ಸೊರಬ ಕೆರೆಗಳಿಗೆ ನೀರು ತುಂಬಿಸಿ

•ಅಂತರ್ಜಲ ಹೆಚ್ಚಳದಿಂದ ಕೊಳವೆಬಾವಿ ರೀಚಾರ್ಜ್‌ •ಬರಕ್ಕೆ ಮುಕ್ತಿ

Team Udayavani, Jul 2, 2019, 10:39 AM IST

sm-tdy-1..

ಸೊರಬ: ಕಾಂಗ್ರೆಸ್‌ ಮುಖಂಡರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸೊರಬ: ಶರಾವತಿ ನದಿ ನೀರನ್ನು ಲಿಂಗನಮಕ್ಕಿ ಜಲಾಶಯದಿಂದ ಸೊರಬ ತಾಲೂಕಿಗೆ ಹರಿಸಿ ಎಲ್ಲಾ ಕೆರೆಗಳನ್ನು ತುಂಬಿಸುವ ಯೋಜನೆಯನ್ನು ಸರ್ಕಾರ ರೂಪಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಶ್ರೀಧರ್‌ ಆರ್‌.ಹುಲ್ತಿಕೊಪ್ಪ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕು ನಂಜುಂಡಪ್ಪ ವರದಿಯಂತೆ ಹಿಂದುಳಿದ ಹಣೆಪಟ್ಟಿಯಲ್ಲಿದೆ. ಏಷ್ಯಾ ಖಂಡದಲ್ಲಿಯೇ ಅತಿ ಹೆಚ್ಚು ಕೆರೆಗಳನ್ನು ಹೊಂದಿದ ತಾಲೂಕಿನಲ್ಲಿ 1300ಕ್ಕೂ ಹೆಚ್ಚು ಕೆರೆಗಳಿದ್ದೂ, ಇವುಗಳನ್ನು ಅಭಿವೃದ್ಧಿಪಡಿಸಿ ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸುವಲ್ಲಿ ಇದುವರೆಗೂ ಜನಪ್ರತಿನಿಧಿಗಳು ಇಚ್ಛಾಶಕ್ತಿ ತೋರಿಲ್ಲ. ಆನವಟ್ಟಿ, ಜಡೆ ಹೋಬಳಿಗಳೂ ಭೀಕರ ಬರಗಾಲಕ್ಕೆ ತುತ್ತಾಗುತ್ತವೆ. ಅಲ್ಲದೆ ತಾಲೂಕಿನಲ್ಲಿ ಪ್ರತೀ ವರ್ಷ ಕುಡಿಯಲು ಹಾಗೂ ಕೃಷಿಗೆ ನೀರಿನ ಅಭಾವ ದಟ್ಟವಾಗುತ್ತಿದೆ. ಈ ಸಮಸ್ಯೆ ಸರ್ಕಾರ ಮನಗಂಡು ಲಿಂಗನಮಕ್ಕಿ ಜಲಾಶಯದಿಂದ ಸೊರಬ ತಾಲೂಕಿಗೆ ನೀರು ಹರಿಸುವ ಯೋಜನೆ ರೂಪಿಸಬೇಕು. ಇದರಿಂದ ಕೆರೆಗಳು ತುಂಬಿ ಅಂತರ್ಜಲ ಹೆಚ್ಚಳವಾಗಿ ಬೋರ್‌ವೆಲ್ಗಳು ರೀಚಾರ್ಜ್‌ ಆಗುತ್ತವೆ. ಅಲ್ಲದೆ ತಾಲೂಕಿನ ಅಭಿವೃದ್ಧಿಯಾಗುತ್ತದೆ. ಈ ಸಂಬಂಧ ತಾಲೂಕು ಕಾಂಗ್ರೆಸ್‌ ವತಿಯಿಂದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದೇವೆ ಎಂದರು.

ಶಾಸಕ ಕುಮಾರ್‌ ಬಂಗಾರಪ್ಪ ಲಾಭಕ್ಕಾಗಿ ಅಧಿಕಾರಿಗಳನ್ನು ಬೆದರಿಸಿಕೊಂಡು ಅವರ ಜತೆ ಗುಪ್ತ ಸಭೆ ನಡೆಸದೆ ಅನುದಾನ ತಂದು ಅಭಿವೃದ್ಧಿಪಡಿಸಲಿ. ಶಾಲಾ-ಕಾಲೇಜುಗಳ ಮೂಲ ಸಮಸ್ಯೆಗಳ ಬಗ್ಗೆ ಅರಿವಿಲ್ಲದೆ ಹಿಂಬಾಲಕರೊಂದಿಗೆ ತರಗತಿಯೊಳಗೆ ನುಗ್ಗುವುದಲ್ಲದೆ ಜವಾಬ್ದಾರಿಯುತವಾಗಿ ನಡೆದುಕೊಳ್ಳದೆ ಪಾಠ-ಪ್ರವಚನಗಳಿಗೆ ಅಡ್ಡಿ ಪಡಿಸುವ ಜತೆಗೆ ವೀಡಿಯೋ ಮಾಡಿಸುವ ಸಣ್ಣತನಕ್ಕೆ ಇಳಿಯುವುದು ಸರಿಯಲ್ಲ. ತಾಲೂಕಿನ ಜನ ಎಚ್ಚರವಾಗಿದ್ದಾರೆ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜೆ.ಶಿವಾನಂದಪ್ಪ ಮಾತನಾಡಿ, ತಾಲೂಕು ಕಾಲದ ಸ್ಥಿತ್ಯಂತರಕ್ಕೆ ಅನುಗುಣವಾಗಿ ಅಭಿವೃದ್ಧಿಯಾಗಬೇಕಿತ್ತು. ಇಲ್ಲಿನ ಸಮಸ್ಯೆ ಅರಿತು ಅಭಿವೃದ್ಧಿಗೆ ಶ್ರಮಿಸಬೇಕಾದ ಜನಪ್ರತಿನಿಗಳಿಗೆ ಇಚ್ಛಾಶಕ್ತಿಯ ಕೊರತೆಯಿಂದ ಅಭಿವೃದ್ಧಿಯಲ್ಲಿ ಹಿನ್ನಡೆಯಾಗಿದೆ. ಈಗಿನ ಶಾಸಕ ಕುಮಾರ್‌ ಬಂಗಾರಪ್ಪ ಅಧಿಕಾರಿಗಳ ಮೇಲೆ, ಸಂಘ-ಸಂಸ್ಥೆಯವರ ಮೇಲೆ ಹರಿಹಾಯುವುದನ್ನು ಬಿಟ್ಟು ಅಭಿವೃದ್ಧಿಯ ಚಿಂತನೆ ಮಾಡಲಿ. ತಾಲೂಕಿಗೆ ನೀರಾವರಿ ಮಾಡಿಯೇ ತೀರುತ್ತೇನೆ ಎಂದು ಜನರಿಗೆ ಸುಳ್ಳು ಆಶ್ವಾಸನೆ ಕೊಟ್ಟು ಗೆದ್ದ ಕುಮಾರ್‌ ಬಂಗಾರಪ್ಪ ನೀರಾವರಿ ಬಗ್ಗೆ ಮಾತನಾಡಿಲ್ಲ. ಅಂತಹವರಿಂದ ಅಭಿವೃದ್ಧಿ ಸಾಧ್ಯವೇ ಎಂದು ಪ್ರಶ್ನಿಸಿದರು.

ಆನವಟ್ಟಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರುದ್ರಗೌಡ ಸಿ.ಪಾಟೀಲ್ ಮಾತನಾಡಿ, ತಾಲೂಕಿನಲ್ಲಿ ಕಾಂಗ್ರೆಸ್‌ ಸಕ್ರಿಯವಾಗಿದೆ. ಪಕ್ಷದ ಚಿಹ್ನೆಯಲ್ಲಿ ಗೆಲುವು ಸಾಧಿಸಿ, ಬಿಜೆಪಿಯಲ್ಲಿ ಗುರುತಿಸಿಕೊಂಡು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ನಾಗರಾಜ್‌, ಹನುಮಂತಪ್ಪ ಹಾಗೂ ಮೀನಾಕ್ಷಮ್ಮ ಅವರನ್ನು ಕಾಂಗ್ರೆಸ್‌ನಿಂದ ಉಚ್ಛಾಟನೆ ಮಾಡಲಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ಷ ಲಕ್ಷ್ಮಿಕಾಂತ್‌ ಚಿಮನೂರು, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಕಲ್ಲಪ್ಪ ಚಿತ್ರಟ್ಟೆಹಳ್ಳಿ, ಪಪಂ ಸದಸ್ಯ ಡಿ.ಎಸ್‌.ಪ್ರಸನ್ನಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ಜೈಶೀಲಪ್ಪ, ಸೇವಾದಳದ ಶಿವಪ್ಪ ನಡಹಳ್ಳಿ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.