ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು: ವಿದ್ಯುತ್ ಶಾಕ್ ನಿಂದ ಮೂವರು ಸಾವು
Team Udayavani, Sep 24, 2020, 2:57 PM IST
ಶಿವಮೊಗ್ಗ: ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸನಗರ ತಾಲೂಕಿನ ಗರ್ತಿಕೆರೆ ಬಳಿ ಗುರುವಾರ ನಡೆದಿದೆ.
ರಿಪ್ಪನ್ ಪೇಟೆ ನಿವಾಸಿಗಳಾದ ಲೋಹಿತ್ (34), ಕಲಾವತಿ (60) ಹಾಗೂ ಶಶಾಂಕ್ (8) ಮೃತ ದುರ್ದೈವಿಗಳು.
ಧರ್ಮಸ್ಥಳಕ್ಕೆ ಹೊರಟಿದ್ದ ಇವರು ವಾಪಾಸು ಬರುವಾಗ ಘಟನೆ ನಡೆದಿದೆ. ಗರ್ತಿಕೆರೆ ಬಳಿ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದಾಗ ಏನಾಯಿತು ಎಂದು ನೋಡಲು ಕಾರು ಚಲಾಯಿಸುತ್ತಿದ್ದ ಮಗ ಕಾರಿನಿಂದ ಕೆಳಗೆ ಇಳಿದಿದ್ದು, ಕೂಡಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಕಾರಿನಿಂದ ಕೆಳಗಿಳಿದ ಮಗ ಏಕಾಏಕಿ ಕುಸಿದು ಬಿದ್ದಿದ್ದರಿಂದ ಗಾಬರಿಯಾಗಿ ಕಾರಿನಿಂದ ಕೆಳಗಿಳಿದ ತಾಯಿಯೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಜ್ಜಿಯೊಂದಿಗೆ ಕಾರಿನಿಂದ ಕೆಳಗಿಳಿದ ಮೊಮ್ಮಗನೂ ಅಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಚಿತ್ರೀಕರಣದ ವೇಳೆ ಹೃದಯಾಘಾತ: ಹಿರಿಯ ನಟ ರಾಕ್ ಲೈನ್ ಸುಧಾಕರ್ ನಿಧನ
ಕಾರಿನಿಂದ ಇಳಿದ ಮೂವರೂ ಕುಸಿದುಬಿದ್ದಿದ್ದರಿಂದ ಕಾರಿನಲ್ಲಿದ್ದ ಇನ್ನು ಮೂವರು ಕಾರಿನಲ್ಲೇ ಕುಳಿತಿದ್ದರಿಂದ ಅವರುಗಳು ಉಳಿದುಕೊಂಡಿದ್ದಾರೆ. ಕಲಾವತಿ ಅವರ ಮಗಳು ಅಂಬಿಕಾ (35), ಅಂಬಿಕಾ ಪತಿ ರವಿಭಟ್ (45) ಹಾಗೂ ಇವರ ಮಗ ಗಣೇಶ(15) ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಾಗ ವಿದ್ಯುತ್ ಶಾಕ್ ನಿಂದ ಈ ಮೂವರು ಮೃತಪಟ್ಟಿದ್ದಾರೆ ಎಂದು ಅನುಮಾನಿಸಲಾಗಿದೆ. ಮಳೆ ಇದ್ದು ನೆಲ ಹಸಿಯಾಗಿದ್ದರಿಂದ ನೆಲಕ್ಕಿಳಿದಾಗ ವಿದ್ಯುತ್ ಪ್ರವಹಿಸಿ ಅವಘಡ ಸಂಭವಿಸಿರಬಹುದು ಎನ್ನಲಾಗುತ್ತಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೊರಬ : ಎಸ್ಸೆಸ್ಸೆಲ್ಸಿ ಯಲ್ಲಿ ಸಮಾನ ಅಂಕ ಗಳಿಸುವ ಮೂಲಕ ಗಮನ ಸೆಳೆದ ಅವಳಿ ಸಹೋದರಿಯರು
ಮಳೆಯಿಂದ ಬೆಳೆ ನಷ್ಟ: ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು; ಮಾಜಿ ಶಾಸಕ ಮಧು ಬಂಗಾರಪ್ಪ
ಸಾಗರ: ನೆಡುತೋಪು ಕಾವಲು ಕಾಯುತ್ತಿದ್ದವನಿಂದಲೇ ಪ್ಲಾಂಟೇಶನ್ನಿಂದ ಮರ ಕಳ್ಳತನ; ಆರೋಪಿಗಳ ಬಂಧನ
ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಅವಾಂತರ ತಪ್ಪಿಸಲು ಮನವಿ
ತೀರ್ಥಹಳ್ಳಿ: ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಪೊಲೀಸರ ದಾಳಿ