
ವಸತಿ ವಿದ್ಯಾಲಯದಲ್ಲಿ ಬಾಲಕಿ ಆಕಸ್ಮಿಕ ಸಾವು; ಸೂಕ್ತ ತನಿಖೆಗೆ ಬೇಳೂರು ಸೂಚನೆ
Team Udayavani, Jun 8, 2023, 10:44 PM IST

ಸಾಗರ: ಇಲ್ಲಿನ ಖಾಸಗಿ ವಸತಿ ವಿದ್ಯಾಲಯವೊಂದರಲ್ಲಿ ಗುರುವಾರ 13 ವರ್ಷದ ಬಾಲಕಿ ಆಕಸ್ಮಿಕವಾಗಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಸೂಕ್ತ ತನಿಖೆ ನಡೆಸಲು ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ನೀಡಿದ್ದಾರೆ.
ಖಾಸಗಿ ವಸತಿ ವಿದ್ಯಾಲಯವೊಂದರಲ್ಲಿ ಸೊರಬ ತಾಲೂಕಿನ ಶಿವಪುರದ ತೇಜಸ್ವಿನಿ ಎಂಬ ಎಂಟನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಬೆಳಗ್ಗೆ ವಿದ್ಯಾರ್ಥಿನಿ ವಸತಿ ಶಾಲೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಶಾಲಾ ವಾಹನದಲ್ಲಿ ಉಪವಿಭಾಗೀಯ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿಯ ಶವ ಪರೀಕ್ಷೆಯನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ವಿದ್ಯಾರ್ಥಿನಿ ಸಾವಿನ ಬಗ್ಗೆ ಮಾತನಾಡಿದ ಶಾಲಾ ಮುಖ್ಯಸ್ಥ ಎಚ್.ಪಿ.ಮಂಜಪ್ಪ, ಐದು ದಿನಗಳ ಹಿಂದೆ 8ನೇ ತರಗತಿಗೆ ತೇಜಸ್ವಿನಿ ಅವರನ್ನು ದಾಖಲಿಸಿಕೊಳ್ಳಲಾಗಿತ್ತು. ತೇಜಸ್ವಿನಿ ಜೊತೆಗೆ ಇತರರನ್ನು ಉಚಿತ ಶಿಕ್ಷಣ ನೀಡಲು ದಾಖಲಿಸಿಕೊಳ್ಳಲಾಗಿದೆ. ಬುಧವಾರ ರಾತ್ರಿ ವಿದ್ಯಾರ್ಥಿನಿ ಸುಸ್ತು ಎಂದು ಹೇಳಿದಾಗ ಸೂಕ್ತ ಚಿಕಿತ್ಸೆ ನೀಡಲಾಗಿತ್ತು. ಗುರುವಾರ ಬೆಳಿಗ್ಗೆ ವಿದ್ಯಾರ್ಥಿನಿ ರೂಮಿನಲ್ಲಿ ವಾಂತಿ ಮಾಡಿಕೊಂಡಿದ್ದಾಳೆ. ತಕ್ಷಣ ಅವಳನ್ನು ಉಪವಿಭಾಗೀಯ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬರಲಾಗಿದೆ. ವಿದ್ಯಾರ್ಥಿನಿ ಬಂದು ಐದು ದಿನವಾಗಿರುವುದರಿಂದ ಅವಳ ಬಗ್ಗೆ ಹೆಚ್ಚಿನ ಮಾಹಿತಿ ನಮ್ಮ ಬಳಿ ಇಲ್ಲ. ಸಾವಿಗೆ ನಿಖರ ಕಾರಣ ಏನೆಂದು ತಿಳಿದುಕೊಳ್ಳಲು ವೈದ್ಯರು ಪೋಸ್ಟ್‌ಮಾರ್ಟಂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆಸುವುದಾಗಿ ತಿಳಿಸಿದ್ದಾರೆ. ಪೊಲೀಸರ ತನಿಖೆಗೆ ನಮ್ಮ ಸಂಸ್ಥೆ ಎಲ್ಲ ರೀತಿಯ ಸಹಕಾರ ನೀಡುತ್ತದೆ. ನಮ್ಮ ವಿದ್ಯಾರ್ಥಿ ನಿಲಯದಲ್ಲಿ ಯಾವುದೇ ಲೋಪವಾಗಿಲ್ಲ. ಪೋಸ್ಟ್‌ಮಾರ್ಟ ವರದಿ ನಂತರ ಸತ್ಯಾಂಶ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.
ತನಿಖೆಗೆ ಆದೇಶ: ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಗೋಪಾಲಕೃಷ್ಣ ಬೇಳೂರು ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಸಾಂತ್ವನ ಹೇಳಿ, ೧೩ ವರ್ಷದ ಹೆಣ್ಣುಮಗಳು ಮೃತಪಟ್ಟಿರುವುದರಿಂದ ಪೋಷಕರು ಮತ್ತವರ ಸಂಬಂಧಿಕರು ತೀವ್ರ ದುಃಖದಲ್ಲಿದ್ದಾರೆ. ಪೋಷಕರು ಈ ಸಂಬಂಧ ಪ್ರಕರಣ ದಾಖಲಿಸುತ್ತೇವೆಂದು ತಿಳಿಸಿದ್ದಾರೆ. ಪೊಲೀಸರಿಗೆ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿವಿಲ್ ಸರ್ಜನ್ ಡಾ. ಪರಪ್ಪ ಕೆ., ಡಾ. ಪ್ರಕಾಶ್ ಬೋಸ್ಲೆ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Shivamogga: VISL ಫ್ಯಾಕ್ಟರಿ ಬಳಿ ಬೋನಿಗೆ ಬಿದ್ದ ಚಿರತೆ ಮರಿ… ತಾಯಿ ಚಿರತೆ ಇರುವ ಶಂಕೆ

Road Mishap; ಗಾಜನೂರು: ಖಾಸಗಿ ಬಸ್ – ಕಾರು ನಡುವೆ ಅಪಘಾತ!

Sagara: ಹೊಸ ಕಲ್ಲುಕ್ವಾರೆಗೆ ಅವಕಾಶ ಬೇಡ; ಎಸಿಗೆ ಮನವಿ

GP ಅಧ್ಯಕ್ಷರ ಅಧಿಕಾರ ಮೊಟಕು ಪ್ರಯತ್ನ -15 ನೇ ಹಣಕಾಸು ಕ್ರೀಯಾಯೋಜನೆ ಮಂಜೂರಾತಿಗೆ ಅಡ್ಡಿ
MUST WATCH
ಹೊಸ ಸೇರ್ಪಡೆ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ