ಇವರಿಗೆ ಪಕ್ಷದಲ್ಲಿ ಚುನಾವಣೆ ಸಮಿತಿ ಇಲ್ಲವೇ: ಭವಾನಿ ರೇವಣ್ಣ ವಿಚಾರಕ್ಕೆ ಈಶ್ವರಪ್ಪ ವ್ಯಂಗ್ಯ

Team Udayavani, Jan 31, 2023, 1:19 PM IST

ಇವರಿಗೆ ಪಕ್ಷದಲ್ಲಿ ಚುನಾವಣೆ ಸಮಿತಿ ಇಲ್ಲವೇ: ಭವಾನಿ ರೇವಣ್ಣ ವಿಚಾರಕ್ಕೆ ಈಶ್ವರಪ್ಪ ವ್ಯಂಗ್ಯ

ಶಿವಮೊಗ್ಗ: ಒಂದು ರಾಜಕೀಯ ಪಕ್ಷಕ್ಕೆ ರಾಜ್ಯಾಧ್ಯಕ್ಷರು, ಸಂವಿಧಾನ, ಚುನಾವಣೆ ಸಮಿತಿ ಇರುತ್ತದೆ. ಅದು ಬಿಟ್ಟು ಇವರೇ ನಾನೇ ಅಭ್ಯರ್ಥಿ ಎಂದು ಘೋಷಣೆ ಮಾಡುತ್ತಿದ್ದಾರೆ. ಅನಿತಾ ಕುಮಾರಸ್ವಾಮಿಯವರು ಮಗ ನಿಖಿಲ್ ಅಭ್ಯರ್ಥಿ ಘೋಷಣೆ, ಭವಾನಿ ರೇವಣ್ಣ ನಾನೇ ಅಭ್ಯರ್ಥಿಯೆಂದು ಘೋಷಣೆ, ಸಿದ್ದು ಕೋಲಾರಕ್ಕೆ ನಾನೇ ಅಭ್ಯರ್ಥಿ ಘೋಷಣೆ. ಅದನ್ನು ಹೇಳಲು ಇವರು ಯಾರು?  ಅವರಿಗೆ ಪಕ್ಷ, ಚುನಾವಣೆ ಸಮಿತಿ ಇಲ್ಲವೇ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕುಟುಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವ ಅಂತ ಮಾತನಾಡುವ ವ್ಯಕ್ತಿಗೆ ಅದರ ಬಗ್ಗೆ ನಂಬಿಕೆ ಇಲ್ಲ. ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪಕ್ಷ ನೋಡಿದರೆ ಗೊತ್ತಾಗುತ್ತದೆ. ಯಾವ ಶಕುನಿಗಳು ಬೆನ್ನತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಲಿ. ಅವರು ತಿದ್ದಿಕೊಳ್ಳಲಿ. ಅವರ ಪಕ್ಷದ ಆಂತರಿಕ ವಿಚಾರ ಎಂದರು.

ಇದನ್ನೂ ಓದಿ:ಸಿದ್ದು ಹೆಣವನ್ನು ನಾಯಿನೂ ಮೂಸುವುದಿಲ್ಲ, ಅದನ್ನು ನಾವು ಯಾಕೆ ಮುಟ್ಟಬೇಕು: ಈಶ್ವರಪ್ಪ

ರಮೇಶ್ ಜಾರಳಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಆಡಿಯೋ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಇಲ್ಲಿಯವರೆಗೆ ಡಿಕೆ ಶಿವಕುಮಾರ್ ಯಾವುದೇ ಉತ್ತರ ಕೊಟ್ಟಿಲ್ಲ. ತಲೆಹರಟೆ ಮಾತು ಏನೇನೋ ಹೇಳುತ್ತಿದ್ದಾರೆ. ಆ ಆಡಿಯೋ ಕುರಿತು ಉತ್ತರ ಏನು? ಆಡಿಯೋದಲ್ಲಿ ಡಿಕೆ ಶಿವಕುಮಾರ್ ಅವರು 40 ಮತ್ತು 50 ಕೋಟಿ ಕುರಿತು ಅವರೇ ಒಪ್ಪಿಕೊಂಡಿದ್ದಾರೆ. ಅದು ಅವರ ವೈಯಕ್ತಿಕ ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು.

ರಮೇಶ್ ಜಾರಕಿಹೊಳಿ ಹೇಳಿಕೆ ಮೊದಲು ಉತ್ತರ ಕೊಡಲಿ. ಇದು ಸರಿನೋ ತಪ್ಪೋ ಎಂದ ಮೊದಲು ಉತ್ತರ ನೀಡಲಿ. ಅದು ಬಿಟ್ಟು ಬೇರೆ ಬೇರೆ ಉತ್ತರ ಕೊಡುತ್ತಿರುವುದು ಸರಿಯಲ್ಲ ಎಂದರು.

ಟಾಪ್ ನ್ಯೂಸ್

1-qweqwwqe

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಸಚಿವ ಮನೋಹರ ತಹಶೀಲ್ದಾರ್

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

1-csa-dsasad

ಮಿಸ್ಟರ್ ಹಾಲಪ್ಪ… ಅಭಿವೃದ್ಧಿ ಸಂಬಂಧ ಬಹಿರಂಗ ಚರ್ಚೆ; ಬೇಳೂರು ಸವಾಲು

ವಿಐಎಸ್‌ಎಲ್‌ ಕಾರ್ಖಾನೆ ಮುಚ್ಚುವುದಿಲ್ಲ: ರಾಘವೇಂದ್ರ

ವಿಐಎಸ್‌ಎಲ್‌ ಕಾರ್ಖಾನೆ ಮುಚ್ಚುವುದಿಲ್ಲ: ರಾಘವೇಂದ್ರ

KAGODU

ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ