Udayavni Special

ಜವಳಿ ಕ್ಷೇತ್ರದಲ್ಲಿದೆ ವಿಫುಲ ಅವಕಾಶ

Team Udayavani, Feb 24, 2019, 12:09 PM IST

shiv-1.jpg

ಶಿವಮೊಗ್ಗ: ಜಿಲ್ಲೆಯಲ್ಲಿ ಜವಳಿ ಕ್ಷೇತ್ರದಲ್ಲಿ 1285 ಕೋಟಿ ರೂ.ಗಳ ಬಂಡವಾಳ ಹೂಡಲಾಗಿದ್ದು, ಸುಮಾರು 10,000ಕ್ಕೂ ಹೆಚ್ಚಿನ ಜನರಿಗೆ ಅದರಲ್ಲೂ ವಿಶೇಷವಾಗಿ ಶೇ.90ರಷ್ಟು ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗೆ ಉದ್ಯೋಗಾವಕಾಶ ದೊರೆತಿರುವುದು ಸಂತಸದ ಸಂಗತಿ ಎಂದು ಜಿಪಂ ಉಪಾಧ್ಯಕ್ಷೆ ವೇದಾ ವಿಜಯಕುಮಾರ್‌ ಹೇಳಿದರು.

 ಶನಿವಾರ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದ ಸಭಾಂಗಣದಲ್ಲಿ ನೂತನ ಜವಳಿ ನೀತಿಯಡಿ 2ದಿನಗಳ ಕಾಲ ಮಹಿಳಾ ಉದ್ಯಮಿಗಳಿಗಾಗಿ ಏರ್ಪಡಿಸಿದ್ದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜವಳಿ ಉದ್ಯಮದ
ಬೆಳವಣಿಗೆಗೆ ವಿಫುಲ ಅವಕಾಶಗಳಿದ್ದು, ಆಸಕ್ತರು ಈ ಕಾರ್ಯಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಸುಸಂದರ್ಭ ಇದಾಗಿದೆ. ಈ ಜವಳಿ ಉದ್ಯಮ ಅನೇಕ ಸವಾಲುಗಳ ನಡುವೆಯು ಲಾಭದಾಯಕವಾಗಿ ಮುನ್ನಡೆದಿದೆ. 

ಇದರೊಂದಿಗೆ ಇಲ್ಲಿ ಕಾರ್ಯ ನಿರ್ವಹಿಸುವ ಮಹಿಳೆ ಕಾರ್ಮಿಕರಿಗೆ ಆರೋಗ್ಯ ಸಮಸ್ಯೆಯೂ ಬಾಸುತ್ತಿದೆ. ಅದರಿಂದ ಮುಕ್ತರಾಗಲು ಪೂರಕ ವಾತಾವರಣ ಕಲ್ಪಿಸಬೇಕು ಎಂದರು.

 ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕ ಅಶೋಕ ಈ.ಈ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಷಾಹಿ ಜವುಳಿ ಉದ್ಯಮ ಸಂಸ್ಥೆಯು ಈಗಾಗಲೇ ಸಾಗರ ತಾಲೂಕಿನಲ್ಲಿ ಗಾರ್ಮೆಂಟ್‌ ಆರಂಭಿಸಿದ್ದು, ಸುಮಾರು 2,000 ಮಹಿಳೆಯರಿಗೆ ಉದ್ಯೋಗ ಒದಗಿಸಿದೆ. 

ಜಿಲ್ಲೆಯ ಶಿಕಾರಿಪುರ ಸಮೀಪದಲ್ಲಿ 11ಎಕರೆ ಭೂಮಿಯನ್ನು ಗುರುತಿಸಿದ್ದು, ಶೀಘ್ರದಲ್ಲಿ ಘಟಕ ಆರಂಭಗೊಳ್ಳುವ ನಿರೀಕ್ಷೆ ಇದೆ. ಇಲ್ಲಿ ಸುಮಾರು 3,000 ಮಂದಿಗೆ ಉದ್ಯೋಗಾವಕಾಶ ದೊರೆಯುವ ಸಾಧ್ಯತೆ ಇದೆ ಎಂದರು. ಅಲ್ಲದೆ ಜವಳಿ ಉದ್ಯಮದಲ್ಲಿ ತೊಡಗಿಸಿಕೊಳ್ಳಲಿಚ್ಛಿಸುವ ಇಲಾಖೆ ವತಿಯಿಂದ ಅಗತ್ಯ ನೆರವು ಹಾಗೂ ಸಹಕಾರ ನೀಡಲಾಗುವುದು. ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳು
ರೂ.25 ಲಕ್ಷದಿಂದ 5.00 ಕೋಟಿ ರೂ. ಗಳವರೆಗೆ ಬಂಡವಾಳ ತೊಡಗಿಸುವ ಉದ್ಯಮಿಗಳಿಗೆ ಶೇ.90ರಷ್ಟು ಸಹಾಯಧನ ನೀಡಲಾಗುವುದು ಎಂದರು. 

 ತರಬೇತಿಯಲ್ಲಿ ಜವಳಿ ಉದ್ಯಮ ಕ್ಷೇತ್ರದಲ್ಲಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳು, ತರಬೇತಿ, ಯೋಜನೆಗಳ ಮಾಹಿತಿ ನೀಡಲಾಗುತ್ತಿದೆ ಎಂದರು.

ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ಅಸಂಖ್ಯಾತ ಮಹಿಳೆಯರು ಇದ್ದರು. ಇಲಾಖೆಯ ಅಧಿಕಾರಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ಯೋಜನೆಗಳ ಮಾಹಿತಿ ನೀಡಿದರು.  ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ನ ವ್ಯವಸ್ಥಾಪಕ ಸೋಲೋಮನ್‌ ಮೆನೇಜಸ್‌, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಶಿವಪ್ರಸಾದ್‌, ಜಿಲ್ಲಾ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಎಂ.ಎ. ರಮೇಶ್‌ ಹೆಗ್ಡೆ, ರಾಜ್ಯ ಹಣಕಾಸು ಸಂಸ್ಥೆಯ ಅಧಿಕಾರಿ ಲಿಂಗಪ್ಪ, ಎಸ್‌. ವಿಶ್ವೇಶ್ವರಯ್ಯ, ಕಾಸಿಯಾ ಜವುಳಿ ಫ್ಯಾನಲ್‌ ಚೇರನ್‌ ಜಯೇಶ್‌ ಭಟಾವಿಯ, ಗ್ರಾಮೀಣ ಜಂಟಿ ಕಾರ್ಯದರ್ಶಿ
ಎಸ್‌. ವಿಶ್ವೇಶ್ವರಯ್ಯ ಮತ್ತಿತರರು ಇದ್ದರು.

ಟಾಪ್ ನ್ಯೂಸ್

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

gfgfdg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hjgutyuty

ಆರ್​​ಎಸ್​ಎಸ್​​​  ಬಾಂಬ್ ಹಾಕುವವರನ್ನ ತಯಾರು ಮಾಡುವುದಿಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

shivamogga news

ಸಿದ್ದು ಅಲ್ಪಸಂಖ್ಯಾತರಿಗೆ ಉತ್ತರ ನೀಡಲಿ: ಎಚ್ಡಿಕೆ

nayi

ಸಿಸಿ ಕ್ಯಾಮರಾ, ಸಾಮಾಜಿಕ ಜಾಲತಾಣಗಳಿಂದ ನಾಯಿಮರಿ ಪತ್ತೆ!

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ವಿಜೃಂಭಣೆಯ ವಿಜಯ ದಶಮಿ ಮೆರವಣಿಗೆ

ವಿಜೃಂಭಣೆಯ ವಿಜಯ ದಶಮಿ ಮೆರವಣಿಗೆ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.