ಕೋವಿಡ್ ಔಷಧಗಳ ಮೇಲಿನ ಜಿಎಸ್‌ಟಿ ರದ್ದುಗೊಳಿಸಿ

Team Udayavani, May 29, 2021, 11:34 AM IST

ಕೋವಿಡ್ ಔಷಧಗಳ ಮೇಲಿನ ಜಿಎಸ್‌ಟಿ ರದ್ದುಗೊಳಿಸಿ

ಶಿವಮೊಗ್ಗ: ಕೋವಿಡ್ ಸಂಬಂಧಿಸಿದ ಎಲ್ಲಾ ಔಷ ಧಗಳ ಮೇಲಿನ ಜಿಎಸ್‌ಟಿ ರದ್ದುಗೊಳಿಸುವಂತೆ ಕಾಂಗ್ರೆಸ್‌ ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್‌ ಆಗ್ರಹಿಸಿದ್ದಾರೆ.

ನಗರದಲ್ಲಿ ಅಲೆಮಾರಿ ಸಮುದಾಯದ ನಿವಾಸಿಗಳಿಗೆ ಆಹಾರ ಕಿಟ್‌ ವಿತರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಕೋವಿಡ್ ವೈರಸ್‌ ವಿಶ್ವವನ್ನೇ ಕಾಡುತ್ತಿದೆ. ಜನರ ಬಳಿ ಹಣವಿಲ್ಲ. ಇಂತಹ ಸಂದರ್ಭದಲ್ಲೇ ಸರ್ಕಾರ ಔಷ ಧಗಳ ಮೇಲೂ ಜಿಎಸ್‌ಟಿ ತೆರಿಗೆ ವಸೂಲು ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಕೋವಿಡ್ ಗೆ ದೇಶದಲ್ಲೇ ವ್ಯಾಕ್ಸಿನ್‌ ಉತ್ಪಾದಿಸಲಾಗುತ್ತಿದ್ದರೂ ದೇಶವಾಸಿಗಳಿಗೇ ಸರಿಯಾಗಿ ವ್ಯಾಕ್ಸಿನ್‌ ಸಿಗುತ್ತಿಲ್ಲ. ಇಲ್ಲಿ ಉತ್ಪಾದನೆಯಾದ ವ್ಯಾಕ್ಸಿನ್‌ ಅನ್ನು ಬೇರೆ ದೇಶಗಳಿಗೆ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ಜನರ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿದರು.

ಈಗಾಗಲೇ ಕೋವಿಡ್ 2ನೇ ಅಲೆ ದೇಶ ತತ್ತರಿಸುವಂತೆ ಮಾಡಿದೆ. 3ನೇ ಅಲೆ ಪ್ರಾರಂಭವಾಗಲಿದೆ. ಇಷ್ಟಾದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಕೂಡಲೇ ತಜ್ಞರೊಂದಿಗೆ ಸಮಾಲೋಚನೆ ನಡೆಸಬೇಕು. ಮೂರನೇ ಅಲೆ ನಿಯಂತ್ರಿಸಲು ಸಜ್ಜಾಗಬೇಕಿದೆ ಎಂದರು.

ಜನರ ಸಂಕಷ್ಟಕ್ಕೆ ಸ್ಪಂದಿಸುವುದು ಕಾಂಗ್ರೆಸ್‌ ಪರಂಪರೆ. ಹಾಗಾಗಿ ದೇಶಾದ್ಯಂತ ಹಸಿವಿನಿಂದ ಬಳಲುತ್ತಿರುವ ಜನರಿಗೆ ಆಹಾರ ಕಿಟ್‌ ವಿತರಣೆ, ರೋಗಿಗಳಿಗೆ ಆ್ಯಂಬುಲೆನ್ಸ್‌ ಸೇವೆ ಒದಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.

ರಾಷ್ಟ್ರೀಯ ಕಾಂಗ್ರೆಸ್‌ನ ಕಾರ್ಯದರ್ಶಿ ಡಿ.ಎಂ. ಸಂದೀಪ್‌, ನಗರಪಾಲಿಕೆ ಸದಸ್ಯರಾದ ಎಚ್‌.ಸಿ. ಯೋಗೀಶ್‌, ಯಮುನಾ ರಂಗೇಗೌಡ,ಯುವ ಮುಖಂಡರಾದ ಸಿ.ಜಿ. ಮಧುಸೂದನ್‌, ಕೆ. ಚೇತನ್‌, ಗಣೇಶ್‌, ಮೊಹಮ್ಮದ್‌ ನಿಹಾಲ್‌, ಆದರ್ಶ ಹುಂಚನಕಟ್ಟೆ, ಪ್ರದೀಪ್‌, ವಿನಾಯಕ್‌, ವಿನಯ್‌, ವಿಜಯ್‌ ಸೇರಿದಂತೆ ಹಲವರಿದ್ದರು.

ಟಾಪ್ ನ್ಯೂಸ್

window-seat

ಶೀತಲ್ ಶೆಟ್ಟಿ ನಿರ್ದೇಶನದ ಮರ್ಡರ್ ಮಿಸ್ಟ್ರಿ ‘ವಿಂಡೋಸೀಟ್‌’ ಜರ್ನಿ ಶುರು

ಮಣಿಪುರ: ಧಾರಾಕಾರ ಮಳೆಗೆ ಭಾರೀ ಭೂಕುಸಿತ-14 ಮಂದಿ ಸಾವು, 60 ಜನರು ಜೀವಂತ ಸಮಾಧಿ?

ಮಣಿಪುರ: ಧಾರಾಕಾರ ಮಳೆಗೆ ಭಾರೀ ಭೂಕುಸಿತ-14 ಮಂದಿ ಸಾವು, 60 ಜನರು ಜೀವಂತ ಸಮಾಧಿ?

1

ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕಿ: ಇಂದಿನಿಂದ ‘ಬೈರಾಗಿ’ ದರ್ಶನ

ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕ್ತಿ: ಇಂದಿನಿಂದ ‘ಬೈರಾಗಿ’ ದರ್ಶನ

ದಾಖಲೆಯ ದೂರಕ್ಕೆ ಜಾವೆಲಿನ್ ಎಸೆದ ನೀರಜ್ ಚೋಪ್ರಾ; ಹೊಸ ದಾಖಲೆ ಬರೆದ ಚಿನ್ನದ ಹುಡುಗ| Video

ದಾಖಲೆಯ ದೂರಕ್ಕೆ ಜಾವೆಲಿನ್ ಎಸೆದ ನೀರಜ್ ಚೋಪ್ರಾ; ಹೊಸ ದಾಖಲೆ ಬರೆದ ಚಿನ್ನದ ಹುಡುಗ| Video

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇಂದು ಇಡಿ ವಿಚಾರಣೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇಂದು ಇಡಿ ವಿಚಾರಣೆ

ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!

ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide

ಸಾಗರ: ಮದುವೆಗೆ ನಿರಾಕರಿಸಿದ ಪ್ರೇಮಿ; ವಿಷ ಸೇವಿಸಿ ಯುವತಿ ಆತ್ಮಹತ್ಯೆ

23

ರೋಗಿಗಳ ಆಹಾರದಲ್ಲೂ ಅವ್ಯವಹಾರ; ತನಿಖೆಗೆ ಕಾಂಗ್ರೆಸ್ ಒತ್ತಾಯ

ಸೊರಬ: ಟೈಲರ್ ಕನ್ನಯ್ಯ ಲಾಲ್ ಕೊಲೆ ಖಂಡಿಸಿ ವಿವಿಧ ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಸೊರಬ: ಟೈಲರ್ ಕನ್ನಯ್ಯ ಲಾಲ್ ಕೊಲೆ ಖಂಡಿಸಿ ವಿವಿಧ ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೇ ರೈತ ವಿರೋಧಿ ಕಾನೂನುಗಳ ಸೃಷ್ಟಿ; ಕಣ್ಣೂರು ಆರೋಪ

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೇ ರೈತ ವಿರೋಧಿ ಕಾನೂನುಗಳ ಸೃಷ್ಟಿ; ಕಣ್ಣೂರು ಆರೋಪ

ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ

ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ

MUST WATCH

udayavani youtube

ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು

udayavani youtube

ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್

udayavani youtube

ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ

udayavani youtube

ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ

udayavani youtube

ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

ಹೊಸ ಸೇರ್ಪಡೆ

2

ವಿವಿದ ಬೇಡಿಕೆಗೆ ಒತ್ತಾಯಿಸಿ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

window-seat

ಶೀತಲ್ ಶೆಟ್ಟಿ ನಿರ್ದೇಶನದ ಮರ್ಡರ್ ಮಿಸ್ಟ್ರಿ ‘ವಿಂಡೋಸೀಟ್‌’ ಜರ್ನಿ ಶುರು

ಮಣಿಪುರ: ಧಾರಾಕಾರ ಮಳೆಗೆ ಭಾರೀ ಭೂಕುಸಿತ-14 ಮಂದಿ ಸಾವು, 60 ಜನರು ಜೀವಂತ ಸಮಾಧಿ?

ಮಣಿಪುರ: ಧಾರಾಕಾರ ಮಳೆಗೆ ಭಾರೀ ಭೂಕುಸಿತ-14 ಮಂದಿ ಸಾವು, 60 ಜನರು ಜೀವಂತ ಸಮಾಧಿ?

1

ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕಿ: ಇಂದಿನಿಂದ ‘ಬೈರಾಗಿ’ ದರ್ಶನ

ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕ್ತಿ: ಇಂದಿನಿಂದ ‘ಬೈರಾಗಿ’ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.