ್ ಹೆಗಡೆ ಮಾತು ದೇಶದ ಸಂವಿಧಾನದ ಆಶಯಗಳಿಗೆ, ಆತ್ಮಕ್ಕೆ ದ್ರೋಹ ಮಾಡುವಂತಹದ್ದು. ಸಿದ್ದರಾಮಯ್ಯ ರಾಜ್ಯಕ್ಕೆ ನೀಡಿದ ಕೊಡುಗೆ ಅತ್ಯಂತ ದೊಡ್ಡದು. ಅಂತಹವರ ಬಗ್ಗೆ ಏಕವಚನದಲ್ಲಿ ಮಾತನಾಡುವ ಅನಂತಕುಮಾರ್ ಹೆಗಡೆಗೆ ನೈತಿಕತೆಯೇ ಇಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಮಂಗಳವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಸದ ಅನಂತಕುಮಾರ್ ಹೆಗಡೆ ಕುಮಟಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನೀಡಿರುವ ಹೇಳಿಕೆ ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ದೇಶದಲ್ಲಿ ಹುಟ್ಟಿದ ಎಲ್ಲ ಧರ್ಮಿಯರಿಗೆ, ಜಾತಿಯವರಿಗೆ ಸಮಾನವಾದ ಹಕ್ಕು ಇದೆ. ನಮ್ಮನಮ್ಮ ಧರ್ಮವನ್ನು ಆಚರಣೆ ಮಾಡುವ ಹಕ್ಕು ಸಂವಿಧಾನ ನಮಗೆ ನೀಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಎಲ್ಲ ಧರ್ಮಿಯರೂ ತ್ಯಾಗ ಬಲಿದಾನ ಮಾಡಿದ್ದಾರೆ. ದೇಶ ಕಟ್ಟುವಲ್ಲಿ ಎಲ್ಲ ಧರ್ಮದವರದ್ದೂ ಸಮಾನ ಪಾಲು ಇದೆ. ಎಲ್ಲರೂ ಒಟ್ಟಾಗಿರುವಾಗ ಅದನ್ನು ಕದಡಿದರೆ ಅದು ದೇಶದ್ರೋಹವಾಗುತ್ತದೆ. ಅನಂತಕುಮಾರ್ ಹೆಗಡೆ ಅಂತಹ ಕೆಲಸ ಮಾಡುತ್ತಿದ್ದು ದೇಶದ್ರೋಹದ ಮಾತುಗಳನ್ನು ಆಡುತ್ತಿದ್ದಾರೆ ಎಂದು ಹೇಳಿದರು.

ಮಸೀದಿಯನ್ನು ಕೆಡವಿ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಹೇಳಿರುವ ಅನಂತಕುಮಾರ್ ಹೆಗಡೆ ಮಾತು ಸಂವಿಧಾನ ವಿರೋಧಿ ಮತ್ತು ದೇಶದ್ರೋಹ ಹೇಳಿಕೆಯಾಗಿದೆ. ರಾಜ್ಯ ಸರ್ಕಾರ ಕೂಡಲೇ ಅನಂತಕುಮಾರ್ ಹೆಗಡೆ ಅವರನ್ನು ದೇಶದ್ರೋಹದ ಆರೋಪದ ಮೇಲೆ ತಕ್ಷಣ ಬಂಧಿಸಿ ಜೈಲಿಗೆ ಕಳಿಸಬೇಕು. ರಾಜ್ಯದಲ್ಲಿ ಅನೇಕರು ಇಂತಹ ಪ್ರಚೋದನಕಾರಿ ಮಾತು ಆಡುತ್ತಿದ್ದಾರೆ. ಕಲ್ಕಡ್ಕ ಪ್ರಭಾಕರ್ ಭಟ್ ಸಹ ಇಂತಹದ್ದೇ ಹೇಳಿಕೆ ನೀಡಿದ್ದರು. ಇಂತಹವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳದೆ ಹೋದರೆ ಎಲ್ಲ ಕಡೆ ಇದು ವ್ಯಾಪಿಸುತ್ತದೆ ಎಂದು ಹೇಳಿದರು.

ಅನಂತಕುಮಾರ್ ಮಾನಸಿಕವಾಗಿ ಸರಿ ಇಲ್ಲ: ಈ ಕುರಿತು ಪತ್ರಿಕ್ರಿಯೆ ನೀಡಿರುವ ಶಾಸಕ ಗೋಪಾಲಕೃಷ್ಣ ಬೇಳೂರು, ಅನಂತಕುಮಾರ್ ಹೆಗಡೆಯವರಿಗೆ ಆರೋಗ್ಯ ಸರಿ ಇದ್ದಂತೆ ಕಾಣುತ್ತಿಲ್ಲ. ಮಾನಸಿಕವಾಗಿ ತೀರ ಕುಗ್ಗಿದಂತೆ ಕಾಣುತ್ತಿದ್ದಾರೆ. ಫೈರ್‌ಬ್ರಾಂಡ್ ಎಂದು ಕರೆಸಿಕೊಂಡ ಮಾತ್ರಕ್ಕೆ ಯಾರನ್ನು ಬೇಕಾದರೂ ಟೀಕೆ ಮಾಡಲು ಬರುವುದಿಲ್ಲ. ಸಂಸದರಾಗಿ ರಾಜ್ಯದ ಮುಖ್ಯಮಂತ್ರಿಯವರಿಗೆ ಯಾವ ರೀತಿ ಮಾತನಾಡಬೇಕು ಎನ್ನುವುದನ್ನು ಮೊದಲು ಹೆಗಡೆಯವರು ಕಲಿಯಲಿ. ದೇವರು ಅವರಿಗೆ ಒಳ್ಳೆಯ ಬುದ್ಧಿ ಕೊಡಲಿ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಐ.ಎನ್.ಸುರೇಶಬಾಬು, ಮಧುಮಾಲತಿ, ಸೋಮಶೇಖರ ಲ್ಯಾವಿಗೆರೆ, ಸುಮಂಗಲಾ ರಾಮಕೃಷ್ಣ, ಪರಿಮಳ, ಶ್ಯಾಮಲ ದೇವರಾಜ್, ಜ್ಯೋತಿ ಕೋವಿ, ಮಹಾಬಲ ಕೌತಿ, ಮೈಕಲ್ ಡಿಸೋಜ, ಚಂದ್ರಪ್ಪ ಎಲ್., ಕೆ.ಸಿದ್ದಪ್ಪ, ಪಾರ್ವತಿ ಬೇಸೂರು, ಹೊಳೆಯಪ್ಪ, ತುಕಾರಾಂ ಶಿರವಾಳ, ಗಿರೀಶ್ ಕೋವಿ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.