ರೈಲ್ವೆ ಯೋಜನೆ ಶೀಘ್ರ ಪೂರ್ಣಗೊಳಿಸಿ


Team Udayavani, Oct 22, 2020, 6:13 PM IST

sm-tdy-1

ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್‌-19ರ ಸಂದಿಗ್ಧ ಸಂದರ್ಭದ ಪ್ರಸ್ತುತ ದಿನಗಳಲ್ಲಿ ಜಿಲ್ಲೆಯ ವಿವಿಧ ರೈಲ್ವೆ ಯೋಜನೆಗಳು, ಈಗಾಗಲೇ ಕೈಗೊಳ್ಳಲಾಗಿರುವ ಪ್ರಯಾಣಿಕರ ಸೌಲಭ್ಯಗಳನ್ನು ಹೆಚ್ಚಿಸುವ ರೈಲ್ವೆ ಯೋಜನೆಗಳು, ರೈಲ್ವೆ ಮೇಲ್ಸೇತುವೆ ಸೇರಿದಂತೆ ಕಾಮಗಾರಿಗಳು ನಿಗ ದಿತ ಅವಧಿ ಯಲ್ಲಿ ಪೂರ್ಣಗೊಳಿಸುವ ಸಂಬಂಧ ನೈಋತ್ಯ ರೈಲ್ವೆ ವಲಯವಮಹಾಪ್ರಬಂಧಕ ಎ.ಕೆ.ಸಿಂಗ್‌ ಹಾಗೂ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಂಸದ ಬಿ.ವೈ.ರಾಘವೇಂದ್ರ ಅವರು ವಿಡಿಯೋ ಸಂವಾದ ನಡೆಸಿದರು.

ಬುಧವಾರ ಜಿಲ್ಲಾ ಪಂಚಾಯಿತಿಯ ಸಹ್ಯಾದ್ರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ರೈಲ್ವೆ ಯೋಜನೆಗಳು ಮತ್ತು ಅನುದಾನದ ಲಭ್ಯತೆ ಕುರಿತು ಪ್ರಗತಿ ಪರಿಶೀಲನೆ ವೇಳೆ ಸಂವಾದ ನಡೆಸಿದರು. ಈಗಾಗಲೇ ಆರಂಭಿಸಲಾಗಿರುವ ಎಲ್ಲಾ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಆರಂಭಿಸಿ ಪೂರ್ಣಗೊಳಿಸಬೇಕು. ಅದಕ್ಕಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಸೂಚಿಸಿದರು.

ಮುಂದಿನ ದಿನಗಳಲ್ಲಿ ದೇಶದಾದ್ಯಂತ ರೈಲು ಸಂಚಾರ ಆರಂಭಗೊಳ್ಳುವ ನಿರೀಕ್ಷೆ ಇದ್ದು, ಈಗಿರುವ ರೈಲು ಮಾರ್ಗಗಳು ಮತ್ತು ಸಮಯದಲ್ಲಿ ಬದಲಾವಣೆಯಾಗಬಹುದಾದ ಮಾಹಿತಿ ಇದೆ. ಜಿಲ್ಲೆಯ ಜನರ ಅನುಕೂಲಕ್ಕೆ ಪೂರಕವಾಗಿ ಪ್ರವಾಸಿಗರು, ಉದ್ಯಮಿಗಳು, ವಿಶೇಷವಾಗಿ ಕೈಗಾರಿಕೋದ್ಯಮಿಗಳುಹಾಗೂ ವಾಣಿಜ್ಯ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ರೈಲ್ವೆ ಸಂಚಾರ ಎಂದಿನಂತೆ ಮುಂದುವರೆಸುವ ಅಗತ್ಯಕ್ಕೆ ತಕ್ಕಂತೆ ಸಮಯ ಬದಲಾವಣೆ ಮಾಡುವ ಬಗ್ಗೆಯೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿರುವುದಾಗಿ ಸಂಸದರು ತಿಳಿಸಿದರು.

ಈಗಾಗಲೇ ಸ್ಥಗಿತಗೊಳಿಸಿರುವ ರೈಲುಗಳನ್ನು ಕೂಡಲೇ ಪುನರಾರಂಭಿಸುವಂತೆ ಹಾಗೂ ಪ್ರತಿದಿನ ಬೆಳಿಗ್ಗೆ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಸಂಚರಿಸುವ ಜನಶತಾಬ್ಧಿ ರೈಲನ್ನು ಯಶವಂತಪುರದಿಂದ ಮುಖ್ಯ ನಿಲ್ದಾಣಕ್ಕೆ ಮುಂದುವರೆಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ. ಚೆನ್ನೈ-ಶಿವಮೊಗ್ಗ ತತ್ಕಾಲ್‌ ರೈಲನ್ನು ಶಾಶ್ವತವಾಗಿ ಸಂಚರಿಸುವಂತೆ ಮನವಿ ಮಾಡಲಾಗಿದೆ. ಮುಂದಿನ ಒಂದು ವಾರದಲ್ಲಿಶಿವಮೊಗ್ಗ-ರಾಣೆಬೆನ್ನೂರು ಮಾರ್ಗದ ಸರ್ವೆà ಹಾಗೂ ಭೂಸ್ವಾಧೀನ ಕಾರ್ಯ ಪೂರ್ಣಗೊಳ್ಳಲಿದ್ದು, ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದೆ. ಅಲ್ಲದೇ, ಕೋಟೆಗಂಗೂರುರೈಲ್ವೆ ಟರ್ಮಿನಲ್‌ ನಿರ್ಮಾಣಕ್ಕೆ ಸಂಬಂಧಿ ಸಿದಂತೆ ಮುಂದಿನ ವಾರದೊಳಗಾಗಿ ಭೂಸ್ವಾಧೀನ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯ ನಾಲ್ಕು ಪ್ರಮುಖ ಸ್ಥಳಗಳಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದ್ದು, ರಾಜ್ಯ ಸರ್ಕಾರ ವತಿಯಿಂದ ಅಗತ್ಯ ಸಹಕಾರ ದೊರೆತಿದ್ದು, ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ. ಮುಂದಿನ 15ದಿನಗಳಲ್ಲಿ ಕಾಮಗಾರಿಗಳಿಗೆ ಶಂಕುಸ್ಥಾಪನೆನೆರವೇರಿಸಲಾಗುವುದು. ಇದಕ್ಕೆ ಪೂರಕವಾಗಿ ಕೇಂದ್ರದಿಂದಲೂ ಅನುದಾನ ಹಾಗೂ ಅಗತ್ಯ ನೆರವುನೀಡುವಂತೆ ಈ ಸಂಬಂಧ ಕೇಂದ್ರ ರೈಲ್ವೆ ಸಚಿವರೊಂದಿಗೆ ಸಮಾಲೋಚಿಸಿರುವುದಾಗಿ ತಿಳಿಸಿದರು. ಸಿಎಂ ರೈಲ್ವೆ ಸಲಹೆಗಾರ ಶ್ರೀಧರಮೂರ್ತಿ, ನೈಋತ್ಯ ರೈಲ್ವೆಯ ವಿಭಾಗೀಯ ಸಹಾಯಕ ಅಭಿಯಂತರ ಟಿ.ಆರ್‌. ಬಗಾಡೆ, ಶಾಸಕ ಹರತಾಳು ಹಾಲಪ್ಪ, ವಿಧಾನ ಪರಿಷತ್‌ ಸದಸ್ಯೆ ಭಾರತಿ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಸಾಗರ-ಜಂಬಗಾರು ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ ಮತ್ತೂಂದು ಸುಸಜ್ಜಿತ ನಿಲ್ದಾಣವನ್ನು ನಿರ್ಮಿಸಲು ಅನುದಾನ ಒದಗಿಸುವಂತೆ ಹಾಗೂ ಕುಂಸಿ-ಅರಸಾಳು ನಿಲ್ದಾಣಗಳಲ್ಲಿ ಪ್ರಯಾಣಿಕರ ಸೌಲಭ್ಯಕಲ್ಪಿಸಲು, ಎಕ್ಸ್‌ಪ್ರೆಸ್‌ ರೈಲುಗಳನ್ನು ನಿಲುಗಡೆಗೊಳಿಸಲು ರೈಲ್ವೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. – ಬಿ.ವೈ.ರಾಘವೇಂದ್ರ, ಸಂಸದ

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.