ಮತದಾರರ ಪಟ್ಟಿ ಪರಿಷ್ಕರಣೆ ಆರಂಭ

Team Udayavani, Sep 2, 2019, 1:45 PM IST

sm-tdy-2

ಶಿವಮೊಗ್ಗ: ಮತದಾರರ ಪಟ್ಟಿ ಪರಿಷ್ಕರಣೆ ಪೋಸ್ಟರ್‌ಗಳನ್ನು ಅಪರ ಜಿಲ್ಲಾಧಿಕಾರಿ ಅನುರಾಧಾ ಪ್ರದರ್ಶಿಸಿದರು.

ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಸೆಪ್ಟೆಂಬರ್‌ 1ರಿಂದ 30ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಪರಿಷ್ಕರಣೆ ಕಾರ್ಯ ಕೈಗೊಳ್ಳುವರು ಎಂದು ಅಪರ ಜಿಲ್ಲಾಧಿಕಾರಿ ಅನುರಾಧಾ ತಿಳಿಸಿದರು.

ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಚಾರ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಮತದಾರರು ನೀಡುವ ದಾಖಲೆಗಳೊಂದಿಗೆ ಮತದಾರರ ಪಟ್ಟಿಯಲ್ಲಿರುವ ಹೆಸರುಗಳನ್ನು ಪರಿಶೀಲಿಸುವರು. ಇದಕ್ಕಾಗಿ ವಿಶೇಷ ಆ್ಯಪ್‌ ಸಿದ್ಧಪಡಿಸಲಾಗಿದ್ದು, ಇದರ ಮೂಲಕ ಜಿಪಿಎಸ್‌ ಆಧಾರಿತ ಮಾಹಿತಿಯನ್ನು ದಾಖಲಿಸಲಾಗುವುದು. ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ನೋಂದಾಯಿಸಲು ಅರ್ಜಿ ನಮೂನೆ-06, ಬೇರೆ ಕಡೆ ಹೋಗಿರುವ ಮತದಾರರ ಹೆಸರು ತೆಗೆದು ಹಾಕಲು ನಮೂನೆ-07, ತಿದ್ದುಪಡಿಗಾಗಿ ನಮೂನೆ 08ರಲ್ಲಿ ಮಾಹಿತಿ ಪಡೆಯುವರು. ಮನೆಯ ಎಲ್ಲಾ ಸದಸ್ಯರ ಹೆಸರು ಒಂದೇ ಮತಗಟ್ಟೆ ವ್ಯಾಪ್ತಿಯಲ್ಲಿ ಬರುವಂತೆ ಖಾತ್ರಿಪಡಿಸಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಹೆಚ್ಚುವರಿಯಾಗಿ ರಚಿಸಬಹುದಾದ ಮತಗಟ್ಟೆಗಳ ಕುರಿತು ಸರ್ಕಾರಿ ಕಟ್ಟಡಗಳ ಮಾಹಿತಿ ಸಂಗ್ರಹಿಸಲಾಗುವುದು. ಒಂದು ಜನವರಿ 2020ಕ್ಕೆ ಅನ್ವಯವಾಗುವಂತೆ ಒಂದು ಜನವರಿ 2002ರ ಪೂರ್ವದಲ್ಲಿ ಜನಿಸಿದವರ ಮಾಹಿತಿಯನ್ನು ಸಂಗ್ರಹಿಸಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಕ್ರಮ ವಹಿಸಲಾಗುವುದು ಎಂದರು.

ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಎನ್‌ವಿಎಸ್‌ ಪೋರ್ಟಲ್ನಲ್ಲಿ ಸಹ ಪರಿಶೀಲಿಸಬಹುದಾಗಿದೆ. ಅಲ್ಲದೆ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಜಿಲ್ಲೆಯಲ್ಲಿರುವ 364 ಸಾಮಾನ್ಯ ಸೇವಾ ಕೇಂದ್ರಗಳು, ಶಿವಮೊಗ್ಗ ಒನ್‌ ಕೇಂದ್ರ, ಎಸಿ ಮತ್ತು ತಹಶೀಲ್ದಾರ್‌ ಕಚೇರಿಗೆ ದಾಖಲೆಗಳೊಂದಿಗೆ ಭೇಟಿ ನೀಡಬಹುದಾಗಿದೆ. ಉಚಿತ ದೂರವಾಣಿ ಸಂಖ್ಯೆ 1950ಗೆ ಕರೆ ಮಾಡಿ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸಹಕರಿಸಲು ಎಲ್ಲಾ ರಾಜಕೀಯ ಪಕ್ಷಗಳು ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿ ಮತಗಟ್ಟೆ ಸಹಾಯಕರನ್ನು ನೇಮಕ ಮಾಡುವಂತೆ ಅವರು ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದರು.

ಜಿಲ್ಲೆಯಲ್ಲಿ ಪ್ರಸ್ತುತ 1775 ಮತಗಟ್ಟೆಗಳಿದ್ದು ಒಟ್ಟು 14,24,985 ಮತದಾರರು ಇದ್ದಾರೆ. ಇವರಲ್ಲಿ 710456 ಪುರುಷ ಮತದಾರರು ಹಾಗೂ 714529 ಮಹಿಳಾ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.