Udayavni Special

ಕನ್ನಡ ಭಾಷೆ ಉಳಿಸಿ ಬೆಳೆಸಲು ಕರೆ

ಕನ್ನಡಕ್ಕಿಂತ ಮಿಗಿಲಾದ ಭಾಷೆ ಇನ್ನೊಂದಿಲ್ಲ : ಡಾ| ಬಿ.ಎನ್‌. ತಂಬೂಳಿ

Team Udayavani, Feb 20, 2020, 4:45 PM IST

20-February-35

ಭದ್ರಾವತಿ: ಭಾಷೆ ಭಾವನೆಗಳನ್ನು ಮಾತಿನ ಮೂಲಕ ಅಭಿವ್ಯಕ್ತಪಡಿಸುವ ಮಾಧ್ಯಮ ಎಂದು ಶಿಕ್ಷಕ ಡಾ| ಬಿ.ಎನ್‌. ತಂಬೂಳಿ ಹೇಳಿದರು.

ಮಂಗಳವಾರ ಸಂಜೆ ದೇವರಾಜ್‌ ಅರಸು ಮೆಟ್ರಿಕ್‌ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಜಿಲ್ಲಾ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ತಾಲೂಕು ಘಟಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ್‌ ಅರಸು ಮೆಟ್ರಿಕ್‌ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಸಂಯುಕ್ತಾಶ್ರಯದಲ್ಲಿ ವಿಶ್ವಮಾತೃಭಾಷಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಮಾತೃಭಾಷಾ-ಮಹತ್ವ ಒಂದು ಚಿಂತನೆ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಸಂಜ್ಞೆಯ ಮೂಲಕ ಎಲ್ಲವನ್ನೂ ಮತ್ತೂಬ್ಬರಿಗೆ ಅರ್ಥವಾಗುವಂತೆ ಹೇಳುವುದು ಅಸಾಧ್ಯ. ಆದರೆ ಭಾಷೆಯಿಂದ ಎಲ್ಲವನ್ನೂ ಹೇಳಲು ಸಾಧ್ಯ. ಸಂಬಂಧಗಳಲ್ಲಿ ತಾಯಿಗಿಂತ ಮಿಗಿಲಾದ ಸಂಬಂಧವಿಲ್ಲ. ಅದೇ ರೀತಿ ನಾವು ಎಷ್ಟೇ ಭಾಷೆ ಕಲಿತರೂ ನಮಗೆ ನಮ್ಮ ಮಾತೃಭಾಷೆಯಾದ ಕನ್ನಡಕ್ಕಿಂತ ಮಿಗಿಲಾದ ಮತ್ತೂಂದು ಭಾಷೆ ಇರಲು ಸಾಧ್ಯವಿಲ್ಲ. ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದ್ದು ಈ ಬಾಷೆಯ ಪ್ರತಿಯೊಂದು ಅಕ್ಷರಕ್ಕೂ ವೈಜ್ಞಾನಿಕ ಸಂಬಂಧವಿದೆ. ಒಂದು ಕಾಲದಲ್ಲಿ ದೇವಭಾಷೆ ಎನಿಸಿದ್ದ ಸಂಸ್ಕೃತ ಭಾಷೆ ಈಗ ಶೋಕೇಸ್‌ ಸೇರಿದೆ. ಆದರೆ ಕನ್ನಡ ಭಾಷೆ ನಿರಂತರವಾಗಿ ಬೆಳೆದು ಉಳಿದು ಬಂದಿದೆ. ಕನ್ನಡ ಭಾಷಾ ಬೆಳವಣಿಗೆಯಲ್ಲಿ ಪಂಪ, ರನ್ನ, ರಾಘವಾಂಕ ಸೇರಿದಂತೆ ಅನೇಕರ ಕೊಡುಗೆ ಅಪಾರ. ಅನ್ಯಭಾಷೆಗಳನ್ನು ಕಲಿಯಿರಿ. ಆದರೆ ಕನ್ನಡ ಭಾಷೆಗೆ ದೇವರ ಕೋಣೆಗೆ ನೀಡುವಷ್ಟರ ಮಟ್ಟಿಗೆ ಪಾವಿತ್ರ್ಯತೆಯನ್ನು ನೀಡಿ ಜೀವನದ ಪ್ರತಿಹಂತದಲ್ಲಿಯೂ ಕನ್ನಡವನ್ನು ಬಳಸಬೇಕು ಎಂದರು.

ಆಶಯ ನುಡಿಗಳನ್ನಾಡಿದ ಜಿಲ್ಲಾ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್‌ ಮಾತನಾಡಿ, ಇತಿಹಾಸವನ್ನು ಅವಲೋಕಿಸಿದಾಗ ಗಾಂಧಿ, ಅಂಬೇಡ್ಕರ್‌ ಅವರಂತಹ ಮಹಾ ಪುರುಷರು ಜೀವನದ ಸಾಮಾಜಿಕ ಕಳಕಳಿಯ ಹೋರಾಟದಲ್ಲಿ ಅನುಭವಿಸಿದ ನೋವು, ಅವಮಾನ ಅವರಲ್ಲಿ ಹಿಡಿದ ಗುರಿ ಸಾ ಧಿಸಲೇಬೇಕೆಂಬ ಛಲವನ್ನು ದೃಢಗೊಳಿಸಿತು. ಆ ಎಲ್ಲಾ ನೋವಿನ್ನು ನುಂಗಿಕೊಂಡು ಪರಿಶ್ರಮದಿಂದ ಸಾಧನೆಯ ಹಾದಿಯಲ್ಲಿ ಸಾಗಿದ ಪರಿಣಾಮವಾಗಿ ಸಮಾಜಕ್ಕೆ ಅವರಿಂದ ಉತ್ತಮ ಕೊಡುಗೆ ಲಭಿಸಿತು ಎಂಬುದನ್ನು ನಾವು ಮರೆಯಬಾರದು ಎಂದರು.

ಶಿಕ್ಷಕ ಚಂದ್ರಪ್ಪ ಕನ್ನಡ ಗೀತೆ ವಾಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಗಲೂರು ತಿಪ್ಪೇಸ್ವಾಮಿ ವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾ ಕಾರಿ ಎಚ್‌.ಚಿದಾನಂದ ಉದ್ಘಾಟಿಸಿದರು. ರತ್ನಮ್‌, ಅಪ್ನಾದೇಶ್‌ ಅಸೋಸಿಯೇಶನ್‌ ರಾಜ್ಯ ಸಂಚಾಲಕ ಸಿ.ಎಂ. ರಮೇಶ್‌ ವಿದ್ಯಾರ್ಥಿ ನಿಲಯದ ಲಕ್ಷ್ಮೀ  ಇದ್ದರು. ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಲಕ್ಷ್ಮೀ ನಿರೂಪಿಸಿದರು. ಶಶಿ ವಂದಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸಂಜೆಯೊಳಗೆ ಉಸ್ತುವಾರಿ ಸಚಿವರ ನೇಮಕ: ಇಲ್ಲಿದೆ ಸಂಭಾವ್ಯ ಪಟ್ಟಿ

ಸಂಜೆಯೊಳಗೆ ಉಸ್ತುವಾರಿ ಸಚಿವರ ನೇಮಕ: ಇಲ್ಲಿದೆ ಸಂಭಾವ್ಯ ಪಟ್ಟಿ

ಏ.15ರ ನಂತರ ರೈಲು ಸಂಚಾರ ವರದಿ ಸತ್ಯಕ್ಕೆ ದೂರ: ಭಾರತೀಯ ರೈಲ್ವೆ ಇಲಾಖೆ

ಏ.15ರ ನಂತರ ರೈಲು ಸಂಚಾರ ವರದಿ ಸತ್ಯಕ್ಕೆ ದೂರ: ಭಾರತೀಯ ರೈಲ್ವೆ ಇಲಾಖೆ

ಸಚಿವರು, ಶಾಸಕರ ವೇತನದಲ್ಲಿ ಶೇ.30ರಷ್ಟು ಕಡಿತ; ಸುಗ್ರಿವಾಜ್ಞೆ ಮೂಲಕ ಆದೇಶ

ಸಚಿವರು, ಶಾಸಕರ ವೇತನದಲ್ಲಿ ಶೇ.30ರಷ್ಟು ಕಡಿತ; ಸುಗ್ರಿವಾಜ್ಞೆ ಮೂಲಕ ಆದೇಶ

ಮೂವರು ಮಕ್ಕಳಿಗೆ ಕೋವಿಡ್-19 ಸೋಂಕು; ರಾಜ್ಯದಲ್ಲಿ 191ಕ್ಕೇರಿದ ಸೋಂಕಿತರ ಸಂಖ್ಯೆ

ಮೂವರು ಮಕ್ಕಳಿಗೆ ಕೋವಿಡ್-19 ಸೋಂಕು; ರಾಜ್ಯದಲ್ಲಿ 191ಕ್ಕೇರಿದ ಸೋಂಕಿತರ ಸಂಖ್ಯೆ

ಕೋವಿಡ್ 19 ವಿರುದ್ಧ ಹೋರಾಟ; ಏ.30ರವರೆಗೆ ಲಾಕ್ ಡೌನ್ ಮುಂದುವರಿಕೆ: ಒಡಿಶಾ ಸಿಎಂ

ಕೋವಿಡ್ 19 ವಿರುದ್ಧ ಹೋರಾಟ; ಏ.30ರವರೆಗೆ ಲಾಕ್ ಡೌನ್ ಮುಂದುವರಿಕೆ: ಒಡಿಶಾ ಸಿಎಂ ಘೋಷಣೆ

ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಮೂರು ಮಕ್ಕಳ ದುರ್ಮರಣ

ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಮೂರು ಮಕ್ಕಳ ದುರ್ಮರಣ

Leopard-climbs-tree

ವಿಡಿಯೋ: ಬೇಟೆಯೊಂದಿಗೆ ಅನಾಯಾಸವಾಗಿ ದೈತ್ಯಗಾತ್ರದ ಮರ ಏರಿದ ಚಿರತೆ, ನೆಟ್ಟಿಗರು ಫುಲ್ ಫಿದಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

09-April-13

ಮಂಗನಕಾಯಿಲೆ ನಿಯಂತ್ರಣಕ್ಕೆ ಕ್ರಮ: ಬಿ.ವೈ. ರಾಘವೇಂದ್ರ

ಲಾಕ್ ಡೌನ್ ಜೊತೆ ನೋ ಮ್ಯಾನ್ ಝೋನ್

ಲಾಕ್ ಡೌನ್ ಜೊತೆ ನೋ ಮ್ಯಾನ್ ಝೋನ್: ಮಂಗನ ಕಾಯಿಲೆ ತಡೆಗೆ ಮಲೆನಾಡಿನಲ್ಲಿ ಕ್ರಮ

08-April-36

ಹೊಲದಲ್ಲೇ ಕೊಳೆಯುತ್ತಿರುವ ಅನಾನಸ್‌ - ಪರಿಶೀಲನೆ

08-April-28

ವಾರದಲ್ಲಿ 3 ದಿನ ತರಕಾರಿ ಮಾರುಕಟ್ಟೆ: ತಹಶೀಲ್ದಾರ್‌

08-April-16

ಪಡಿತರ ಪಡೆಯುವಾಗ ಇರಲಿ ಅಂತರ

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

ಸಂಜೆಯೊಳಗೆ ಉಸ್ತುವಾರಿ ಸಚಿವರ ನೇಮಕ: ಇಲ್ಲಿದೆ ಸಂಭಾವ್ಯ ಪಟ್ಟಿ

ಸಂಜೆಯೊಳಗೆ ಉಸ್ತುವಾರಿ ಸಚಿವರ ನೇಮಕ: ಇಲ್ಲಿದೆ ಸಂಭಾವ್ಯ ಪಟ್ಟಿ

br-tdy-1

ಸಂಕಷ್ಟದಲ್ಲಿ ರೇಷ್ಮೆ ನೂಲು ತಯಾರಕರು

“ಸ್ಮಾರ್ಟ್‌ ಮಾರುಕಟ್ಟೆ’ ನಿರ್ಮಾಣಕ್ಕೆ ಸಜ್ಜು

“ಸ್ಮಾರ್ಟ್‌ ಮಾರುಕಟ್ಟೆ’ ನಿರ್ಮಾಣಕ್ಕೆ ಸಜ್ಜು

09-April-18

ಅಧಿಕಾರಿಗಳ ಕಾರ್ಯವೈಖರಿಗೆ ಬೇಸರ

ಆರ್ಥಿಕತೆ ಪುನಶ್ಚೇತನಕ್ಕೆ ಜರ್ಮನಿ ಚಿಂತನೆ

ಆರ್ಥಿಕತೆ ಪುನಶ್ಚೇತನಕ್ಕೆ ಜರ್ಮನಿ ಚಿಂತನೆ