ಅಭಿಮಾನಿ ಮನೆಗೆ ನಟ ದರ್ಶನ್ ಭೇಟಿ
Team Udayavani, Jan 27, 2019, 12:30 AM IST
ಶಿವಮೊಗ್ಗ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊಳೆಹೊನ್ನೂರು ಗ್ರಾಮದ ಜೆಡಿಎಸ್ ಮುಖಂಡ ಎಂ.ನಾಗೇಶ್ ಮನೆಗೆ ಭೇಟಿ
ನೀಡಿ ಕುಟುಂಬ ಸದಸ್ಯರೊಂದಿಗೆ ಕೆಲ ಸಮಯ ಕಳೆದರು.
ಕಳೆದೆರಡು ದಿನಗಳಿಂದ ಹೊಸನಗರದ ಹೋಮ್ಸ್ಟೇ ಒಂದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ದರ್ಶನ್, ಶುಕ್ರವಾರ ನಾಗೇಶ್ ಅವರ ಮನೆಗೆ ಭೇಟಿ ಭೇಟಿ ನೀಡಿದರು.
ನಾಗೇಶ್ ಮೊದಲಿನಿಂದಲೂ ನಟ ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ದರ್ಶನ್ ಅವರ ಬಳಿ ದಿನಾಂಕ ಪಡೆದು ತಮ್ಮ ಹೊಸ ಮನೆಯ ಗೃಹ ಪ್ರವೇಶ ಹಮ್ಮಿಕೊಂಡಿದ್ದರು. ಆದರೆ ಕೊನೆ ಕ್ಷಣದಲ್ಲಿ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರಿಂದ ದರ್ಶನ್ ಈ ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ. ನಾಗೇಶ್ ಅವರು ಮನೆಯ ಎದುರು ನಿರ್ಮಿಸಿದ ತೂಗುದೀಪದ ಆಕೃತಿ ನೋಡಿ ದರ್ಶನ್ ಮೆಚ್ಚುಗೆ ವ್ಯಕ್ತಪಡಿಸಿದರು.
ಅಭಿಮಾನಿಯ ಹೊಸಮನೆಯನ್ನು ವೀಕ್ಷಿಸಿ ಕುಟುಂಬ ಸದಸ್ಯರೊಂದಿಗೆ ಕೆಲ ಸಮಯ ಕಳೆದ ನಟ, ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರಿಗೆ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?