ಫುಟ್‌ಪಾತ್‌ ವ್ಯಾಪಾರಸ್ಥರ ತೆರವು


Team Udayavani, Jul 3, 2018, 5:28 PM IST

shiv.jpg

ಶಿವಮೊಗ್ಗ: ನಗರದ ಹೃದಯ ಭಾಗ ಗಾಂಧಿ ಬಜಾರ್‌ ರಸ್ತೆಯ ಫುಟ್‌ಪಾತ್‌ ಮತ್ತು ತಳ್ಳುಗಾಡಿಯಲ್ಲಿ ಹತ್ತಾರು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದವರನ್ನು ಸೋಮವಾರ ಪೊಲೀಸ್‌ ಭದ್ರತೆಯಲ್ಲಿ ತೆರವುಗೊಳಿಸಲಾಯಿತು.

ವ್ಯಾಪಾರಸ್ಥರಿಗೆ ಶನಿವಾರವೇ ನೋಟಿಸ್‌ ಜಾರಿ ಮಾಡಿದ್ದರಿಂದ ಗಾಂಧಿ ಬಜಾರ್‌, ಎಸ್‌ ಎನ್‌ ಮಾರ್ಕೆಟ್‌ ಸುತ್ತಮುತ್ತಲಿನ ಬಹುತೇಕ ವ್ಯಾಪಾರಿಗಳು ಸೋಮವಾರ ವ್ಯಾಪಾರಕ್ಕೆ ಬಂದಿರಲಿಲ್ಲ. ಇದರಿಂದ ಕಾರ್ಯಾಚರಣೆಗೆ ಯಾವುದೇ ತೊಂದರೆ ಎದುರಾಗಲಿಲ್ಲ.

ಮೊದಲಿನಿಂದಲೂ ರಸ್ತೆ ಬದಿ ವ್ಯಾಪಾರಸ್ಥರನ್ನು ತೆರವು ಮಾಡಿ ವಾಹನ ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಅನೇಕ ಬಾರಿ ಸಾರ್ವಜನಿಕರು ಮನವಿ ಮಾಡಿದ್ದರು. ಅಲ್ಲದೇ ಚುನಾವಣೆ, ವ್ಯಾಪಾರ ವಹಿವಾಟಿನಲ್ಲಿನ ಸಣ್ಣಪುಟ್ಟ ಮನಸ್ತಾಪಗಳಿಂದಲೂ ಕೋಮು ಗಲಭೆಗಳಿಗೂ ಕಾರಣವಾಗುತಿತ್ತು. ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿದ್ದ ಕಾರಣ ಸಾರ್ವಜನಿಕರು ಎಸ್‌ಪಿಗೆ ದೂರು ನೀಡಿದ್ದರು.

ಇವೆಲ್ಲ ಅಂಶಗಳನ್ನು ಮುಂದಿಟ್ಟುಕೊಂಡು ಮಹಾನಗರಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿದರು. ಕಾರ್ಯಾಚರಣೆ ಹಿನ್ನೆಲೆಯಲ್ಲಿ ಇಡೀ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಉಪಮೇಯರ್‌ ವಿಜಯಲಕ್ಷ್ಮೀ ಸಿ.ಪಾಟೀಲ್‌, ಪಾಲಿಕೆ ಸದಸ್ಯರಾದ ರೇಖಾ ಚಂದ್ರಶೇಖರ್‌, ಡಿವೈಎಸ್ಪಿ ಸುದರ್ಶನ್‌ ಸೇರಿದಂತೆ ಹಲವರು ಇದ್ದರು.

ಕನ್ಸರ್‌ವೆನ್ಸಿ ಪರಿಶೀಲನೆ ಗಾಂಧಿ ಬಜಾರ್‌ನಿಂದ ಸಂತ್ರಸ್ತರಾದ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಪಾಲಿಕೆ ಮೇಯರ್‌ ನಾಗರಾಜ್‌ ಕಂಕಾರಿ ಶಿವಪ್ಪ ನಾಯಕ ಸರ್ಕಲ್‌ನ ಅಂಡರ್‌ಪಾಸ್‌, ಕರ್ನಾಟಕ ಸಂಘದ ಕನ್ಸರ್‌ ವೆನ್ಸ್‌ ರಸ್ತೆಗಳನ್ನು ಪರಿಶೀಲಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ಸ್ಥಳೀಯರು, ಶಾಶ್ವತ ವ್ಯವಸ್ಥೆ ಮಾಡದೆ ಸಂಜೆ ಗಾಡಿಯನ್ನು ತೆಗೆದುಕೊಂಡು ಹೋಗುವಂತಿರಲಿ ಎಂದು ಮನವಿ ಮಾಡಿದರು.

ಈಗಾಗಲೇ ಅಭಿವೃದ್ಧಿ ಪಡಿಸಿರುವ ಕನ್ಸರ್‌ವೆನ್ಸಿಯ ಜೊತೆಗೆ ಉಳಿದ ಎರಡು ಕನ್ಸರ್‌ವೆನ್ಸಿ ರಸ್ತೆಗಳನ್ನು ಅಭಿವೃದ್ಧಿಪಡಿಸಿ ಸಂತ್ರಸ್ತ ವ್ಯಾಪಾರಿಗಳ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚಿಸಿದರು.

ಟಾಪ್ ನ್ಯೂಸ್

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

protest

BJP protest: ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

15-subrahmanya

ರಾಜ್ಯ ಸರಕಾರ ಜನಹಿತ ಮರೆತಿದೆ- ಕುಕ್ಕೆಯಲ್ಲಿ ಮಾಜಿ ಸಿಎಂ ಬಿ.ಎಸ್.ವೈ

Mudhol: ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ… ತಪ್ಪಿದ ಅನಾಹುತ

Mudhol: ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ… ತಪ್ಪಿದ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸ್ಕೂಟಿ-ಕಾರು ಡಿಕ್ಕಿ; ಕಾಲೇಜು ವಿದ್ಯಾರ್ಥಿನಿ ಮೃತ್ಯು

Road Mishap ಸ್ಕೂಟಿ-ಕಾರು ಡಿಕ್ಕಿ; ಕಾಲೇಜು ವಿದ್ಯಾರ್ಥಿನಿ ಮೃತ್ಯು

1-saddadasd

Hosanagar;ಯಡೂರು ಅಬ್ಬಿಫಾಲ್ಸ್ ದುರಂತ: ಬೆಂಗಳೂರು ಪ್ರವಾಸಿಗ ನೀರುಪಾಲು

1-ak

Shivamogga; ಲೈಂಗಿಕ ದೌರ್ಜನ್ಯ ಕೇಸ್: ಬಿಜೆಪಿ ಯುವ ಮುಖಂಡ ಅರುಣ್ ಕುಗ್ವೆ ಬಂಧನ

8-holehonnur

Holehonnur: ಅಪ್ರಾಪ್ತ ಮಗನಿಂದ ತಂದೆಯ ಕೊಲೆ; ಪ್ರಕರಣ ದಾಖಲು

Dengue

Sagara; ಡೆಂಘೀ ಬಾಧಿತೆಗೆ ಹೃದಯಾಘಾತ: ಗ್ರಾಪಂ ಮಾಜಿ ಅಧ್ಯಕ್ಷೆ ಮೃತ್ಯು

MUST WATCH

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

ಹೊಸ ಸೇರ್ಪಡೆ

20-uv-fusion

UV Fusion: ಪ್ರಕೃತಿ ಶಾಶ್ವತ ಮನುಷ್ಯನ ಕೊಡುಗೆ ನಿಮಿತ್ತ…

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

19-fusion

Father: ನಮಗಾಗಿ ದುಡಿದ ನಾಯಕ ನಮ್ಮ ಜನಕ

18-koratagere

Koratagere ಬಂದ್‌ಗೆ ಕರೆ ನೀಡಿದ ನೀರಾವರಿ ಸಂಘಟನೆ

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.