ನಗರ ವಿಕಾಸ ಯೋಜನೆಗೆ ಅನುದಾನ


Team Udayavani, Jan 22, 2020, 3:53 PM IST

sm-tdy-1

ಶಿವಮೊಗ್ಗ: ಬೆಳೆಯುತ್ತಿರುವ ನಗರಗಳ ಪ್ರಮಾಣಕ್ಕನುಗುಣವಾಗಿ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸುವುದು ಸವಾಲಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಲು ಹಾಗೂ ನಗರದ ಸಮಗ್ರ ಅಭಿವೃದ್ಧಿಯನ್ನು ಕೇಂದ್ರೀಕರಿಸಿ ಪೌರಸೇವೆಗಳನ್ನು ಮೇಲ್ದರ್ಜೆಗೇರಿಸುವ ಮತ್ತು ವಿಸ್ತರಿಸುವ ಕುರಿತು ಮಹಾತ್ಮ ಗಾಂಧಿನಗರ ವಿಕಾಸ ಯೋಜನೆಯಡಿ 125 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಮುಖವಾಗಿ ರಸ್ತೆ ಮತ್ತು ಚರಂಡಿಗಳ ಅಭಿವೃದ್ಧಿಗಾಗಿ ತಯಾರಿಸಲಾಗಿದ್ದ ಕ್ರಿಯಾಯೋಜನೆಯ ಅನುಮೋದನೆಗಾಗಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಯೋಜನೆಗೆ ರಾಜ್ಯದ 10 ಜಿಲ್ಲೆಗಳಲ್ಲಿ ಆಯ್ಕೆಯಾಗಿದ್ದು, ಮೈಸೂರು, ಕಲಬುರಗಿ, ಹುಬ್ಬಳ್ಳಿ- ಧಾರವಾಡ ಜಿಲ್ಲೆಗಳಿಗೆ ತಲಾ 150 ಕೋಟಿ ಹಾಗೂ ಮಂಗಳೂರು, ಬೆಳಗಾವಿ, ದಾವಣಗೆರೆ, ಬಳ್ಳಾರಿ, ವಿಜಯಪುರ, ತುಮಕೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ತಲಾ 125 ಕೋಟಿ ಅನುದಾನ ಮಂಜೂರಾಗಿದೆ ಎಂದರು. ಈಗಾಗಲೇ ಮಂಜೂರಾಗಿರುವಅನುದಾನದ ಸದ್ಬಳಕೆಗಾಗಿ ಮಾರ್ಗಸೂಚಿಯನ್ವಯ ಕ್ರಿಯಾಯೋಜನೆಯನ್ನು ತಯಾರಿಸಿದ್ದು, ಶೀಘ್ರವಾಗಿ ಸರ್ಕಾರದಿಂದ ಅನುಮೋದನೆ ಪಡೆದು ಕಾಮಗಾರಿಗಳನ್ನು ಆರಂಭಿಸುವಂತೆ ಸೂಚಿಸಿದ ಅವರು, ಸ್ಮಾರ್ಟ್‌ಸಿಟಿ ಯೋಜನೆ ವ್ಯಾಪ್ತಿಗೊಳಪಡುವ 6 ವಾರ್ಡುಗಳನ್ನು ಹೊರತುಪಡಿಸಿ, ಉಳಿದ ವಾರ್ಡುಗಳಿಗೆ ಹಾಗೂ ಸ್ಥಳೀಯ ಜನಪ್ರತಿನಿ ಧಿಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ತಲಾ 1 ಕೋಟಿ ರೂ.ಗಳನ್ನು ಮಂಜೂರು ಮಾಡುವಂತೆ ಸೂಚಿಸಿದರು. ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಾರ್ಡುಗಳಿಗೂ ಪ್ರಾತಿನಿಧ್ಯ ಇರುವಂತೆ ನೋಡಿಕೊಳ್ಳಲು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪಾಲಿಕೆಯ ಎಲ್ಲಾ ಸದಸ್ಯರು, ಶಾಸಕರಿಗೆ ಮಾರ್ಗಸೂಚಿಯೊಂದಿಗೆ ಮಾಹಿತಿ ನೀಡಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಆಯುಕ್ತರಿಗೆ ಸೂಚಿಸಿದ ಸಚಿವರು, ಕೈಗೊಳ್ಳುವ ಕಾಮಗಾರಿ ಒಂದೇ ಆಗಿದ್ದು, ಒಟ್ಟು ಒಂದು ಕೋಟಿ ರೂ. ಮಿತಿಯೊಳಗಿರುವಂತೆ ನೋಡಿಕೊಳ್ಳಬೇಕು. ಈ ಅನುದಾನದಲ್ಲಿ ಅಮೃತ ಯೋಜನೆಯ ಅನುಷ್ಠಾನಕ್ಕೆ 13.00 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ. ಅಲ್ಲದೆ ನಗರದ ಉದ್ಯಾನವನಗಳ ಅಭಿವೃದ್ಧಿಗೂ 2.75 ಕೋಟಿ ರೂ. ಗಳನ್ನು ಖರ್ಚು ಮಾಡಲಾಗುವುದು ಎಂದರು.

ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಆರ್‌. ಪ್ರಸನ್ನಕುಮಾರ್‌, ಮಹಾನಗರ ಪಾಲಿಕೆ ಉಪಮಹಾಪೌರ ಚನ್ನಬಸಪ್ಪ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ, ಯೋಜನಾ ನಿರ್ದೇಶಕ ನಾಗೇಂದ್ರ ಎಫ್‌. ಹೊನ್ನಳ್ಳಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ಎಸ್. ವಟಾರೆ ಮತ್ತಿತರರು ಇದ್ದರು

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.