ಹಕ್ಕುಪತ್ರ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ಕಾಗೋಡು
Team Udayavani, Aug 16, 2017, 7:05 AM IST
ಶಿವಮೊಗ್ಗ: ಸರ್ಕಾರಿ ಭೂಮಿಯಲ್ಲಿ ಮಂಜೂರಾತಿ ಇಲ್ಲದೆ ಮನೆ ಮತ್ತು ನಿವೇಶನ ಹೊಂದಿದವರಿಗೆ ಹಕ್ಕುಪತ್ರಕ್ಕಾಗಿ 94ಸಿ ಮತ್ತು 94ಸಿಸಿ ಅಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ. 12ರವರೆಗೆ ವಿಸ್ತರಿಸಲಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಹಕ್ಕುಪತ್ರ ಸಿಗಬೇಕೆಂಬ ಉದ್ದೇಶದಿಂದ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದರು.
ಕೇಂದ್ರಕ್ಕೆ ಮನವಿ: ಕೇಂದ್ರ ಸರ್ಕಾರ ಈ ಬಾರಿ ಫಸಲು ನಷ್ಟದ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದೆ. ಹೊಸ ಮಾರ್ಗಸೂಚಿ ಪ್ರಕಾರ, ಪರಿಹಾರ ಮೊತ್ತ ಕಡಿಮೆಯಾಗಿದ್ದು, ಕಳೆದ ವರ್ಷದಂತೆ ನಷ್ಟ ಪರಿಹಾರ ದೊರಕುವುದಿಲ್ಲ. ಆದ್ದರಿಂದ ಮಾರ್ಗಸೂಚಿಯನ್ನು
ಬದಲಾಯಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಎಂದರು.
ಬೆಳೆವಿಮೆಯನ್ನು ರೈತರಿಗೆ ಸರಿಯಾಗಿ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿಯೊಬ್ಬರೂ ಬೆಳೆವಿಮೆಯನ್ನು
ಮಾಡಿಸಿಕೊಳ್ಳಬೇಕು. ಹೊಸದಾಗಿ ಜಾರಿಗೊಳಿಸಲಾಗಿರುವ ಬೆಳೆವಿಮೆ ಪದ್ಧತಿಗೆ ನಮ್ಮ ರೈತರು ಹೊಂದಿಕೊಳ್ಳಬೇಕಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ