ಕಾಂಗ್ರೆಸ್ ಖಾಲಿ ಡಬ್ಬದ ಹಾಗೆ ಶಬ್ಧ ಮಾಡುತ್ತಿದೆ: ಕೆ.ಎಸ್.ಈಶ್ವರಪ್ಪ


Team Udayavani, Nov 13, 2021, 12:27 PM IST

eshwarappa

ಶಿವಮೊಗ್ಗ: ಕಾಂಗ್ರೆಸ್ ನ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಪ್ರಿಯಾಂಕ ಖರ್ಗೆ ಅವರು ಬಾಯಿ ಚಪಲಕ್ಕೆ ಬೇಕಾದ್ದನ್ನು ಹೇಳುತ್ತಿದ್ದಾರೆ. ಬಿಟ್ ಕಾಯಿನ್ ಬಗ್ಗೆ ಒಂದೇ ಒಂದು ದಾಖಲೆ ತೋರಿಸಿದರೆ ನಾವು ನಿಮ್ಮನ್ನು ಮೆಚ್ಚುತ್ತೇವೆ. ಖಾಲಿ ಡಬ್ಬ ಬಾರಿಸಿದ ಹಾಗೆ ಬಾರಿಸುತ್ತಿದ್ದಾರೆ. ಬರಿ ಸಿಕ್ಕಾಪಟ್ಟೆ ಶಬ್ದ ಅಷ್ಟೇ. ತುಂಬಿದ ಕೊಡ ಯಾವಾಗಲೂ‌‌ ಶಬ್ದ ಮಾಡುವುದಿಲ್ಲ. ಬಿಟ್ ಕಾಯಿನ್ ಬಿಟ್ ಕಾಯಿನ್ ಎಂದು ಸುಮ್ಮನೆ ಶಬ್ದ ಮಾಡುತ್ತಿದ್ದಾರೆ. ಇಂತಹವರು ಪ್ರಕರಣದಲ್ಲಿ ಇದ್ದಾರೆಂದು ಸ್ಪಷ್ಟವಾಗಿ ಹೇಳಿದರೆ ಅವರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಏನು ಉದ್ಯೋಗವಿಲ್ಲ. ಅದಕ್ಕೆ ಬಿಟ್ ಕಾಯಿನ್ ವಿಚಾರ ಎತ್ತುಕೊಂಡಿದ್ದಾರೆ. ಬಿಟ್ ಕಾಯಿನ್ ಪ್ರಕರಣದಲ್ಲಿ ಬಿಜೆಪಿಯ ಯಾವುದೇ ಒಬ್ಬ ನಾಯಕ, ಮಂತ್ರಿನೋ, ಮುಖ್ಯಮಂತ್ರಿನೋ, ಪದಾಧಿಕಾರಿಗಳೋ ಯಾರಾದರೂ ಒಬ್ಬರಿದ್ದಾರೆ ಎನ್ನುವುದನ್ನು ಒಂದು ಪೀಸ್ ಪೇಪರ್ ದಾಖಲೆ ತೋರಿಸಲಿ. ತೋರಿಸಿದರೆ ಅವರ ಬಗ್ಗೆ ಖಂಡಿತ ಕ್ರಮ ಕೈಗೊಳ್ಳುತ್ತೇವೆ. ಬರಿ ಪುಕ್ಸಟೆ ನಮ್ಮ ಬಳಿ ದಾಖಲೆ ಇದೆ. ನಾವು ದಾಖಲೆ ಬಿಡುಗಡೆ ಮಾಡ್ತೀವಿ. ಈ ರೀತಿ ಹೇಳಿ ಹೇಳಿ ಅವರು ಅಧಿಕಾರ ಕಳೆದುಕೊಂಡರು. ಗೌರವವನ್ನು ಕಳೆದುಕೊಳ್ಳುತ್ತಿದ್ದಾರೆ. ಬಿಟ್ ಕಾಯನ್ ಬಗ್ಗೆ ನಮಗೆ ಯಾವ ಮುಲಾಜು ಇಲ್ಲ ಎಂದರು.

ಪರಿಷತ್ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ 25 ಸ್ಥಾನಗಳಿಗೆ ಪರಿಷತ್ ಚುನಾವಣೆ ನಡೆಯುತ್ತಿದೆ. ಈಗಾಗಲೇ ಅಭ್ಯರ್ಥಿ ಆಯ್ಕೆ ಬಗ್ಗೆ ಕಟೀಲ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ. ಅಭ್ಯರ್ಥಿಗಳ ಪಟ್ಟಿ ಹೆಚ್ಚು ಕಡಿಮೆ ಫೈನಲ್ ಮಾಡಿ ತೀರ್ಮಾನ ತೆಗೆದುಕೊಂಡಿದ್ದೇವೆ. ಅಧ್ಯಕ್ಷರು, ಸಿಎಂ ಚರ್ಚೆ ಮಾಡಿ ಕೇಂದ್ರದ ನಾಯಕರಿಗೆ ಕಳುಹಿಸುತ್ತಾರೆ. ಕೇಂದ್ರದ ನಾಯಕರು ಇಂದು ಅಥವಾ ನಾಳೆ ಪಟ್ಟಿ ಬಿಡುಗಡೆ ಮಾಡುತ್ತಾರೆ ಎಂದರು.

ಇದನ್ನೂ ಓದಿ:ಮಹಿಳೆ ಮತ್ತು ಆಕೆಯ ಮಗಳ ಮೇಲೆ ಸಾಮೂಹಿಕ ರೇಪ್ ಕೇಸ್; ಮಾಜಿ ಸಚಿವ ಪ್ರಜಾಪತಿಗೆ ಜೀವಾವಧಿ

ಪರಿಷತ್ ಗೆ ಪುತ್ರ ಕಾಂತೇಶ್ ಸ್ಪರ್ಧೆ ವಿಚಾರಕ್ಕೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಮಂತ್ರಿ ಆಗಿರುವ ಕಾರಣ ಪುತ್ರ ಕಾಂತೇಶ್ ಸ್ಪರ್ಧೆ ಮಾಡುವುದು ಬೇಡವೆಂದು ತೀರ್ಮಾನ ತೆಗೆದುಕೊಂಡಿದ್ದೇನೆ. ನಾನು ಮಂತ್ರಿಯಾಗಿರುವ ಸಂದರ್ಭದಲ್ಲಿ ಅವನು ಎಂಎಲ್ ಎ, ಎಂಎಲ್ ಸಿ ಆಗಕೂಡದು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಹಾಗಾಗಿ ಕಾಂತೇಶ್ ನ ಹೆಸರು ಬೇಡ ಎನ್ನುವುದನ್ನು ಸ್ಪಷ್ಟವಾಗಿ ಹೇಳಿದ್ದೇನೆ. ಈ ನನ್ನ ಅಭಿಪ್ರಾಯವನ್ನು ಪಕ್ಷದ ವರಿಷ್ಠರು ಒಪ್ಪುತ್ತಾರೆ ಎಂದು ಭಾವಿಸುತ್ತೇನೆ. ಆದರೆ ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತದೋ, ಅದಕ್ಕೆ ಯಾವತ್ತು ಬದ್ದ. ನನ್ನ ಮಗನ ಹೆಸರನ್ನು ಬಿಟ್ಟು ಬೇರೆ ಹೆಸರನ್ನು ಚರ್ಚೆ ಮಾಡಿದ್ದೇವೆ ಎಂದು ಈಶ್ವರಪ್ಪ ಹೇಳಿದರು.

ಪುತ್ರ ವಿಧಾನಸಭೆ ಮೇಲೆ ಕಣ್ಣಿಟ್ಟಿದ್ದಾರಾ ಎಂಬ ವಿಚಾರಕ್ಕೆ ಮಾತನಾಡಿದ ಅವರು, ಗೊತ್ತಿಲ್ಲ, ಯಾಕೆ ಆಗಬಾರದು ಎಂದರು.

ಕಳೆದ ಬಾರಿ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯ ಶಾಸಕರು ಕಡಿಮೆಯಿದ್ದರು. ಜಿಲ್ಲೆಯಲ್ಲಿ ಗ್ರಾ.ಪಂ. ಸದಸ್ಯರು, ಚುನಾಯಿತ ಜನಪ್ರತಿನಿಧಿಗಳ ಕಡಿಮೆಯಿದ್ದರು. ಆಗಾಗಿ ಕ್ಷೇತ್ರ ಕಳೆದುಕೊಂಡಿದ್ದೇವು. ಈ ಬಾರಿ ಶಿವಮೊಗ್ಗ ಸೇರಿ ರಾಜ್ಯದಲ್ಲಿ ಅತಿ ಹೆಚ್ಚು ಎಂಎಲ್ ಎ, ಎಂಪಿ ಗೆದ್ದುಕೊಂಡಿದ್ದೇವೆ. ಗ್ರಾ.ಪಂ‌. ಅತಿ ಹೆಚ್ಚು ಗೆದ್ದಿದ್ದೇವೆ. ಈ ಬಾರಿ ಪರಿಷತ್ ನಲ್ಲಿ ಶಿವಮೊಗ್ಗ ಸೇರಿದಂತೆ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಇಲ್ಲಿಯವರೆಗೆ ಬಿಜೆಪಿಗೆ ವಿಧಾನಸಭೆಯಲ್ಲಿ ಬಹುಮತ ಇತ್ತು. ಪರಿಷತ್ ನಲ್ಲಿ ಪೂರ್ಣ ಬಹುಮತ ಇರಲಿಲ್ಲ. 25 ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವುದರಿಂದ ಈ ಬಾರಿ ಅತಿ ಹೆಚ್ಚು ಸ್ಥಾನ ಪಡೆಯುವ ಮೂಲಕ ಪರಿಷತ್ ನಲ್ಲಿ ಸಹ ಬಹುಮತ ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.