ಕಾನೂರು ಕೋಟೆ ಸಂರಕ್ಷಣೆಗೆ ಚಿಂತನೆ: ಶಾಸಕ ಹಾಲಪ್ಪ ಹರತಾಳು


Team Udayavani, May 18, 2022, 6:09 PM IST

ಕಾನೂರು ಕೋಟೆ ಸಂರಕ್ಷಣೆಗೆ ಚಿಂತನೆ: ಶಾಸಕ ಹಾಲಪ್ಪ ಹರತಾಳು

ಸಾಗರ: ದಟ್ಟ ಅರಣ್ಯದ ನಡುವೆ ಇರುವ ಐತಿಹಾಸಿಕ ಕಾನೂರು ಕೋಟೆ ಸಂರಕ್ಷಣೆಗೆ ಚಿಂತನೆ ನಡೆಸಲಾಗಿದೆ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.

ತಾಲೂಕಿನ ಭಾರಂಗಿ ಹೋಬಳಿಯ ಕಾನೂರಿನಲ್ಲಿ ಮಂಗಳವಾರ ಜನಸ್ಪಂದನಾ ಸಭೆ ನಡೆಸಿ, ಸ್ಥಳೀಯರಿಂದ ಅಹವಾಲು ಸ್ವೀಕರಿಸಿ, ಕಾನೂರು ಕೋಟೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡುತ್ತಿದ್ದರು.

ಕಾನೂರು ಕೋಟೆ ಐತಿಹಾಸಿಕವಾಗಿ ಅತ್ಯಂತ ಮಹತ್ವದ ಸ್ಥಳವಾಗಿದ್ದು, ಸಾಗರ ತಾಲೂಕಿನ ಆಸ್ತಿಯಾಗಿದೆ. ಇದನ್ನು ಸಂರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಯಾವುದೇ ಪ್ರಯತ್ನ ಈತನಕ ನಡೆದಿಲ್ಲ. ದಟ್ಟ ಕಾಡಿನ ನಡುವೆ ಒಂದೆ ಬಂಡೆ ಕಲ್ಲಿನ ಮೇಲೆ ವಿಶೇಷವಾಗಿ ಕಟ್ಟಿರುವ ಕೋಟೆ ಇಲ್ಲಿದೆ. ದೊಡ್ಡ ಕೋಟೆಯ ಬಾಗಿಲು, ಸುರಂಗ ಮಾರ್ಗ ಸಹ ಇಲ್ಲಿರುವುದು ವಿಶೇಷ. ಈ ಪ್ರದೇಶವು ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಬರುವುದರಿಂದ ಇದನ್ನು ಪ್ರವಾಸೋದ್ಯಮ ಹಿನ್ನೆಲೆಯಲ್ಲಿ ಅಭಿವೃದ್ಧಿಪಡಿಸಲು ಅರಣ್ಯ ಇಲಾಖೆ ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಮುಂದಿನ ತಿಂಗಳು ಬೆಂಗಳೂರಿನಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ವಿಷಯ ಪ್ರಸ್ತಾಪಿಸಿ ಕಾನೂರು ಕೋಟೆ ಸಂರಕ್ಷಣೆ ಮತ್ತು ಪ್ರವಾಸೋದ್ಯಮ ಹಿನ್ನೆಲೆಯಲ್ಲಿ ಅಭಿವೃದ್ಧಿಪಡಿಸುವ ಬಗ್ಗೆ ಗಮನ ಹರಿಸಲಾಗುತ್ತದೆ ಎಂದರು.

ಉರಳಗಲ್ಲು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಒದಗಿಸುವ ಸಂಬಂಧ ಇಂದು ತಹಸೀಲ್ದಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಸಮಕ್ಷಮ ಜನಸಂಪರ್ಕ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗಿದೆ. ಉರಳಗಲ್ಲು ಗ್ರಾಮದಲ್ಲಿ 63 ಮನೆಗಳಿವೆ. ಯಾವುದೇ ಮನೆಗಳಿಗೆ ವಿದ್ಯುತ್ ಸೌಲಭ್ಯ, ರಸ್ತೆ ಸಂಪರ್ಕ ಇಲ್ಲ. ಹಿಂದೆ ಸೋಲಾರ್ ವ್ಯವಸ್ಥೆಯಲ್ಲಿ ಬೆಳಕು ನೀಡುವ ಪ್ರಯತ್ನ ನಡೆದಿತ್ತು. ಅದು ಈಗ ಕೆಟ್ಟು ನಿಂತಿದೆ. ಈ ಹಿನ್ನೆಲೆಯಲ್ಲಿ ಬೆಳಕು ಯೋಜನೆಯಡಿ ಎಲ್ಲ ಮನೆಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಇದು ಅಭಯಾರಣ್ಯ ವ್ಯಾಪ್ತಿಯಲ್ಲಿ ಬರುತ್ತಿದ್ದು 6 ಕಿ.ಮೀ. ವಿದ್ಯುತ್‌ಲೈನ್ ಎಳೆಯಬೇಕಾಗಿದ್ದು, ಇದಕ್ಕೆ ಅರಣ್ಯ ಇಲಾಖೆಯವರು ಒಪ್ಪಿದ್ದಾರೆ ಎಂದರು.

ರಸ್ತೆ ಸಂಪರ್ಕ ಮತ್ತು ಕಾಲುಸಂಕ, ಕಿರುಸೇತುವೆ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ಮೊದಲ ಹಂತದಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ಗ್ರಾವೆಲ್ ಹಾಕಿ ರಸ್ತೆ ನಿರ್ಮಿಸಲು ಸೂಚನೆ ನೀಡಲಾಗಿದೆ. ಇದರ ಜೊತೆಗೆ ಬಸ್ ಸಂಚಾರಕ್ಕೆ ಅನುಕೂಲ ಕಲ್ಪಿಸಲು 15 ಕ್ಷ ರೂ. ವೆಚ್ಚದಲ್ಲಿ 300 ಮೀಟರ್ ರಸ್ತೆ ನಿರ್ಮಿಸಲಾಗುತ್ತಿದೆ. ಮೊದಲ ಹಂತದಲ್ಲಿ 45 ಲಕ್ಷ ರೂ. ನೀಡುತ್ತಿದ್ದು, ಮತ್ತೆ 30 ಲಕ್ಷ ರೂಪಾಯಿ ರಸ್ತೆ ನಿರ್ಮಾಣಕ್ಕೆ ನೀಡಲಾಗುತ್ತದೆ. ಈ ಭಾಗದಲ್ಲಿ ಸಾರ್ವಜನಿಕ ಸಂಚಾರಕ್ಕೆ ಮಳೆಗಾಲದಲ್ಲಿ ಅನುಕೂಲವಾಗಲಿ ಎಂದು 5 ಕಿರು ಸೇತುವೆ ಮತ್ತು ಕಾಲುಸಂಕವನ್ನು ನಿರ್ಮಿಸಲಾಗುತ್ತದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ 6 ತರಗತಿವರೆಗೆ ಸ್ಥಳೀಯವಾಗಿ ವಿದ್ಯಾಭ್ಯಾಸ ನೀಡಿದರೆ, 7 ನೇ ತರಗತಿಯಿಂದ ಪದವಿವರೆಗೆ ಈ ಭಾಗದ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಶಿಕ್ಷಣ ನೀಡಲು ಚಿಂತನೆ ನಡೆಸಲಾಗಿದ್ದು, ಸರ್ಕಾರದ ಜೊತೆ ಮಾತುಕತೆ ನಡೆಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಅರಲಗೋಡು ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಿ.ಆರ್.ಮೇಘರಾಜ್, ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್, ಅರಣ್ಯ, ಕಂದಾಯ, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.