ನನಗೆ ಡಿಸಿಎಂ ಸ್ಥಾನ ನೀಡುವಂತೆ ಸಿಎಂ ಬಳಿ ಕೇಳಿದ್ದೇನೆ : ಸಚಿವ ಶ್ರೀರಾಮುಲು
Team Udayavani, Feb 7, 2020, 4:42 PM IST
ಶಿವಮೊಗ್ಗ : ಮಗಳ ಮದುವೆಗೆ ಕರೆಯಲು ಶಿವಮೊಗ್ಗಕ್ಕೆ ಆಗಮಿಸಿದ್ದೇನೆ. ಶಿವಮೊಗ್ಗದಲ್ಲಿರುವ ಆಪ್ತರು ಹಾಗೂ ಸ್ನೇಹಿತರನ್ನು ಮದುವೆಗೆ ಆಮಂತ್ರಿಸಿದ್ದೇನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ನಗರದಲ್ಲಿ ಹೇಳಿದರು.
ಇದೇ ವೇಳೆಯಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತಾನಾಡಿದ ಅವರು, ರಾಜ್ಯದಲ್ಲಿ ಕರೋನ ವೈರಸ್ ಗೆ ಸಂಬಂಧಿಸಿದಂತೆ 97 ಜನರಿಗೆ ಕರೋನ ವೈರಸ್ ಟೆಸ್ಟ್ ಮಾಡಲಾಗಿದೆ. ಆದರೆ ಯಾರಲ್ಲಿಯೂ ಕರೋನ ವೈರಸ್ ಕಂಡು ಬಂದಿಲ್ಲ. ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿಯೂ ಹತ್ತು ಹಾಸಿಗೆಗಳ ವಿಶೇಷ ವಾರ್ಡ್ ಆರಂಭಿಸಲಾಗಿದೆ. ಶಂಕಿತ ಪ್ರಕರಣಗಳು ಕಂಡು ಬಂದಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುವುದು. ಎಂದರು. ಈಗಾಗಲೇ ಹತ್ತು ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ.
ಮುಂದುವರೆದು ಮಾತಾನಾಡಿದ ಅವರು ,ಇನ್ನು ಕೆಲವರು ಮಂತ್ರಿ ಸ್ಥಾನಕ್ಕಾಗಿ ಒತ್ತಾಯ ಮಾಡುತ್ತಿದ್ದಾರೆ. ಪಕ್ಷದ ಮುಖಂಡರು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ. ನನಗೆ ಡಿಸಿಎಂ ಸ್ಥಾನ ನೀಡುವಂತೆ ಸಿಎಂ ಬಳಿ ಕೇಳಿದ್ದೇನೆ. ಸಿಎಂ ಯಡಿಯೂರಪ್ಪ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ. ಪದೇ ಪದೇ ಒತ್ತಡ ಹಾಕಿ ಯಡಿಯೂರಪ್ಪ ಅವರಿಗೆ ಮುಜುಗರ ಆಗುವಂತೆ ಮಾಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ