ಜೋಗ ಜಲಪಾತ: ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಲ್ಲ
Team Udayavani, Sep 15, 2021, 8:24 PM IST
ಸಾಗರ: ಪ್ರವಾಸಿಗರು ವಿಶ್ವವಿಖ್ಯಾತ ಜೋಗ ಜಲಪಾತ ನೋಡಲು ಕೋವಿಡ್ ನೆಗೆಟಿವ್ ದೃಢೀಕರಣ ಪತ್ರ ಹಾಜರುಪಡಿಸಬೇಕಿಲ್ಲ ಎಂದು ಪ್ರವಾಸೋದ್ಯಮ ಇಲಾಖೆಯ ಜಂಟಿ ಕಾರ್ಯದರ್ಶಿ ಎಚ್.ಎಸ್. ರಾಮಕೃಷ್ಣ ತಿಳಿಸಿದರು.
ಕೋವಿಡ್ ನಿರ್ಬಂಧದ ಕಾರಣ ಜೋಗದಲ್ಲಿ ಪ್ರವಾಸಿಗರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸಲು ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಅವರು ಮಾಹಿತಿ ನೀಡಿ, ಜಲಪಾತ ದರ್ಶನಕ್ಕೆ ಬರುವ ಪ್ರವಾಸಿಗರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಸಿಕೆ ಹಾಕಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಂಡಿರಬೇಕು. ಈ ಬಗ್ಗೆ ಪ್ರಾಧಿಕಾರದ ಪ್ರಧಾನ ದ್ವಾರದಲ್ಲಿ ಪರಿಶೀಲಿಸಲಾಗುವುದು. ಕನಿಷ್ಠ ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿರಲೇಬೇಕು. ಇಲ್ಲದಿದ್ದಲ್ಲಿ ಅವರಿಗೆ ಲಸಿಕೆಯ ಮಹತ್ವವನ್ನು ತಿಳಿಸಿಕೊಡಲಾಗುವುದು ಎಂದು ತಿಳಿಸಿದರು.
ಜೋಗದ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರವು ಉನ್ನತ ಮಟ್ಟದಲ್ಲಿ ಸಭೆ ನಡೆಸಿ ಚರ್ಚಿಸುತ್ತಿದೆ. ಶೀಘ್ರವೇ ನೂತನ ಯೋಜನೆಗಳ ಕಾಮಗಾರಿಗಳಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
MUST WATCH
ಹೊಸ ಸೇರ್ಪಡೆ