ಕೋವಿಡ್ – ಕೆಎಫ್‌ಡಿ ತಡೆಗೆ ಮುಂಜಾಗ್ರತೆ ವಹಿಸಿ: ಹಾಲಪ್ಪ

Team Udayavani, Nov 11, 2020, 9:20 PM IST

ಕೋವಿಡ್ – ಕೆಎಫ್‌ಡಿ ತಡೆಗೆ ಮುಂಜಾಗ್ರತೆ ವಹಿಸಿ: ಹಾಲಪ್ಪ

ಸಾಗರ: ತಾಲೂಕಿನಲ್ಲಿ ಕೋವಿಡ್ ಸದ್ಯ ನಿಯಂತ್ರಣದಲ್ಲಿದೆ. ಆದರೆ ಚಳಿಗಾಲ ಇರುವುದರಿಂದ ಯಾವುದೇ ಸಂದರ್ಭದಲ್ಲಿ ಉಲ್ಬಣವಾಗಬಹುದು. ಈ ನಿಟ್ಟಿನಲ್ಲಿ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವಂತೆ ಶಾಸಕ ಎಚ್‌. ಹಾಲಪ್ಪ ಹರತಾಳು ಸೂಚನೆ ನೀಡಿದರು.

ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೋವಿಡ್ ಮತ್ತು ಕೆಎಫ್‌ಡಿ ಕುರಿತು ಕರೆಯಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್‌ ನಿಯಂತ್ರಣ ಕಾರ್ಯಕ್ಕೆ ಸಂಬಂಧಪಟ್ಟಂತೆ ಹಣಕಾಸಿನ ತೊಂದರೆ ಇಲ್ಲ. ಕೋವಿಡ್‌ ಸಂಬಂಧ 50 ಲಕ್ಷ ರೂ. ಸರ್ಕಾರದಿಂದ ಬಿಡುಗಡೆಯಾಗಿದೆ. ಅದರಲ್ಲಿ ಸುಮಾರು 13 ಲಕ್ಷ ರೂ. ವೆಚ್ಚ ಮಾಡಿದ್ದು ಉಳಿದ ಹಣವನ್ನು ಸಹ ಕೋವಿಡ್‌ ಸಂದರ್ಭದ ಖರ್ಚುವೆಚ್ಚದ ನಿರ್ವಹಣೆಗೆ ಬಳಸಿಕೊಳ್ಳಲು ಸೂಚನೆ ನೀಡಿದೆ. ಚಳಿಗಾಲದಲ್ಲಿ ಕೋವಿಡ್‌ ಹರಡುವ ಕುರಿತು ನಗರ ವ್ಯಾಪ್ತಿಯಲ್ಲಿ ನಗರಸಭೆ, ಗ್ರಾಪಂ ವ್ಯಾಪ್ತಿಯಲ್ಲಿ ತಾಲೂಕು ಆಡಳಿತದಿಂದ ಧ್ವನಿವರ್ಧಕದ ಮೂಲಕ ಜನಜಾಗೃತಿ ಮೂಡಿಸಲು ಧ್ವನಿವರ್ಧಕ ಬಳಕೆ, ಕರಪತ್ರ ವಿತರಣೆಯಂತಹ ಕೆಲಸ ತಕ್ಷಣದಿಂದಲೇ ನಡೆಯಬೇಕು. ಜನರನ್ನು ಮಾನಸಿಕವಾಗಿ ಸಜ್ಜುಗೊಳಿಸುವ ನಿಟ್ಟಿನಲ್ಲಿ ಆಡಳಿತ ಗಮನ ಹರಿಸಬೇಕು ಎಂದು ತಿಳಿಸಿದರು.

ಕೆಎಫ್‌ಡಿ ನಿಯಂತ್ರಣಕ್ಕೆ ಅಗತ್ಯ ಕ್ರಮ: ತಾಲೂಕಿನಲ್ಲಿ ಕಳೆದ ವರ್ಷ ಮಂಗನ ಕಾಯಿಲೆ ನಿಯಂತ್ರಣ ಮಾಡುವಲ್ಲಿ ಸಾಕಷ್ಟು ಯಶಸ್ವಿಯಾಗಿದ್ದೇವೆ. ಈ ಸಾರಿ ಬೇಸಿಗೆ ಸಮೀಪಿಸುತ್ತಿದ್ದು ಮಂಗನ ಕಾಯಿಲೆ ಸೋಂಕು ಹೆಚ್ಚದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕಳೆದ ವರ್ಷ ಸೋಂಕು ಕಂಡುಬಂದ ಪ್ರದೇಶಗಳಲ್ಲಿ ವ್ಯಾಕ್ಸಿನೇಷನ್‌ ಹಂತಹಂತವಾಗಿ ನಡೆಯುತ್ತಿದೆ. ಈಗಾಗಲೇ ಅರಲಗೋಡು ಕಡೆ ಮೊದಲ ಮತ್ತು ಎರಡನೇ ಸುತ್ತಿನ ವ್ಯಾಕ್ಸಿನೇಷನ್‌ ಹಾಕುವ ಪ್ರಕ್ರಿಯೆ ಮುಗಿದಿದೆ. ಅಂತಿಮ ಹಂತದ ಲಸಿಕೆ ಹಾಕುವ ಕಾರ್ಯಕ್ರಮ ಪ್ರಾರಂಭವಾಗಿದ್ದು, ತಕ್ಷಣ ನಿಗಾ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ|ಮೋಹನ್‌ ಕೆ.ಎಸ್‌., ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್‌, ಉಪಾಧ್ಯಕ್ಷ ಮಹೇಶ್‌ ವಿ., ಎಸಿ ಡಾ| ನಾಗರಾಜ್‌ ಎಲ್‌., ತಹಶೀಲ್ದಾರ್‌ ಚಂದ್ರಶೇಖರ ನಾಯ್ಕ, ಪೌರಾಯುಕ್ತ ಎಚ್‌. ಕೆ. ನಾಗಪ್ಪ, ಡಿವೈಎಸ್‌ಪಿ ವಿನಾಯಕ್‌ ಶೆಟ್ಟಿಗೇರ್‌, ತಾಪಂ ಕಾರ್ಯನಿರ್ವಾಹಣಾಧಿ ಕಾರಿ ಪುಷ್ಪಾ ಎಂ. ಕಮ್ಮಾರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಬಿಂಬ ಕೆ.ಆರ್‌., ಡಾ| ಪ್ರಕಾಶ್‌ ಬೋಸ್ಲೆ ಕೆ.ಆರ್‌., ಅರಣ್ಯ ಇಲಾಖೆಯ ಪ್ರಮೋದ್‌ ಡಿ.ಆರ್‌., ಲೋಕೋಪಯೋಗಿ ಇಲಾಖೆಯ ದಿನೇಶ್‌, ಜಿಪಂ ಇಂಜಿನಿಯರಿಂಗ್‌ ವಿಭಾಗದ ಹಾಲೇಶಪ್ಪ ಇನ್ನಿತರರಿದ್ದರು.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ

Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ

ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ

ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ

B.Y. Raghavendra: ಇಂಟರ್‌ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್‌ ಮತಬೇಟೆ

B.Y. Raghavendra: ಇಂಟರ್‌ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್‌ ಮತಬೇಟೆ

ರಾಘವೇಂದ್ರ

Shimoga; ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಗೆ ಹಿಂದೂಗಳ ಬಲಿ: ರಾಘವೇಂದ್ರ ಕಿಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.