ಕುವೆಂಪು ವಿವಿ ಪ್ರವೇಶ ಕೌನ್ಸೆಲಿಂಗ್‌ ಆರಂಭ

Team Udayavani, Dec 19, 2020, 6:45 PM IST

ಕುವೆಂಪು ವಿವಿ ಪ್ರವೇಶ ಕೌನ್ಸೆಲಿಂಗ್‌ ಆರಂಭ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ ಸ್ನಾತಕೋತ್ತರ ಪದವಿ ಪ್ರವೇಶ ಕೌನ್ಸೆಲಿಂಗ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ವಿಭಾಗಗಳಿಗೆ ವಿದ್ಯಾರ್ಥಿಗಳು ಉತ್ಸಾಹದೊಂದಿಗೆ ಪ್ರವೇಶ ಪಡೆದುಕೊಂಡರು. ವಿಶ್ವವಿದ್ಯಾಲಯದ ಮುಖ್ಯಆವರಣ, ಕಡೂರು ಪಿ.ಜಿ.ಕೇಂದ್ರ, ಚಿಕ್ಕಮಗಳೂರು ಪಿಜಿ ಕೇಂದ್ರ ಮತ್ತು 20ಕ್ಕೂ ಹೆಚ್ಚು ಸ್ನಾತಕೋತ್ತರ ಕಾಲೇಜುಗಳ ಎಲ್ಲಾ ವಿಭಾಗಗಳಿಗೆ ಡಿಸೆಂಬರ್‌ 18, 19 ಮತ್ತು 21 ರಂದು ಪ್ರವೇಶಾತಿ ಕೌನ್ಸೆಲಿಂಗ್‌ ಹಮ್ಮಿಕೊಳ್ಳಲಾಗಿದೆ. ಮೊದಲದಿನವಾದ ಶುಕ್ರವಾರದಂದು ಮೆರಿಟ್‌ ಸೀಟುಗಳಿಗೆಪ್ರವೇಶಾತಿ ಪ್ರಕ್ರಿಯೆ ಯಾವುದೇ ತೊಡಕುಗಳಿಲ್ಲದೆ ನಡೆಯಿತು.

19 ಹಾಗೂ 21 ರಂದು ಪೇಮೆಂಟ್‌ ಮತ್ತು ಇತರೆ ಕೋಟಾಗಳ ಸೀಟುಗಳಿಗೆ ಪ್ರವೇಶಾತಿ ನಡೆಯಲಿದೆ. ವಿಶ್ವವಿದ್ಯಾಲಯದ ಶೈಕ್ಷಣಿಕ ವಿಭಾಗದಪ್ರಕಾರ ಶುಕ್ರವಾರ ಸಂಜೆ4 ಗಂಟೆಯ ಹೊತ್ತಿಗೆಎಲ್ಲ ಸ್ನಾತಕೋತ್ತರ ವಿಭಾಗಗಳ ಶೇ. 65ರಷ್ಟು ಸೀಟುಗಳು ಭರ್ತಿಯಾಗಿದ್ದವು ಹಾಗೂ ಕೋವಿಡ್‌19 ಕಾರಣದಿಂದಾಗಿ ಇನ್ನುಳಿದ ಆಕಾಂಕ್ಷಿಗಳು ಶನಿವಾರಮತ್ತು ಸೋಮವಾರ ವಿವಿಗೆ ಆಗಮಿಸಿ ಪ್ರವೇಶ ಪಡೆಯಲಿದ್ದಾರೆ.

ಆನ್‌ಲೈನ್‌-ಆಫ್‌ಲೈನ್‌: ಪ್ರವೇಶಾತಿ ಪಡೆದ ಕೋರ್ಸುಗಳ ದಾಖಲಾತಿ ನಿರ್ವಹಣೆ ಹಾಗೂ ಶುಲ್ಕವನ್ನು ಭರಿಸಲು ವಿದ್ಯಾರ್ಥಿಗಳಿಗೆ ಆನ್‌ಲೈನ್‌ಮತ್ತು ಆಫ್‌ಲೈನ್‌ನ ಎರಡೂ ಮಾದರಿಗಳಲ್ಲಿಅವಕಾಶಗಳನ್ನು ನೀಡಲಾಗಿತ್ತು. ಆಫ್‌ಲೈನ್‌ನಲ್ಲಿ ಶುಲ್ಕಭರಿಸುವವರ ಸಂಖ್ಯೆ ಹೆಚ್ಚಾದಂತೆ ಮೂರು ಕೌಂಟರ್‌ಗಳನ್ನು ಬ್ಯಾಂಕಿನಲ್ಲಿ ತೆರೆಯಲಾಗಿತ್ತು. ಕೋವಿಡ್‌-19 ಮಾರ್ಗದರ್ಶಿ ಸೂತ್ರಗಳೊಂದಿಗೆ ವಿದ್ಯಾರ್ಥಿಗಳುಮತ್ತು ಪಾಲಕರು ಸುರಕ್ಷಿತವಾಗಿ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ವಿಶ್ವವಿದ್ಯಾಲಯ ಪ್ರವೇಶ ಪ್ರಕ್ರಿಯೆಯನ್ನುಅಚ್ಚುಕಟ್ಟಾಗಿ ಆಯೋಜಿಸಿದ್ದು, ಕೊಠಡಿಗಳನ್ನುಸ್ಯಾನಿಟೈಸ್‌ ಮಾಡಲಾಗಿತ್ತು. ದೇಹದ ಉಷ್ಣಾಂಶ ಪರೀಕ್ಷಿಸಿ ವಿವಿ ಕ್ಯಾಂಪಸ್‌ ಒಳಗೆ ಬಿಡುವ ಜೊತೆಗೆವಿಭಾಗಗಳಲ್ಲಿ ಕೂರಲು 6ಅಡಿ ಅಂತರ ನೀಡಿಕುರ್ಚಿಗಳನ್ನು ಹಾಕಲಾಗಿತ್ತು. ಕರ್ನಾಟಕದ ವಿವಿಧಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಕ್ಕೂ ಹೆಚ್ಚುಸೀಟು ಆಕಾಂಕ್ಷಿಗಳು ಮತ್ತು ಅವರ ಪೋಷಕರುಉತ್ಸುಕತೆಯಿಂದ ಪ್ರವೇಶ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.

ವಿವಿಯ ವಿಭಾಗಗಳನ್ನು ಕಲೆ ಮತ್ತು ಸಮಾಜ ವಿಜ್ಞಾನ ವಿಷಯಗಳು, ವಾಣಿಜ್ಯ ಮತ್ತು ನಿರ್ವಹಣಾ ವಿಷಯಗಳು, ಅನ್ವಯಿಕ ವಿಜ್ಞಾನಗಳು ಮತ್ತು ಮೂಲವಿಜ್ಞಾನಗಳೆಂದು ವಿಂಗಡಿಸಿ ಅನುಕ್ರಮವಾಗಿ ಸಮಾಜ ವಿಜ್ಞಾನ, ವಾಣಿಜ್ಯಶಾಸ್ತ್ರ, ಗಣಿತ ವಿಜ್ಞಾನ ಮತ್ತು ಜೀವವಿಜ್ಞಾನ ವಿಷಯಗಳ ಸಮುತ್ಛಯಗಳಲ್ಲಿ ಪ್ರವೇಶಾತಿ ಹಮ್ಮಿಕೊಳ್ಳಲಾಗಿತ್ತು. ಮುಂದಿನ ಎರಡು ದಿನವೂಇದೇ ಕಟ್ಟಡಗಳಲ್ಲಿ ಕೌನ್ಸೆಲಿಂಗ್‌ ನಡೆಯಲಿದೆ.ವಿಶ್ವವಿದ್ಯಾಲಯಕ್ಕೆ ಆಗಮಿಸುವ ವಿದ್ಯಾರ್ಥಿಗಳುಮತ್ತು ಪೋಷಕರಿಗೆ ವಿವಿಯದ್ವಾರದ ಬಳಿಯೇ ವಿಭಾಗವಾರು ಕೌನ್ಸೆಲಿಂಗ್‌ ಕಟ್ಟಡದ ವಿವರ, ಮಾರ್ಗ ತೋರುವ ಸೂಚನಾ ಫಲಕಗಳು, ಅಗತ್ಯ ದಾಖಲೆಗಳ ವಿವರ ಸೇರಿದಂತೆ ಸ್ವಾಗತ ಕೋರುವ ಫಲಕಗಳನ್ನು ಹಾಕಲಾಗಿತ್ತು. ಜೊತೆಗೆ ಪ್ರತಿಕಟ್ಟಡದ ಬಳಿಯೂ ಪೂರಕ ಮಾಹಿತಿ ನೀಡಲಾಗಿತ್ತು.

ಡಿಜಿಟಲ್‌ ಬೋರ್ಡ್‌ನಲ್ಲಿ ಮಾಹಿತಿ ಪ್ರದರ್ಶನ ;  ಸೀಟುಗಳ ವಿವಿರ, ವಿದ್ಯಾರ್ಥಿ ಮಾಹಿತಿ, ಕಾಲೇಜು ಆಯ್ಕೆ ಕುರಿತ ಮಾಹಿತಿಗಳನ್ನುಯಾವುದೇ ಗೊಂದಲಗಳಿಗೆ ದಾರಿಯಾಗದಂತೆಡಿಜಿಟಲ್‌ ಬೋರ್ಡ್‌ಗಳಲ್ಲಿ  ಪ್ರದರ್ಶಿಸಲಾಗುತ್ತಿತ್ತು ಹಾಗೂ ಮೈಕ್‌ಮೂಲಕ ಆಯ್ಕೆಗೊಂಡವರ ಹೆಸರುಗಳನ್ನು ಘೋಷಿಸಲಾಗುತ್ತಿತ್ತು.

ಟಾಪ್ ನ್ಯೂಸ್

ಸಿಬಿಐ ಅಧಿಕಾರಿಗಳಿಗೆ ನನ್ನ ಮೇಲೆ ಪ್ರೀತಿ; ಡಿಕೆಶಿ ವ್ಯಂಗ್ಯ

ಸಿಬಿಐ ಅಧಿಕಾರಿಗಳಿಗೆ ನನ್ನ ಮೇಲೆ ಪ್ರೀತಿ; ಡಿಕೆಶಿ ವ್ಯಂಗ್ಯ

HDK

ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಕೊಕ್; ಹೆಚ್ ಡಿಕೆ ಖಂಡನೆ

ಪಿಎಸ್‌ಐ ಮರುಪರೀಕ್ಷೆಗೆ ಹೈಕೋರ್ಟ್‌ ಮಧ್ಯಾಂತರ ತಡೆ

ಪಿಎಸ್‌ಐ ಮರುಪರೀಕ್ಷೆಗೆ ಹೈಕೋರ್ಟ್‌ ಮಧ್ಯಾಂತರ ತಡೆ

araga

ಪಿಎಫ್ ಐ ನಿಷೇಧ; ರಾಜ್ಯಗಳಿಗೆ ಅಧಿಕಾರ ನೀಡಿದ ಕೇಂದ್ರ: ಆರಗ ಜ್ಞಾನೇಂದ್ರ

yatnal

ಮತ್ತೆಂದೂ ತಲೆ ಎತ್ತದಂತೆ ಪಿಎಫ್ಐ ನಿಷೇಧಿಸಬೇಕು: ಯತ್ನಾಳ್

ಅಯೋಧ್ಯೆಯಲ್ಲಿ ಲತಾ ಮಂಗೇಶ್ಕರ್‌ ವೃತ್ತ ಉದ್ಘಾಟನೆ

ಅಯೋಧ್ಯೆಯಲ್ಲಿ ಲತಾ ಮಂಗೇಶ್ಕರ್‌ ವೃತ್ತ ಉದ್ಘಾಟನೆ

ಸಿಇಟಿ ಪರಿಷ್ಕೃತ ರ್‍ಯಾಂಕ್‌ ಪಟ್ಟಿ ಅ.1ರಂದು ಪ್ರಕಟ

ಸಿಇಟಿ ಪರಿಷ್ಕೃತ ರ್‍ಯಾಂಕ್‌ ಪಟ್ಟಿ ಅ.1ರಂದು ಪ್ರಕಟಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಿಎಫ್ ಐ ನಿಷೇಧ ಎಲ್ಲ ರಾಷ್ಟ್ರಪ್ರೇಮಿಗಳಿಗೆ ಸಮಾಧಾನ ತಂದಿದೆ:  ಕೆ.ಎಸ್.ಈಶ್ವರಪ್ಪ

ಪಿಎಫ್ ಐ ನಿಷೇಧ ಎಲ್ಲ ರಾಷ್ಟ್ರಪ್ರೇಮಿಗಳಿಗೆ ಸಮಾಧಾನ ತಂದಿದೆ: ಕೆ.ಎಸ್.ಈಶ್ವರಪ್ಪ

ಪಿಎಫ್ಐ ನಿಷೇಧಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಆರಗ ಜ್ಞಾನೇಂದ್ರ

ಪಿಎಫ್ಐ ನಿಷೇಧಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಆರಗ ಜ್ಞಾನೇಂದ್ರ

ಹಿಂದೂ-ಮುಸ್ಲಿಂರನ್ನು ಬೇರೆ ಮಾಡೋ ಕೆಲಸ ಎಸ್ ಡಿಪಿಐ- ಪಿಎಫ್ಐ ಮಾಡುತ್ತಿದ್ದವು: ಈಶ್ವರಪ್ಪ

ಹಿಂದೂ-ಮುಸ್ಲಿಂರನ್ನು ಬೇರೆ ಮಾಡೋ ಕೆಲಸ ಎಸ್ ಡಿಪಿಐ- ಪಿಎಫ್ಐ ಮಾಡುತ್ತಿದ್ದವು: ಈಶ್ವರಪ್ಪ

ತೀರ್ಥಹಳ್ಳಿ ದಸರಾ ಉತ್ಸವಕ್ಕೆ ಚಾಲನೆ ನೀಡಿದ ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ ದಸರಾ ಉತ್ಸವಕ್ಕೆ ಚಾಲನೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

1-dsadasw

ಶಿಕಾರಿಪುರ: ಹನ್ನೊಂದು ತಿಂಗಳ ಮಗು ತೊಟ್ಟಿಯಲ್ಲಿ ಬಿದ್ದು ಸಾವು

MUST WATCH

udayavani youtube

ಮಂಗಳೂರು ಶ್ರೀ ಶಾರದಾ ಮಹೋತ್ಸವ – 100 ವರ್ಷಗಳ ಪಯಣ ಹೇಗಿತ್ತು ?

udayavani youtube

ದಸರಾ ಆನೆಗಳ ತೂಕವನ್ನು ಹೆಚ್ಚಿಸಲು ಏನೆಲ್ಲಾ ತಿನ್ನಿಸುತ್ತಾರೆ ನೋಡಿ !

udayavani youtube

ಬಿಜೆಪಿ ಸರಕಾರ ಇರೋವರೆಗೆ ದೇಶ ದ್ರೋಹಿಗಳಿಗೆ ವಿಜೃಂಭಿಸಲು ಅವಕಾಶವಿಲ್ಲ

udayavani youtube

ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿಯ ಚಾಲನೆ

udayavani youtube

ಓದಿನ ಜೊತೆ ಕೃಷಿ : ಮಕ್ಕಳೇ ನಿರ್ಮಿಸಿದ ‘ಆರೋಗ್ಯವನ’ !

ಹೊಸ ಸೇರ್ಪಡೆ

ಸಿಬಿಐ ಅಧಿಕಾರಿಗಳಿಗೆ ನನ್ನ ಮೇಲೆ ಪ್ರೀತಿ; ಡಿಕೆಶಿ ವ್ಯಂಗ್ಯ

ಸಿಬಿಐ ಅಧಿಕಾರಿಗಳಿಗೆ ನನ್ನ ಮೇಲೆ ಪ್ರೀತಿ; ಡಿಕೆಶಿ ವ್ಯಂಗ್ಯ

HDK

ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಕೊಕ್; ಹೆಚ್ ಡಿಕೆ ಖಂಡನೆ

ಪಿಎಸ್‌ಐ ಮರುಪರೀಕ್ಷೆಗೆ ಹೈಕೋರ್ಟ್‌ ಮಧ್ಯಾಂತರ ತಡೆ

ಪಿಎಸ್‌ಐ ಮರುಪರೀಕ್ಷೆಗೆ ಹೈಕೋರ್ಟ್‌ ಮಧ್ಯಾಂತರ ತಡೆ

araga

ಪಿಎಫ್ ಐ ನಿಷೇಧ; ರಾಜ್ಯಗಳಿಗೆ ಅಧಿಕಾರ ನೀಡಿದ ಕೇಂದ್ರ: ಆರಗ ಜ್ಞಾನೇಂದ್ರ

yatnal

ಮತ್ತೆಂದೂ ತಲೆ ಎತ್ತದಂತೆ ಪಿಎಫ್ಐ ನಿಷೇಧಿಸಬೇಕು: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.