Udayavni Special

ಸ್ವಾಮೀಜಿಗಳು ಮೀಸಲಾತಿ ಹೋರಾಟಕ್ಕೆ ಮುಂದೆ ಬಂದಿರುವುದು ಸ್ವಾಗತಾರ್ಹ: ಈಶ್ವರಪ್ಪ


Team Udayavani, Feb 22, 2021, 3:32 PM IST

k s eshwarappa

ಶಿವಮೊಗ್ಗ: ಕರ್ನಾಟಕದಲ್ಲಿ ಹಲವು ಸಮಾಜದವರು ಮೀಸಲಾತಿ ಕೇಳುತ್ತಿದ್ದಾರೆ. ಯಾವ ಸಮಾಜಕ್ಕೆ ಅರ್ಹತೆ ಇದೆಯೋ ಅವರಿಗೆ ಮೀಸಲಾತಿ ನೀಡಬೇಕು ಎಂಬುದು ಅಂಬೇಡ್ಕರ್ ಆಶಯವಾಗಿತ್ತು. ಆದರೆ ಇದುವರೆಗೆ ಹಲವು ಸಮಾಜಗಳಿಗೆ ಧ್ವನಿ ಇರಲಿಲ್ಲ. ಇದೀಗ ಸ್ವಾಮೀಜಿಗಳು ಮೀಸಲಾತಿ ಹೋರಾಟಕ್ಕೆ ಮುಂದೆ ಬಂದಿರುವುದು ಸ್ವಾಗತಾರ್ಹ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ‌ ಸಚಿವ ಕೆ‌.ಎಸ್.ಈಶ್ವರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೆ ನ್ಯಾಯಯುತವಾಗಿ ಮೀಸಲಾತಿ ಸಿಗಬೇಕಿದೆಯೋ ಅವರಿಗೆ ಮೀಸಲಾತಿ ಕೊಡಬೇಕು. ಕರ್ನಾಟಕದಲ್ಲಿ ನಿವೃತ್ತ ಹೈಕೋರ್ಟ್ ಜಡ್ಜ್ ನೇತೃತ್ವದಲ್ಲಿ ಸಮಿತಿ ಮಾಡಲಾಗುವುದು. ಆ ಸಮಿತಿ ನೀಡುವ ವರದಿ ಆಧರಿಸಿ ಮೀಸಲಾತಿ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಅರ್ಹತೆಗೆ ತಕ್ಕಂತೆ ಆಯಾ ಜಾತಿಗಳಿಗೆ ಮೀಸಲಾತಿ ನೀಡಲಾಗುವುದು‌ ಹಲವು ಸಮಾಜಗಳ ಕುಲಶಾಸ್ತ್ರ ಅಧ್ಯಯನ‌ ನಡೆಯುತ್ತಿದೆ. ಕುಲಶಾಸ್ತ್ರ ಅಧ್ಯಯನದ ವರದಿ ಬರಬೇಕು. ವರದಿ ಬರಲು ಸಾಕಷ್ಟು ಕಾಲಾವಕಾಶ ಬೇಕು. ಈ ವರದಿ ಬಂದ ಬಳಿಕ ಮೀಸಲಾತಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಈಶ್ವರಪ್ಪ ಹೇಳಿದರು.

ಯತ್ನಾಳ್ ಹಿಂದುತ್ವವಾದದ ಖುಷಿಯಿದೆ: ಶಾಸಕ ಯತ್ನಾಳ್ ಬಗ್ಗೆ ಬಿಜೆಪಿ ರಾಜ್ಯ ಸಮಿತಿಯಿಂದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ. ಕೇಂದ್ರ‌ ನಾಯಕರು ಯತ್ನಾಳ್ ಅವರಿಗೆ ನೊಟೀಸ್‌ ನೀಡಿದ್ದಾರೆ. ಇದಕ್ಕೆ ಯತ್ನಾಳ್ ಉತ್ತರವನ್ನೂ ನೀಡಿದ್ದಾರೆ. ಯತ್ನಾಳ್ ಪ್ರಖರ ಹಿಂದುತ್ವವಾದಿ ಈ ಬಗ್ಗೆ ಖುಷಿ ನನಗಿದೆ. ಆದರೆ ಪಕ್ಷ ಶಿಸ್ತಿನ ಒಳಗೇ ಅವರಿದ್ದರೆ ಒಳ್ಳೆಯದು ಎಂಬ ಸಲಹೆ ಅವರಿಗೆ ನೀಡುತ್ತೇನೆ ಎಂದರು.

ಇದನ್ನೂ ಓದಿ:ಹಿಂದಿನ ಸರ್ಕಾರಗಳು ಅಸ್ಸಾಂ ಅಭಿವೃದ್ಧಿ ಸಂಪೂರ್ಣ ಕಡೆಗಣಿಸಿವೆ: ಪ್ರಧಾನಿ ಮೋದಿ

ಮುಖ್ಯಮಂತ್ರಿ ಮತ್ತು ವಿಜಯೇಂದ್ರ ಬಗ್ಗೆ ಯತ್ನಾಳ್ ದೂರು ನೀಡಿದ್ದಾರೆ. ಯತ್ನಾಳ್ ಬಳಿ ಸಾಕ್ಷಿ ಏನಿದೆಯೋ ನೋಡೋಣ. ಕೇಂದ್ರ ನಾಯಕರಿಗೆ ಸಾಕ್ಷಿ ಸಹಿತ ಹೈಕಮಾಂಡ್ ಗೆ ಹನ್ನೊಂದು ಪುಟದ ಉತ್ತರ ನೀಡಿದ್ದೇನೆ ಎಂದಿದ್ದಾರೆ. ಇವರ ಉತ್ತರ ನೋಡಿ ಹೈಕಮಾಂಡ್ ಕ್ರಮ ಕೈಗೊಳ್ಳಲಿದೆ‌ ಎಂದರು.

ಉಪ್ಪು ತಿಂದವರು ನೀರು ಕುಡಿಯುತ್ತಾರೆ: ಐಎಂಎ ಪ್ರಕರಣದ ಬಗ್ಗೆ ನಾನು ರಾಜಕೀಯವಾಗಿ ತೆಗೆದುಕೊಳ್ಳುವುದಿಲ್ಲ. ಸಿದ್ದರಾಮಯ್ಯ, ಕುಮಾರಸ್ವಾಮಿಯವರ ಬಗ್ಗೆ ಸಿಬಿಐ ಸ್ಪಷ್ಟಪಡಿಸಿದೆ. ಆರ್.ವಿ.ದೇಶಪಾಂಡೆ, ಪರಮೇಶ್ವರ್ ಗೂ ಐಎಂಎನಿಂದ ಹಣ ಬಂದಿದೆ ಎಂಬ ಆರೋಪ ಇದೆ. ಇಲ್ಲಿ ನಾನು ರಾಜಕಾರಣ ಮಾಡುವುದಿಲ್ಲ. ಇವರೆಲ್ಲರೂ ಆರೋಪದಿಂದ ಮುಕ್ತರಾಗಲಿ ಎಂದು ಆಶಿಸುತ್ತೇನೆ. ಒಂದು ವೇಳೆ ತಪ್ಪು ಮಾಡಿದ್ದರೆ ಉಪ್ಪು ತಿಂದವರು ನೀರು ಕುಡಿಯುತ್ತಾರೆ ಅಷ್ಟೇ ಎಂದು ಈಶ್ವರಪ್ಪ ಹೇಳಿದರು.

ಇದನ್ನೂ ಓದಿಗ್ರಾಮ ವಾಸ್ತವ್ಯದಲ್ಲಿ ತಹಶೀಲ್ದಾರ್‌, ಸಿಬ್ಬಂದಿ ಡಾನ್ಸ್‌

ಹುಣಸೋಡು ಸ್ಫೋಟ ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೇನೆ. ಪ್ರಕರಣದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಕುರಿತು ಮಾಹಿತಿ ಪಡೆಯಲು ತನಿಖಾಧಿಕಾರಿಗಳು ಜಿಲ್ಲಾಧಿಕಾರಿಯನ್ನು ಕರೆದಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

ಇ-ಅಂಕಪಟ್ಟಿ; ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿ.ವಿ. ಕ್ರಮ

ಇ-ಅಂಕಪಟ್ಟಿ; ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿ.ವಿ. ಕ್ರಮ

ಉಪ ಚುನಾವಣೆ ಬಳಿಕ ತೈಲ ಬೆಲೆ ಇಳಿಕೆ: ಬಸವರಾಜ ಬೊಮ್ಮಾಯಿ

ಉಪ ಚುನಾವಣೆ ಬಳಿಕ ತೈಲ ಬೆಲೆ ಇಳಿಕೆ: ಬಸವರಾಜ ಬೊಮ್ಮಾಯಿ

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಕಾಂಗ್ರೆಸ್‌ ನಾಯಕತ್ವ ಮತ್ತು ರಾಹುಲ್‌ಗೆ ಎಐಸಿಸಿ ಪಟ್ಟ

ಕಾಂಗ್ರೆಸ್‌ ನಾಯಕತ್ವ ಮತ್ತು ರಾಹುಲ್‌ಗೆ ಎಐಸಿಸಿ ಪಟ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ಮಹಾನಗರ ಪಾಲಿಕೆಗಳಿಗೆ “ಪೊಲೀಸ್‌ ಪವರ್‌’ ಪ್ರಸ್ತಾವನೆಗೆ ಮರು ಜೀವ?

ಮಹಾನಗರ ಪಾಲಿಕೆಗಳಿಗೆ “ಪೊಲೀಸ್‌ ಪವರ್‌’ ಪ್ರಸ್ತಾವನೆಗೆ ಮರು ಜೀವ?

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ಈ ದೇಶಗಳಿಗೆ ಹೋಗುವುದು ಸುಲಭ

ಈ ದೇಶಗಳಿಗೆ ಹೋಗುವುದು ಸುಲಭ

ದೊಡ್ಡವರು ಪಡೆದಿದ್ದರಷ್ಟೇ ಮಕ್ಕಳಿಗೆ ಕೋವಿಡ್‌ ಲಸಿಕೆ

ದೊಡ್ಡವರು ಪಡೆದಿದ್ದರಷ್ಟೇ ಮಕ್ಕಳಿಗೆ ಕೋವಿಡ್‌ ಲಸಿಕೆ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.