ಜಿಲ್ಲೇಲಿ 28,805 ಹೊಸ ಮತದಾರರ ಸೇರ್ಪಡೆ


Team Udayavani, Feb 9, 2019, 10:23 AM IST

ray-4.jpg

ಶಿವಮೊಗ್ಗ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೊಸದಾಗಿ 28,805 ಮಂದಿಯನ್ನು ಸೇರಿಸಲಾಗಿದೆ. ಇದೇ ಅವಧಿಯಲ್ಲಿ ಮರಣ ಇತ್ಯಾದಿ ಕಾರಣಗಳಿಂದಾಗಿ 22,275 ಮಂದಿಯನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಇದರಿಂದಾಗಿ ಒಟ್ಟು 6530 ಮಂದಿ ಮತದಾರರ ಪಟ್ಟಿಯಲ್ಲಿ ಹೆಚ್ಚುವರಿಯಾಗಿ ಸೇರ್ಪಡೆಯಾದಂತಾಗಿದೆ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರಾದ ಶಾಲಿನಿ ರಜನೀಶ್‌ ಅವರು ತಿಳಿಸಿದರು.

ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯ ಮತದಾರರ ಸಂಖ್ಯೆ 14,18,455 ಇತ್ತು. ಇದೀಗ 14,24,985 ಆಗಿದೆ. ಜಿಲ್ಲೆಯ ಜನಸಂಖ್ಯೆ 18,49,268 ಇದ್ದು, ಮತದಾರರ ಸಂಖ್ಯೆ ಮತ್ತು ಜನಸಂಖ್ಯೆ ನಡುವಣ ಅನುಪಾತ ಶೇ.77ರಷ್ಟಿದೆ. ಇದು ರಾಜ್ಯದ ಅನುಪಾತಕ್ಕಿಂತ ಹೆಚ್ಚಿದ್ದು, ಮೃತ ಮತದಾರರು, ವಲಸೆ ಹೋಗಿರುವವರು ಇತ್ಯಾದಿ ಮತದಾರರನ್ನು ತೆಗೆದು ಹಾಕುವ ಕಾರ್ಯವನ್ನು ವ್ಯವಸ್ಥಿತವಾಗಿ ಮಾಡಲು ಮತಗಟ್ಟೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಯುವ ಮತದಾರರ ಸೇರ್ಪಡೆ: ಜನಸಂಖ್ಯೆಗೆ ಅನುಗುಣವಾಗಿ 18-19ವಯೋಮಾನದ ಹೊಸ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಕಾರ್ಯ ನಿರೀಕ್ಷೆಯಂತೆ ಆಗಿಲ್ಲ. 11,464 ಹೊಸ ಮತದಾರರನ್ನು ಸೇರ್ಪಡೆಗೊಳಿಸಲಾಗಿದ್ದು, ಕಳೆದ ಮೂರು ವರ್ಷಗಳ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅಂಕಿಅಂಶಗಳನ್ನು ತಾಳೆ ಹಾಕಿದರೆ ಇನ್ನೂ ಸುಮಾರು 15 ಸಾವಿರದಷ್ಟು ಹೊಸ ಮತದಾರರನ್ನು ಸೇರ್ಪಡೆಗೊಳಿಸುವ ಅವಕಾಶ ಇರಬಹುದು ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯುವ ಮತದಾರರನ್ನು ಸೇರ್ಪಡೆಗೊಳಿಸಲು ಶಾಲಾ- ಕಾಲೇಜುಗಳಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

1950 ಸಹಾಯವಾಣಿ: ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣೆಗೆ ಸಂಬಂಸಿದಂತೆ ಇನ್ನಿತರ ಅಹವಾಲುಗಳನ್ನು ಸಾರ್ವಜನಿಕರು ಸಲ್ಲಿಸಲು 1950 ಟೋಲ್‌ ಫ್ರೀ ಸಹಾಯವಾಣಿಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಾರಂಭಿಸಲಾಗಿದೆ. ಬೆಳಗ್ಗೆ 9ರಿಂದ ರಾತ್ರಿ 9ರ ಅವಧಿಯಲ್ಲಿ ಸಾರ್ವಜನಿಕರು ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಅಹವಾಲು ದಾಖಲಿಸಬಹುದಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಕೇವಲ 20 ಅಹವಾಲುಗಳನ್ನು ಮಾತ್ರ ಸಹಾಯವಾಣಿ ಅಡಿ ಸ್ವೀಕರಿಸಲಾಗಿದ್ದು, ಇದರ ಉಪಯೋಗವನ್ನು ಸಾರ್ವಜನಿಕರು ಗರಿಷ್ಟ ಪ್ರಮಾಣದಲ್ಲಿ ಪಡೆದುಕೊಳ್ಳಬಹುದಾಗಿದೆ. ಈಗಾಗಲೇ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದನ್ನು ಪರಿಶೀಲಿಸಿ ಒಂದು ವೇಳೆ ತಮ್ಮ ಹೆಸರು ಇಲ್ಲದಿದ್ದರೆ ಅಥವಾ ಇಲ್ಲದವರ ಹೆಸರು ತಪ್ಪಾಗಿ ಪ್ರಕಟವಾಗಿದ್ದರೆ 1950 ಸಂಖ್ಯೆಗೆ ಕರೆ ಮಾಡಿ ದಾಖಲಿಸಬಹುದಾಗಿದೆ ಎಂದು ಅವರು ಹೇಳಿದರು.

ಪರಿಶೀಲನೆ: ಅಧಿಕಾರಿಗಳ ಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಪರಿಶೀಲನೆ ನಡೆಸಿದ ಶಾಲಿನಿ ರಜನೀಶ್‌ ಅವರು, ನಗರ ವ್ಯಾಪ್ತಿಯಲ್ಲಿ ಯುವ ಮತದಾರರ ಸೇರ್ಪಡೆ ನಿಗದಿತ ಪ್ರಮಾಣದಲ್ಲಿ ಆಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿರುವ ಯುವಕ ಸಂಘಗಳು, ಸ್ತ್ರೀ ಶಕ್ತಿ ಸಂಘಗಳಲ್ಲಿ ಮತದಾರರ ಪಟ್ಟಿಗೆ ಇನ್ನೂ ಸೇರ್ಪಡೆಯಾಗದಿರುವವರನ್ನು ಸೇರಿಸಲು ಕ್ರಮ ಕೈಗೊಳ್ಳಬೇಕು. ಕಾರ್ಮಿಕ ಇಲಾಖೆ ಅಧಿಕಾರಿಗಳು ತಾಲೂಕು ಮಟ್ಟದಲ್ಲಿ ಸಭೆಯನ್ನು ನಡೆಸಿ ಪ್ರತಿಯೊಬ್ಬ ಕಾರ್ಮಿಕರು/ನೌಕರರು ಮತದಾನವನ್ನು ಮಾಡಲು ಶಾಸನಾತ್ಮಕ ಅವಕಾಶ ನೀಡುವ ಬಗ್ಗೆ ತಿಳುವಳಿಕೆ ನೀಡಬೇಕು. ಕೈಗಾರಿಕಾ ಇಲಾಖೆ ಅಧಿಕಾರಿಗಳು ಎಲ್ಲಾ ಕೈಗಾರಿಕಾ ಕೇಂದ್ರಗಳಲ್ಲಿ ಜಾಗೃತಿ ಸಭೆಗಳನ್ನು ನಡೆಸಬೇಕು ಎಂದು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕೆ.ಎ. ದಯಾನಂದ, ಅಪರ ಜಿಲ್ಲಾಧಿಕಾರಿ ಅನುರಾಧಾ ಮತ್ತಿತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.