ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ: ಕಾರಣ ಬಹಿರಂಗ
Team Udayavani, Aug 16, 2022, 2:36 PM IST
ಶಿವಮೊಗ್ಗ: ಭದ್ರಾವತಿಯಲ್ಲಿ ಬಜರಂಗದಳದ ಕಾರ್ಯಕರ್ತ ಸುನೀಲ್ ಮೇಲೆ ಮುಬಾರಕ್ ಅಲಿಯಾಸ್ ಡಿಚ್ಚಿ ಹಲ್ಲೆ ನಡೆಸಿದ್ದಾನೆ. ಸೋಮವಾರ ಸಂಜೆ ಇಬ್ಬರ ನಡುವೆ ಗಲಾಟೆ ನಡೆದಿದ್ದು, ನಂತರ ಮುಬಾರಕ್ ತನಗೆ ಹಲ್ಲೆ ನಡೆಸಿದ್ದಾನೆ ಎಂದು ಸುನೀಲ್ ದೂರು ನೀಡಿದ್ದಾನೆ.
ಈ ಹಲ್ಲೆಗೆ ಕಾರಣ ಎನ್ನಲಾದ ವಿಡಿಯೋ ಲಭ್ಯವಾಗಿದ್ದು, ಸೋಮವಾರ ಭದ್ರಾವತಿಯಲ್ಲಿ ಸುನೀಲ್ ಗುಡಿ-ಗುಡಿ ಆಡುತ್ತಿದ್ದಾಗ ಮುಬಾರಕ್ ಅದರ ವಿಡಿಯೋ ಮಾಡಿಕೊಂಡಿದ್ದ. ವಿಡಿಯೋ ಮಾಡಿದ್ದಕ್ಕೆ ಮುಬಾರಕ್ ಅನ್ನು ಸುನೀಲ್ ಪ್ರಶ್ನಿಸಿದ್ದು, ಇಬ್ಬರ ನಡುವೆ ಜಗಳ ಉಂಟಾಗಿದೆ. ಇದು ಮುಂದುವರಿದು ಸುನೀಲ್ ಮೇಲೆ ಹಲ್ಲೆ ಮುಬಾರಕ್ ಹಲ್ಲೆ ಎಸಗಿದ್ದಾನೆ ಎಂದು ತಿಳಿದುಬಂದಿದೆ.
ಆದರೆ ಸುನೀಲ್ ಮಾತ್ರ ಹಲ್ಲೆಗೆ ಬೇರೆಯೇ ಕಾರಣ ನೀಡುತ್ತಿದ್ದು, ಮುಬಾರಕ್ ಅಂಗವಿಕಲ ಯುವಕನಿಗೆ ಹಲ್ಲೆ ಮಾಡಲು ಮುಂದಾದ ವೇಳೆ ತಾನು ಅದನ್ನು ಪ್ರಶ್ನಿಸಿದಕ್ಕೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರ ಎದುರು ಹೇಳಿಕೆ ದಾಖಲಿಸಿದ್ದಾನೆ.
ಇದನ್ನೂ ಓದಿ: ನದಿಗೆ ಉರುಳಿ ಬಿದ್ದ ಐಟಿಬಿಪಿ ಸಿಬ್ಬಂದಿಗಳನ್ನು ಹೊತ್ತೊಯ್ದ ಬಸ್ : 6 ಮಂದಿ ಸಾವು
ಹಲ್ಲೆಗೆ ಸಂಬಂಧಿಸಿದಂತೆ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಪ್ರಸ್ತುತ ಸುನೀಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ