ಮೈಸೂರಿನಲ್ಲಿ ಐಎಎಸ್ ಅಧಿಕಾರಿಗಳ ಕಿತ್ತಾಟ: ಶಿಲ್ಪಾ ನಾಗ್ ಪರ ಬ್ಯಾಟ್ ಬೀಸಿದ ಸಚಿವ ಈಶ್ವರಪ್ಪ.


Team Udayavani, Jun 5, 2021, 11:18 AM IST

ಮೈಸೂರಿನಲ್ಲಿ ಐಎಎಸ್ ಅಧಿಕಾರಿಗಳ ಕಿತ್ತಾಟ: ಶಿಲ್ಪಾ ನಾಗ್ ಪರ ಬ್ಯಾಟ್ ಬೀಸಿದ ಸಚಿವ ಈಶ್ವರಪ್ಪ.

ಶಿವಮೊಗ್ಗ: ಜಿಲ್ಲೆಯ ಐಎಎಸ್ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಮತ್ತು ಶಿಲ್ಪಾ ನಾಗ್ ನಡುವಿನ ಕಿತ್ತಾಟ ಇದೀಗ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಪರ ಪರೋಕ್ಷವಾಗಿ ಬ್ಯಾಟ್ ಬೀಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾತನಾಡಿದ ಸಚಿವ ಈಶ್ವರಪ್ಪ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆಡಳಿತ ಪಕ್ಷದ ಸಂಸದರು ಸೇರಿ ಎಲ್ಲಾ ಪಕ್ಷದ ಜನಪ್ರತಿನಿಧಿಗಳು ಆರೋಪ ಮಾಡುತ್ತಿದ್ದಾರೆ. ರೋಹಿಣಿ ಸಿಂಧೂರಿ ಬಗ್ಗೆ ನನಗೆ ಅಷ್ಟು ಗೊತ್ತಿಲ್ಲ, ಆದರೆ, ಶಿಲ್ಪಾ ನಾಗ್ ನನ್ನ ಇಲಾಖೆಯಲ್ಲಿದ್ದಾಗ ಉತ್ತಮ ಕೆಲಸ ಮಾಡಿದ್ದಾರೆ. ಕೇರಳಕ್ಕೆ ಹೋಗಿ ಅಲ್ಲಿನ ಗ್ರಾಮ ಪಂಚಾಯಿತಿ ವ್ಯವಸ್ಥೆಯನ್ನು ಅಧ್ಯಯನ ಮಾಡಿಕೊಂಡು ಬಂದಿದ್ದರು. ಅವರು ಒಳ್ಳೆಯ ಐಎಎಸ್ ಅಧಿಕಾರಿ ಎಂದಷ್ಟೇ ಹೇಳಬಲ್ಲೆ ಎಂದರು.

ಇದನ್ನೂ ಓದಿ:ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಎಸ್ಎಸ್ಎಲ್ ಸಿ ಅಂಕವೂ ಪರಿಗಣನೆ: ಸುರೇಶ್ ಕುಮಾರ್

ಐಎಸ್ ಅಧಿಕಾರಿಗಳು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಹೇಳಿಕೆ ನೀಡುವುದು ಸರಿಯಲ್ಲ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ.  ಇಂತಹ ಘಟನೆ ಮರುಕಳಿಸದಂತೆ ಕ್ರಮ ವಹಿಸಲಿದೆ ಎಂದರು.

ಕಾಂಗ್ರೆಸ್ ಅಪಪ್ರಚಾರ ಕಾರಣ: ಕೋವಿಡ್ ನಿಯಂತ್ರಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲ ಎಂಬ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಅವರದೇ ಪಕ್ಷ ಆಡಳಿತ ನಡೆಸುತ್ತಿರುವ ರಾಜಸ್ಥಾನ, ಪಂಜಾಬ್ ರಾಜ್ಯಗಳಿಗೆ ಹೋಗಿಬರಲಿ. ಅಲ್ಲಿ ಎಷ್ಟರ ಮಟ್ಟಿಗೆ ಕೋವಿಡ್ ನಿಯಂತ್ರಣದಲ್ಲಿದೆ ಎಂದು ನೋಡಿಕೊಂಡು ಬರಲಿ ಎಂದು ತಿರುಗೇಟು ನೀಡಿದರು.

ರಾಜ್ಯ, ಕೇಂದ್ರ ಸರ್ಕಾರಗಳು ಕೋವಿಡ್ ನಿಯಂತ್ರಣಕ್ಕೆ ಸಾಕಷ್ಟು ಕೆಲಸ ಮಾಡುತ್ತಿವೆ ಆದರೆ ವಿರೋಧ ಪಕ್ಷದವರು ಕೇವಲ ಟೀಕೆಗಾಗಿ ಟೀಕೆ ಮಾಡುತ್ತಿದ್ದಾರೆ. ಲಸಿಕೆ ವಿಚಾರದಲ್ಲೂ ಇಲ್ಲ ಸಲ್ಲದ ಆರೋಪ ಮಾಡಿದರು, ಹೀಗಾಗಿ ಜನರು ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರಲಿಲ್ಲ. ರಾಜ್ಯದಲ್ಲಿ ಕೋವಿಡ್ ಹರಡಲು ಕಾಂಗ್ರೆಸ್ ನ ಅಪಪ್ರಚಾರವೇ ನೇರ ಕಾರಣ ಎಂದು ಈಶ್ವರಪ್ಪ ಆರೋಪಿಸಿದರು.

ಸದ್ಯ ಗ್ರಾಮಾಂತರ ಪ್ರದೇಶಗಳಲ್ಲಿ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಬಂದಿದೆ. ಸರ್ಕಾರ ಟಾಸ್ಕ್ ಫೋರ್ಸ್ ರಚಿಸಿದ್ದರ ಫಲವಾಗಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ ಎಂದು ಸಚಿವ ಈಶ್ವರಪ್ಪ ಹೇಳಿದರು.

ಟಾಪ್ ನ್ಯೂಸ್

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಾ.ಪಂ., ಜಿ.ಪಂ. ಕ್ಷೇತ್ರ ನಿಗದಿ ವಿಷಯ ಹೈಕೋರ್ಟ್‌ಗೆ

ತಾ.ಪಂ., ಜಿ.ಪಂ. ಕ್ಷೇತ್ರ ನಿಗದಿ ವಿಷಯ ಹೈಕೋರ್ಟ್‌ಗೆ

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ಬೆಂಕಿಗೂ ಹೆದರಲ್ಲ, ಜನರಿಗೂ ಬೆದರಲ್ಲ :ನಾಗರಹೊಳೆ ರಸ್ತೆಯಲ್ಲಿ 2 ಗಂಟೆ ಜನರನ್ನು ಕಾಡಿದ ಸಲಗ

ಬೆಂಕಿಗೂ ಹೆದರಲ್ಲ, ಜನರಿಗೂ ಬೆದರಲ್ಲ :ನಾಗರಹೊಳೆ ರಸ್ತೆಯಲ್ಲಿ 2 ಗಂಟೆ ಜನರನ್ನು ಕಾಡಿದ ಸಲಗ

1-fffsdfdsdsfsf

ಬಿಜೆಪಿ ಹಿರಿಯ ನಾಯಕ, ಮಾಜಿ ಶಾಸಕ ರಾಮ್ ಭಟ್ ವಿಧಿವಶ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.