ಹಳೇ ಪಿಂಚಣಿ ಮರು ಜಾರಿಗೆ ಆಗ್ರಹ

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಬೇಕು

Team Udayavani, Dec 15, 2022, 6:31 PM IST

ಹಳೇ ಪಿಂಚಣಿ ಮರು ಜಾರಿಗೆ ಆಗ್ರಹ

ಶಿವಮೊಗ್ಗ: ಹಳೇ ಪಿಂಚಣಿ ಯೋಜನೆ ಮರು ಜಾರಿಗೆ ಒತ್ತಾಯಿಸಿ ಸರಕಾರಿ ಎನ್‌ಪಿಎಸ್‌ ನೌಕರರ ಸಂಘದ ಶಿವಮೊಗ್ಗ ತಾಲೂಕು ಘಟಕದ ವತಿಯಿಂದ ಜಾಗೃತಿ ಜಾಥಾ ನಡೆಸಿ ಜಿಲ್ಲಾಧಿಕಾರಿ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಯಿತು. ನೂತನ ಪಿಂಚಣಿ ಯೋಜನೆ ಅತ್ಯಂತ ಕೆಟ್ಟದ್ದಾಗಿದ್ದು, ಸರ್ಕಾರಿ ನೌಕರರ ನಿವೃತ್ತಿ ಜೀವನಕ್ಕೆ ಮಾರಕವಾಗಿದೆ. ನಿವೃತ್ತಿ ಜೀವನದ ಸಮಯದಲ್ಲಿ ಅತ್ಯಂತ ಹೀನ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಅಳಲು ತೋಡಿಕೊಂಡರು.

ಎನ್‌ಪಿಎಸ್‌ ರದ್ದುಗೊಳಿಸುವುದು ಕೇಂದ್ರ ಸರ್ಕಾರದ ನಿರ್ಧಾರ ಹಾಗೂ ರಾಜ್ಯ ಸರ್ಕಾರಗಳಿಗೆ ಅದನ್ನು ಬದಲಾಯಿಸಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ಇತ್ತು. ಆದರೆ 2022ರ ರಾಜ್ಯ ಬಜೆಟ್‌ನಲ್ಲಿ ರಾಜಸ್ತಾನ ಹಾಗೂ ಚತ್ತೀಸ್‌ ಘಡ, ಜಾರ್ಖಂಡ್‌, ಪಂಜಾಬ್‌ ರಾಜ್ಯ ಸರ್ಕಾರಗಳು ಎನ್‌ಪಿಎಸ್‌ ರದ್ದು ಮಾಡಿ ಆದೇಶಿಸಿವೆ. ಪ್ರಸ್ತುತ ಹಿಮಾಚಲ ಪ್ರದೇಶದ ಹೊಸ ಸರ್ಕಾರ ಎನ್‌ಪಿಎಸ್‌ ರದ್ದತಿ ಮಾಡುವ ಘೋಷಣೆ ಮಾಡಿದ್ದು, ಈಗ ರಾಜ್ಯದಲ್ಲಿಯೂ ನೂತನ ಪಿಂಚಣಿ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಅನುಷ್ಠಾನ ಗೊಳಿಸಬೇಕು ಎಂದು ಆಗ್ರಹಿಸಿದರು.

ನಾಲ್ಕು ಲಕ್ಷ ಎನ್‌ಪಿಎಸ್‌ ನೌಕರರು ಹಾಗೂ ಅವಲಂಬಿತ ಕುಟುಂಬ ಸದಸ್ಯರು ರಾಜ್ಯಮಟ್ಟದಲ್ಲಿ ಡಿ.19 ರಿಂದ ಬೃಹತ್‌ ಅನಿರ್ಧಿಷ್ಟ ಅವಧಿ ಹೋರಾಟ ನಡೆಸಲಿದ್ದೇವೆ. ರಾಜ್ಯ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಬೇಕು. ಹಳೇ ಪಿಂಚಣಿ ಯೋಜನೆ ಅನುಷ್ಠಾನ ಮಾಡಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿ ಮೇಯರ್‌ ಎಸ್‌.ಶಿವಕುಮಾರ್‌ ಅವರು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ನಂತರ ಶಾಸಕರಾದ ಕೆ.ಎಸ್‌. ಈಶ್ವರಪ್ಪ ಹಾಗೂ ಆಯನೂರು ಮಂಜುನಾಥ ಅವರಿಗೆ ಮನವಿ ಸಲ್ಲಿಸಲಾಯಿತು.ಶಿವಮೊಗ್ಗ ತಾಲೂಕಿನ ಎಲ್ಲಾ ಇಲಾಖೆಯ ಸುಮಾರು ಒಂದೂವರೆ ಸಾವಿರ ನೌಕರರು ಭಾಗವಹಿಸಿದ್ದರು.

ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್‌. ರಾಘವೇಂದ್ರ, ತಾಲೂಕು ಅಧ್ಯಕ್ಷ ಎಸ್‌.ಪ್ರಭಾಕರ್‌, ತಾಲೂಕು ಗೌರವ ಅಧ್ಯಕ್ಷ ಡಾ| ನಾಗರಾಜ್‌ ಪರಿಸರ, ಗೋವಿಂದರಾಜು, ಡಾ| ಹಾಲಮ್ಮ, ಶರತ್‌ ಕುಮಾರ್‌, ಕಿರಣ್‌ ಜಿ.ಜೆ, ವಿಜಯ್‌ ಕುಮಾರ್‌ ಬಿಟಿ, ಹೂವ್ಯಾ ನಾಯ್ಕ, ರಂಗನಾಥ ಇತರರು ಪಾಲ್ಗೊಂಡಿದ್ದರು.

ಹಳೇ ಪಿಂಚಣಿ ಹೋರಾಟ ಅತ್ಯಂತ ನ್ಯಾಯಸಮ್ಮತ. ವಿಧಾನ ಮಂಡಲದ ಕಲಾಪದಲ್ಲಿ ಧ್ವನಿ ಎತ್ತುವ ಕೆಲಸ ನಾನು ಮಾಡುತ್ತೇನೆ. ನೌಕರರ ಬದುಕನ್ನು ಸಂಕಷ್ಟಕ್ಕೆ ದೂಡುವ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಲು ಸಂಪೂರ್ಣ ಶ್ರಮಿಸುತ್ತೇನೆ.
ಆಯನೂರು ಮಂಜುನಾಥ್‌,
ವಿಧಾನ ಪರಿಷತ್‌ ಶಾಸಕ

ಬೆಂಗಳೂರಿನ ಫ್ರೀಡಂಡಂ ಪಾರ್ಕಿನ ಬದಲು ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಅಲ್ಲಿ ಎಲ್ಲರೂ ಇರುತ್ತಾರೆ. ಅಲ್ಲಿಗೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ನೀಡಿ ನಾವು ಸದಾ ನಿಮ್ಮ ಜೊತೆಗೆ ಇರುತ್ತೇವೆ. ನಿಮ್ಮ ಸಮಸ್ಯೆ ಬಗ್ಗೆ ಖಂಡಿತವಾಗಿಯೂ ಸದನದಲ್ಲಿ ಗಮನ
ಸೆಳೆಯುತ್ತೇವೆ.
ಕೆ.ಎಸ್‌. ಈಶ್ವರಪ್ಪ, ಶಾಸಕರು

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.