ತರಕಾರಿ-ಆಹಾರ ಸರಬರಾಜಿಗೆ ವ್ಯವಸ್ಥೆ

Team Udayavani, Mar 27, 2020, 5:25 PM IST

sm-tdy-1

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಪ್‌ಕಾಮ್ಸ್‌ ನೆರವಿನಿಂದ ಪ್ರತಿ ವಾರ್ಡ್‌ನಲ್ಲಿ ತರಕಾರಿ ಮಾರಾಟ ಮಾಡಲು ಹಾಗೂ ಪ್ಯಾಕ್‌ಡ್‌ ಆಹಾರ ಮನೆ ಬಾಗಿಲಿಗೆ ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ತಿಳಿಸಿದರು.

ಬುಧವಾರ ಜಿಲ್ಲಾ ಕಾರಿ ಕಚೇರಿಯಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಈಗಾಗಲೇ ತರಕಾರಿ, ಹಾಲು ಹಣ್ಣು, ಮೀನು, ಮಾಂಸ, ದಿನಸಿ ವಸ್ತುಗಳಂತಹ ಅವಶ್ಯಕ ವಸ್ತುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೋಳಿ ಜ್ವರ ಹಿನ್ನೆಲೆಯಲ್ಲಿ ಮಾ. 31ರವರೆಗೆ ಮಾತ್ರ ಚಿಕನ್‌ ಮಾರಾಟ ನಿರ್ಬಂ ಧಿಸಲಾಗಿದೆ. ಶುಕ್ರವಾರದ ಒಳಗಾಗಿ ಹಾಪ್‌ಕಾಮ್ಸ್‌ ವತಿಯಿಂದ ವಾಹನದ ಮೂಲಕ ಪ್ರತಿ ವಾರ್ಡ್‌ನಲ್ಲಿ ನಿಗದಿತ ದರದಲ್ಲಿ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಮನೆ ಬಾಗಿಲಿಗೆ ಆಹಾರ ಪೂರೈಕೆ: ಹೊಟೇಲ್‌ ಗಳನ್ನು ಅವಲಂಬಿಸಿರುವವರನ್ನು ಗಮನದಲ್ಲಿರಿಸಿ ಮನೆ ಬಾಗಿಲಿಗೆ ಸಿದ್ಧ ಆಹಾರ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಐದು ವಾರ್ಡ್‌ಗಳಿಗೆ ಒಬ್ಬರಂತೆ ಗುತ್ತಿಗೆದಾರರನ್ನು ಗುರುತಿಸಿ, ಆಯಾ ವಾರ್ಡ್‌ಗಳಲ್ಲಿ ಬೇಡಿಕೆ ಅನುಸರಿಸಿ ಆಹಾರ ಒದಗಿಸಲು ವ್ಯವಸ್ಥೆ ಮಾಡಬೇಕು. ಕೆಲವು ಸೀಮಿತ ಮೆನು ಸಿದ್ಧಪಡಿಸಿ, ದರವನ್ನು ನಿಗದಿಪಡಿಸಬೇಕು. ಆಹಾರ ವಿತರಿಸುವವರಿಗೆ ಗುರುತಿನ ಚೀಟಿ ನೀಡಲಾಗುವುದು. ಆಹಾರದ ಗುಣಮಟ್ಟವನ್ನು ಮಹಾನಗರ ಪಾಲಿಕೆ ಖಾತ್ರಿಪಡಿಸಬೇಕು. ಇತರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಹ ಅಗತ್ಯವಿದ್ದರೆ ಈ ವ್ಯವಸ್ಥೆ ಮಾಡಬಹುದಾಗಿದೆ ಎಂದು ಅವರು ಹೇಳಿದರು.

ಆಸ್ಪತ್ರೆಗಳ ಹತ್ತಿರ ಇರುವ ಹೊಟೇಲ್‌ಗ‌ಳನ್ನು ತೆರೆದಿಟ್ಟು, ಆಹಾರ ತಿನಿಸುಗಳನ್ನು ಪಾರ್ಸೆಲ್‌ ಕೊಂಡೊಯ್ಯಲು ಅವಕಾಶ ನೀಡಲಾಗುವುದು. ಕುವೆಂಪು ರಸ್ತೆಯಲ್ಲಿರುವ ಇಂತಹ ಹೊಟೇಲ್‌ ಗಳನ್ನು ತೆರೆಯಲು ಸೂಚನೆ ನೀಡುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ಜಿಲ್ಲಾಡಳಿತ ಅನುಮತಿ ಅಗತ್ಯ: ಅಗತ್ಯವಿರುವವರಿಗೆ ಆಹಾರ ಸಾಮಗ್ರಿ, ಅವಶ್ಯಕ ವಸ್ತುಗಳನ್ನು ವಿತರಿಸಲು ಬಯಸುವ ಸರ್ಕಾರೇತರ ಸಂಸ್ಥೆಗಳು ಹಾಗೂ ಸಂಘ-ಸಂಸ್ಥೆಗಳು ಈ ಕುರಿತು ಜಿಲ್ಲಾಡಳಿತದಿಂದ ಅನುಮತಿ ಪಡೆಯಬೇಕು. ಅಂತವರಿಗೆ ಗುರುತಿನ ಚೀಟಿಯನ್ನು ಒದಗಿಸಲಾಗುವುದು. ಎಂದು ತಿಳಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasdas

ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!

1-sffdsfsd

Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ

rain

ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ,ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

1-tir-a

NH 169A ತೀರ್ಥಹಳ್ಳಿ; ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರ ಬಂದ್!

ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು

Shimoga; ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.