ಕೆಎಸ್‌ಆರ್‌ಟಿಸಿ ಶೌಚಾಲಯದ ಸ್ವಚ್ಛತೆ ಮಾಯ!

ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯ- ಸಾರ್ವಜನಿಕರ ಆರೋಪ

Team Udayavani, Mar 15, 2020, 1:13 PM IST

15-March-12

ಭದ್ರಾವತಿ: ಎಲ್ಲೆಡೆ ಕೊರೊನಾ ರೋಗದ ಭೀತಿಯಿಂದ ಜನರು ತತ್ತರಿಸುತ್ತಾ ಸ್ವಚ್ಛತೆಗೆ ಆದ್ಯತೆ ನೀಡುತ್ತಿದ್ದರೆ, ಇಲ್ಲಿನ ಕೆಎಸ್‌ಆರ್‌ಟಿಸಿ ಮುಖ್ಯ ಬಸ್‌ ನಿಲ್ದಾಣದಲ್ಲಿರುವ ಶೌಚಾಲಯದ ಸ್ವಚ್ಛತೆಯ ಬಗ್ಗೆ ಇಲ್ಲಿನ ಅಧಿಕಾರಿಗಳು ಸೂಕ್ತ ಗಮನ ಹರಿಸದ ಕಾರಣ ದುರ್ನಾತ ಗಾಳಿಯಲ್ಲಿ ತೇಲಿ ಬಂದು ಬಸ್‌ ನಿಲ್ದಾಣದಲ್ಲಿರುವ ಪ್ರಯಾಣಿಕರ ಮೂಗಿಗೆ ರಾಚುವಂತಾಗಿದೆ.

ಪ್ರತಿ ನಿತ್ಯ ಸಾವಿರಾರು ಪ್ರಯಾಣಿಕರು, ವಿದ್ಯಾರ್ಥಿಗಳು ಪ್ರಯಾಣ ಮಾಡಲು ಇಲ್ಲಿ ಬಂದು ಹೋಗುತ್ತಿರುತ್ತಾರೆ. ರಾಜ್ಯದ ಬೇರೆ,ಬೇರೆ ಸ್ಥಳಗಳಿಗೆ ಈ ಮೂಲಕ ಹಾದು ಹೋಗುವ ಬಸ್‌ಗಳು ಸಹ ಇಲ್ಲಿ ಕೆಲ ಕಾಲ ಬಂದು ನಿಂತು ಹೊರಡುತ್ತವೆ. ಈ ರೀತಿ ಇಲ್ಲಿಗೆ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಮಹಿಳೆಯರಿಗೆ ಮತ್ತು ಪುರುಷರಿಗೆಂದು ಎರಡು ಶೌಚಾಲಯಗಳ ವ್ಯವಸ್ಥೆ ಇದೆ.

ಇಲ್ಲಿ ಬಸ್‌ ಪ್ರಯಾಣ ಮಾಡುವ ಪ್ರಯಾಣಿಕರ ಪೈಕಿ ಹಲವರು ಮಲಮೂತ್ರ ವಿಸರ್ಜನೆಗಾಗಿ ನಿಗತ ಶುಲ್ಕ ಪಾವತಿಸಿ ಇದನ್ನು  ಬಳಸಿಕೊಳ್ಳುತ್ತಾರೆ. ಆದರೆ ಈ ಶೌಚಾಲಯವನ್ನು ಸೂಕ್ತವಾಗಿ ಸ್ವಚ್ಛಗೊಳಿಸಿ ಸುವ್ಯವಸ್ಥಿತವಾಗಿ ನೋಡಿಕೊಳ್ಳಬೇಕಾದ ಜವಾಬ್ದಾರಿಯನ್ನು ಇಲ್ಲಿನ ಇಲಾಖಾ ಅಧಿಕಾರಿಗಳು ಮಾಡದಿರುವ ಕಾರಣ ಈ ಶೌಚಾಲಯದೊಳಗೆ ವಿಪರೀತ ದುರ್ನಾತ ತುಂಬಿಕೊಂಡು ಅದರ ದುರ್ಗಂಧ ಗಾಳಿಯಲ್ಲಿ ತೇಲಿಬಂದು ಫ್ಲ್ಯಾಟ್ ಫಾರಂನಲ್ಲಿ ಕಾಯುತ್ತಾ ನಿಂತಿರುವ ಪ್ರಯಾಣಿಕರಿಗೂ ಮೂಗು ಮುಚ್ಚಿಕೊಳ್ಳುವಂತ ವಾತವರಣ ಸೃಷ್ಟಿಸಿದೆ.

ಒಂದೆಡೆ ಸ್ವಚ್ಛ ಭಾರತದ ಲಾಂಛನವನ್ನು, ಘೋಷವಾಕ್ಯವನ್ನು ಇಲ್ಲಿನ ಕುಡಿಯುವ ನೀರಿನ ಘಟಕದ ಮೇಲೆ ಹಾಕಲಾಗಿದೆ. ಆದರೆ ಇದಕ್ಕೆ ವ್ಯತಿರಿಕ್ತ ವಾದ ರೀತಿಯಲ್ಲಿ ಇಲಿನ ಶೌಚಾಲಯ ಶುಚಿತ್ವವಿಲ್ಲದೆ ಕೆಟ್ಟ ವಾಸನೆ ಹರಡುತ್ತಾ ಇದೆ. ಈಗಾಗಲೇ ಕೊರೊನಾ ರೋಗದ ಭೀತಿಯಿಂದ ಮುಖಕ್ಕೆ ಮಾಸ್ಕ್  ಹಾಕಿಕೊಂಡು, ಮೂಗು ಮುಚ್ಚಿಕೊಂಡು ಓಡಾಡುತ್ತಿರುವ ಜನರು ಇಲ್ಲಿನ ಬಸ್‌ ನಿಲ್ದಾಣದಲ್ಲಿನ ಶೌಚಾಲಯದ ದುರ್ನಾತಕ್ಕೆ ಬಟ್ಟೆಯಿಂದ ಮೂಗು ಮುಚ್ಚಿಕೊಂಡು ಇಲ್ಲಿ ಬಸ್‌ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮೂಗು ಮುಚ್ಚಿಕೊಂಡರೂ ಆ ದುರ್ನಾತ ಮೂಗಿಗೆ ಅಡರುವಷ್ಟರ ಮಟ್ಟಿಗೆ ಇಲ್ಲಿ ಅಶುಚಿತ್ವ ಎದ್ದು ಕಾಣುತ್ತದೆ. ಇದೇ ಪರಿಸ್ಥಿತಿ ಮುಂದುವರಿದರೆ ಪ್ರಯಾಣಿಕರಿಗೆ ಕೊರೊನಾ ಜೊತೆಗೆ ಬೇರೆ ರೀತಿಯ ಕಾಯಿಲೆಗಳು ಬರುವ ಸಾಧ್ಯತೆ ಇದೆ. ಸಂಬಂಧಪಟ್ಟ ಅಧಿ ಕಾರಿಗಳು ಕೂಡಲೇ ಇಲ್ಲಿನ ಶೌಚಾಲಯದ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ, ದುರ್ಗಂಧದ ವಾತಾವರಣದ ತೊಂದರೆಯಿಂದ ಪ್ರಯಾಣಿಕರಿಗೆ ಮುಕ್ತಿ ನೀಡಬೇಕಾದ ಅಗತ್ಯವಿದೆ.

ಅದೇ ರೀತಿ ಬಸ್‌ ನಿಲ್ದಾಣದ  ಫ್ಲ್ಯಾಟ್‌ಫಾರಂನ್ನು ಸಹ ಸರಿಯಾದ ನಿರ್ವಹಣೆ ಮಾಡುತ್ತಿಲ್ಲ. ಈ ಎಲ್ಲಾ ಅವಾಂತರಗಳನ್ನು ಬಸ್‌ ನಿಲ್ದಾಣದ ಮೇಲ್ವಿಚಾರಕರು ಗಮನಿಸಿ ಇಲ್ಲಿನ ಬಸ್‌ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆ‌ಗಳನ್ನು ನಿವಾರಿಸಿ, ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣವನ್ನು ಸುಸ್ಥಿತಿಯಲ್ಲಿಡುವ ಕಾರ್ಯ
ಮಾಡಬೇಕಿದೆ.

„ಕೆ.ಎಸ್‌. ಸುಧೀಂದ್ರ ಭದ್ರಾವತಿ

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.