ಹರ್ಷ ಕೊಲೆಗೆ ಬಳಸಿದ್ದು ಬೇರೆ ರಾಜ್ಯದ ಕಾರು! ವಿಡಿಯೋ ಕಾಲ್ ಮಾಡಿದವರ ಪತ್ತೆ ಮಾಡಿದ್ದೇವೆ!

ಶಿವಮೊಗ್ಗ ಎಸ್ ಪಿ ಲಕ್ಷ್ಮೀಪ್ರಸಾದ್ ಮಾಹಿತಿ

Team Udayavani, Feb 25, 2022, 1:18 PM IST

ಶಿವಮೊಗ್ಗ ಎಸ್ ಪಿ ಲಕ್ಷ್ಮೀಪ್ರಸಾದ್ ಮಾಹಿತಿ

ಶಿವಮೊಗ್ಗ: ಹಿಂದೂ ಪರ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಮಾಡಲು ಆರೋಪಿಗಳು ಒಂದು ತಿಂಗಳಿನಿಂದಲೇ ಯೋಜನೆ ಹಾಕಿಕೊಂಡಿದ್ದರು. ಮಾತ್ರವಲ್ಲದೆ ಹತ್ಯೆಗೆ ಛತ್ತಿಸ್‌ಗಡ ನೋಂದಣಿಯ ಕಾರು ಬಳಕೆಯಾಗಿದ್ದು, ಕೊಲೆ ಮಾಡಿದ ಆರೋಪಿಗಳು ಇನ್ನೊಂದು ಕಾರು ಹಾಗೂ ಬೈಕ್‌ ಬಳಸಿ ಪರಾರಿಯಾಗಿದ್ದರು. ಕೃತ್ಯಕ್ಕೆ ಬಳಕೆಯಾಗಿದ್ದ ಈ ಮೂರು ವಾಹನಗಳನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹತ್ತು ಜನರನ್ನು ಬಂಧಿಸಲಾಗಿದೆ. ಕೊಲೆ ಮಾಡಲು ಹಾಗೂ ಕೊಲೆ ಮಾಡಿದ ಬಳಿಕ ತಪ್ಪಿಸಿಕೊಳ್ಳಲು ಬಳಸಿದ್ದ ವಾಹನಗಳನ್ನೂ ವಶಕ್ಕೆ ಪಡೆಯಲಾಗಿದೆ. ಬಂಧಿ ತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದೀಗ 10 ಆರೋಪಿಗಳನ್ನು ನ್ಯಾಯಾಂಗ ಬಂಧನದಿಂದ 11 ದಿನಗಳ ಕಾಲ ಪೊಲೀಸರು ವಶಕ್ಕೆ ಪಡೆದಿದ್ದು, ಇನ್ನಷ್ಟು ವಿಚಾರಣೆ ನಡೆಸಲಿದ್ದಾರೆ. ಆಗ ಮತ್ತಷ್ಟು ಜನರ ಬಂಧನವಾಗುವ ಸಾಧ್ಯತೆಯಿದೆ. ಆರೋಪಿಗಳಿಗೆ ಫಂಡಿಂಗ್‌ ಮಾಡಿದವರು, ಹರ್ಷನ ಕೊಲೆ ಮಾಡಲು ಕುಮ್ಮಕ್ಕು ನೀಡಿದವರನ್ನೂ ಬಂಧಿ ಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಸೆಕೆಂಡ್‌ ಹ್ಯಾಂಡ್‌ ಕಾರು
ಆರೋಪಿಗಳು ಹರ್ಷ ಕೊಲೆಗಾಗಿ ಛತ್ತೀಸ್‌ಗಡ ನೋಂದಣಿಯ ಕಾರನ್ನು ಬಳಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ನಾವು ಸೆಕೆಂಡ್‌ ಹ್ಯಾಂಡ್‌ ಕಾರನ್ನು ಸೇಲ್‌ ಮಾಡುತ್ತಿದ್ದೆವು ಎಂದು ಆರೋಪಿಗಳು ಹೇಳುತ್ತಿದ್ದಾರೆ. ಅಕ್ಕಪಕ್ಕದ ರಾಜ್ಯದ ಕಾರುಗಳನ್ನು ತಂದು ಇಲ್ಲಿ ಮಾರಾಟ ಮಾಡುವುದು ಸರಿ. ಆದರೆ ಛತ್ತೀಸಗಡ ಕಾರನ್ನು ಇವರು ಎಲ್ಲಿಂದ ಖರೀದಿಸಿ ತಂದರು ಎನ್ನುವುದು ಪೊಲೀಸರಿಗೆ ಯಕ್ಷ ಪ್ರಶ್ನೆಯಾಗಿದೆ. ಇದೇ ಕಾರಣದಿಂದಲೇ ಕಾರಿನ ಮಾಲಕರ ಪತ್ತೆಗೆ ಪೊಲೀಸರು ಮುಂದಾಗಿದ್ದು, ತನಿಖೆ ಬಳಿಕ ಮತ್ತಷ್ಟು ವಿವರ ಸಿಗಲಿದೆ.

ಇದನ್ನೂ ಓದಿ :ರಷ್ಯಾ-ಉಕ್ರೇನ್ ನಡುವೆ ಯುದ್ಧ: ಮಾಹಿತಿ ಕಲೆ ಹಾಕಲು ಕಂಟ್ರೋಲ್ ರೂಂ ಸ್ಥಾಪನೆ

ವೀಡಿಯೋ ಕಾಲ್‌ ಮಾಡಿದ್ದ
ಯುವತಿಯರ ವಿವರ ಪತ್ತೆ?
ಹರ್ಷ ಸಾಯುವ ಕೆಲವೇ ನಿಮಿಷಗಳ ಹಿಂದೆ ವೀಡಿಯೋ ಕರೆ ಮಾಡಿದ್ದ ಯುವತಿಯರ ವಿವರಗಳು ಪೊಲೀಸರಿಗೆ ದೊರಕಿದೆ. ಈ ಪ್ರಕರಣದಲ್ಲಿ ಆ ಯುವತಿಯರ ಪಾತ್ರ ಇಲ್ಲ ಎನ್ನುವುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಕರೆ ಮಾಡಿದವರು ಸೋಷಿಯಲ್‌ ಮೀಡಿಯಾದಲ್ಲಿ ಹರ್ಷ ´ೋಟೋಗಳನ್ನು ನೋಡಿ ಸ್ನೇಹ ಬೆಳೆಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ದುರಾದೃಷ್ಟಕ್ಕೆ ಅದೇ ಗಳಿಗೆಯಲ್ಲಿ ಹರ್ಷ ಹತ್ಯೆ ಆಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಈ ಎಲ್ಲ ಬೆಳವಣಿಗೆ ಮಧ್ಯೆ ಹರ್ಷ ಮೊಬೈಲ್‌ ಮಾತ್ರ ಸಿಕ್ಕಿಲ್ಲ ಎನ್ನುತ್ತಿರುವುದು ಕುತೂಹಲ ಮೂಡಿಸಿದೆ. ಹೀಗಾಗಿ ಪೊಲೀಸರು ಆತನ ಮೊಬೈಲ್‌ಗೆ ಬಂದಿರುವ ಕರೆಗಳು ಹಾಗೂ ಚಾಟಿಂಗ್‌ ವಿವರ ಪಡೆಯಲು ಪ್ರಯತ್ನಿಸುತ್ತಿದ್ದಾರೆ.

ಫೆ. 28ರ ವರೆಗೂ ನಿಷೇಧಾಜ್ಞೆ
ಹರ್ಷ ಅಂತಿಮ ಯಾತ್ರೆ ವೇಳೆ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿ ಗಲಾಟೆ ನಡೆಸಿದವರ ಪತ್ತೆಗೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ಜತೆಗೆ ಶಿವಮೊಗ್ಗದಲ್ಲಿ ನಡೆದ ಗಲಭೆ ವೇಳೆ ಪೊಲೀಸರಿಗೆ ಮಚ್ಚು ತೋರಿಸಿದವರನ್ನು ಪತ್ತೆ ಮಾಡಿರುವ ಪೊಲೀಸರು ಅವರ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ. ಶನಿವಾರದಿಂದ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದ್ದರೂ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಫೆ. 28ರ ಬೆಳಗ್ಗೆ 9 ಗಂಟೆವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.