ಲೌಕಿಕದೊಂದಿಗೆ ಪಾರಮಾರ್ಥಿಕತೆಯ ಚಿಂತನೆ ನಡೆಸಿ

ಪ್ರತಿ ಮನೆಯಲ್ಲಿಯೂ ಭಜನೆಯಿಂದ ಸಾಮಾಜಿಕ ಪರಿವರ್ತನೆ ಆಗುತ್ತದೆ.

Team Udayavani, Oct 20, 2022, 2:05 PM IST

ಲೌಕಿಕದೊಂದಿಗೆ ಪಾರಮಾರ್ಥಿಕತೆಯ ಚಿಂತನೆ ನಡೆಸಿ

ಶಿವಮೊಗ್ಗ: ಲೌಕಿಕ ವ್ಯವಹಾರದ ಜೊತೆಗೆ ನಾವು ಪಾರಮಾರ್ಥಿಕತೆ ಬಗ್ಗೆಯೂ ಚಿಂತನ-ಮಂಥನ ನಡೆಸಿ ಸಮನ್ವಯದೊಂದಿಗೆ ಆಧ್ಯಾತ್ಮಿಕ ಜಾಗೃತಿ ಮೂಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ನಾಡಿನ ಧಾರ್ಮಿಕ ಪರಂಪರೆಗೆ ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ) ಸಮಾಜದ ಕೊಡುಗೆ ಅಪಾರವಾಗಿದೆ ಎಂದು ಬೆಂಗಳೂರಿನ ಉದ್ಯಮಿ ಕೇಶವ ರಂಗ ಪೈ ಹೇಳಿದರು.

ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ) ಸಮಾಜ ಹಾಗೂ ಶ್ರೀ ವಾಗೇಶ್ವರಿ ಮಹಿಳಾ ಮಂಡಳಿ ಆಶ್ರಯದಲ್ಲಿ ಈಚೆಗೆ ಇಲ್ಲಿನ ಓಟಿ ರಸ್ತೆಯ ಲಕ್ಷ್ಮಿ ವೆಂಕಟರಮಣ ದೇವಮಂದಿರದಲ್ಲಿ ಆಯೋಜಿಸಲಾಗಿದ್ದ ಘರ್‌ ಘರ್‌ (ಮನೆ ಮನೆಗೆ) ಭಜನೆ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಶಿವಮೊಗ್ಗದ ಜಿಎಸ್‌ಬಿ ಸಮಾಜ ಕಳೆದೊಂದು ವರ್ಷದಿಂದ ಪ್ರತಿ ಶುಕ್ರವಾರ ಸಂಜೆ ನಗರದ ಬೇರೆ-ಬೇರೆ ಮನೆಗಳಲ್ಲಿ ನಿರಂತರವಾಗಿ ಭಜನಾ ಕಾರ್ಯಕ್ರಮ ನಡೆಸಿರುವುದು ಶ್ಲಾಘನೀಯ. ಪ್ರತಿ ಮನೆಯಲ್ಲಿಯೂ ಭಜನೆಯಿಂದ ಸಾಮಾಜಿಕ ಪರಿವರ್ತನೆ ಆಗುತ್ತದೆ. ಭಜನಾ ಸಂಸ್ಕೃತಿಯನ್ನು ಮುಂದಿನ ಜನಾಂಗಕ್ಕೂ ನಾವು ಹಸ್ತಾಂತರಿಸಿ ಆರೋಗ್ಯಪೂರ್ಣ, ಸುಸಂಸ್ಕೃತ ಸಮಾಜ ರೂಪಿಸಬಹುದೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ದೃಢ ಭಕ್ತಿಯಿಂದ ಭಗವಂತನನ್ನು ಆರಾಧಿಸಿದರೆ ಆತನ ಅನುಗ್ರಹಕ್ಕೆ ಪಾತ್ರರಾಗಬಹುದು ಎಂದರು. ಜಿಎಸ್‌ಬಿ ಸಮಾಜದ ಕಾರ್ಯದರ್ಶಿ ಸದಾನಂದ ನಾಯಕ್‌ ಮಾತನಾಡಿ ತಪಸ್ಸು, ಯಜ್ಞ, ಯಾಗಾದಿ ಮಾಡಲು ಸಾಧ್ಯವಾ ಗದಿದ್ದರೂ ನಿತ್ಯವೂ ಇಚ್ಛಾಶಕ್ತಿಯಿಂದ ಭಜನೆ ಮೂಲಕ ಭಗವಂತನ ನಾಮಸ್ಮರಣೆ ಮಾಡಿದರೆ ಜೀವನ ಪಾವನವಾಗುತ್ತದೆ ಎಂದರು.

ಸಮಾಜದ ಅಧ್ಯಕ್ಷ ಭಾಸ್ಕರ್‌ ಕಾಮತ್‌ ಅಧ್ಯಕ್ಷತೆ ವಹಿಸಿದ್ದರು. ವಾಗೇಶ್ವರಿ ಮಹಿಳಾ ಮಂಡಳಿ ಅಧ್ಯಕ್ಷೆ ಕಿರಣ್‌ ಮಾಯಿ, ಪ್ರತಿಮಾ ನಾಯಕ್‌, ನಳಿನಿ ಕಾಮತ್‌, ಸಂತೃಪ್ತಿ, ಅನಿತ ಮತ್ತಿತರರು ಭಾಗವಹಿಸಿದ್ದರು. ರಮೇಶ್‌ ಶಣೈ ಸ್ವಾಗತಿಸಿದರು. ಬಿ.ಎಸ್‌.ಕಾಮತ್‌ ಪ್ರಾಸ್ತಾವಿಕ ಮಾತನಾಡಿದರು. ಕಿರಣ್‌ ಪೈ ನಿರೂಪಿಸಿದರು. ಮನೋಹರ್‌ ಕಾಮತ್‌ ವಂದಿಸಿದರು

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.