ಶಿವಮೊಗ್ಗ ಗಲಭೆ ಪ್ರಕರಣ: 62 ಜನರ ಬಂಧನ, ಡಿ.5ರವರೆಗೆ ಕರ್ಫ್ಯೂ ಮುಂದುವರಿಕೆ
Team Udayavani, Dec 4, 2020, 12:16 PM IST
ಶಿವಮೊಗ್ಗ: ನಗರದಲ್ಲಿ ಗುರುವಾರ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 62 ಜನರನ್ನು ಬಂಧಿಸಲಾಗಿದೆ ಎಂದು ಪೂರ್ವ ವಲಯ ಐಜಿಪಿ ಎಸ್.ರವಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಸಂಪೂರ್ಣ ಹತೋಟಿಗೆ ಬಂದಿದೆ. ಶಾಂತಿ ನೆಲೆಸುತ್ತಿದೆ ಎಂದರು. ಘಟನೆಯಲ್ಲಿ19 ಮಂದಿ ಗಾಯಗೊಂಡಿದ್ದಾರೆ. ದೊಡ್ಡಪೇಟೆ ಮತ್ತು ಕೋಟೆ ಠಾಣೆ ವ್ಯಾಪ್ತಿಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ನಾಗೇಶ್ ಹಲ್ಲೆ ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದರು.
ಈಗಾಗಲೇ 148 ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಬೇರೆ ಜಿಲ್ಲೆಗಳಿಂದ ಬರುವ ದುಷ್ಕರ್ಮಿಗಳನ್ನು ತಡೆಯಲು 9 ಕಡೆ ಚೆಕ್ ಪೋಸ್ಟ್ ಹಾಕಲಾಗಿದೆ.19 ಮೊಬೈಲ್ ಗಸ್ತು ವಾಹನ ಹಾಗೂ 22 ಚೀತಾ ವಾಹನಗಳು ನಗರದಾದ್ಯಂತ ಗಸ್ತು ತಿರುಗುತ್ತಿವೆ ಎಂದ ಅವರು ಮೂರು ಪ್ಯಾಟ್ರೋಲ್ ವಾಹನ ಗಸ್ತು ತಿರುಗುತ್ತಿವೆ. ನಗರದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ದಾವಣಗೆರೆ ವಲಯದ 1 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದರು.
ಇದನ್ನೂ ಓದಿ:ಶಿವಮೊಗ್ಗದಲ್ಲಿ ಮುಸಲ್ಮಾನ್ ಗೂಂಡಾಗಿರಿ ನಡೆಯಲ್ಲ: ಈಶ್ವರಪ್ಪ ಕೆಂಡಾಮಂಡಲ
ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ ಎಂದ ಅವರು, ಪರಿಸ್ಥಿತಿ ಬಿಗಡಾಯಿಸದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತದೆ. ನಗರದಲ್ಲಿ ಶಾಂತಿ ನೆಲೆಸಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಮಾತನಾಡಿ, ಡಿ.5 ರವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ. ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವತ್ಯಯ ಆಗುವುದಿಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಎಸ್ ಪಿ ಕೆ.ಎಂ ಶಾಂತರಾಜು ಭಾಗವಹಿಸಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಲೇಷಿಯಾಕ್ಕೆ ರಫ್ತಾಗುತ್ತಿದ್ದ 400ಟನ್ ಗೂ ಅಧಿಕ ಅಕ್ರಮ ಪಡಿತರ ಅಕ್ಕಿ ವಶ : ತನಿಖೆ ಚುರುಕು
ಪಿಯು ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲು ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್
ದೇವರ ದರ್ಶನಕ್ಕೆ ಬಂದ ಮೂವರು ಸಮುದ್ರ ಪಾಲು : ಗೋಕರ್ಣ ಕಡಲಿನಲ್ಲಿ ನಡೆದ ದುರಂತ
ಮಂಗಳೂರು : 44.2 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ
ಹಣ ಡಬಲ್ ಮಾಡುವುದಾಗಿ ನಂಬಿಸಿ 20 ಕೋಟಿ ರೂ. ಪಂಗನಾಮ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ