ಸರ್ಕಾರ ಉಳಿಸಿದವರಿಗೂ, ಸಾಮಾನ್ಯ ಕಾರ್ಯಕರ್ತರಿಗೂ ತೃಪ್ತಿ ತರಲಿದೆ ನಮ್ಮ ಆಯ್ಕೆ: ಈಶ್ವರಪ್ಪ
Team Udayavani, Jun 13, 2020, 11:01 AM IST
ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಮಾಡುವಾಗ ಸರ್ಕಾರ ಉಳಿಸಿದವರಿಗೂ, ಸಾಮಾನ್ಯ ಕಾರ್ಯಕರ್ತರಿಗೂ ತೃಪ್ತಿ ತರುವ ರೀತಿ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ – ಜೆಡಿಎಸ್ ನಲ್ಲಿದ್ದ ಅನೇಕರು ಬಿಜೆಪಿಗೆ ಬಂದಿದ್ದಾರೆ. ಸರ್ಕಾರ ರಚಿಸಿ, ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಋಣವನ್ನು ನಾವು ಸಹ ತೀರಿಸಬೇಕಾಗಿದೆ. ಸುಮ್ಮನೆ ಕರೆದು ಮೋಸ ಮಾಡುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಎಂದರು.
ಹಲವು ವರ್ಷದಿಂದ ಪಕ್ಷ ಕಟ್ಟಿದ ಸಾಮಾನ್ಯ ಕಾರ್ಯಕರ್ತರು ಸಹ ಇದ್ದಾರೆ. ಪ್ರಸ್ತುತ 9 ಸ್ಥಾನಗಳಿದ್ದು, ಅವರಿಗೂ ಅವಕಾಶ ಕಲ್ಪಿಸಬೇಕಿದೆ. ಸೋಮವಾರ ಸಂಜೆ ಬಿಜೆಪಿ ಕೋರ್ ಕಮಿಟಿಯ ಸಭೆ ನಡೆಯಲಿದೆ. ಈ ಸಭೆಯಲ್ಲಿ ಆಯ್ಕೆ ಮಾಡಿ, ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುತ್ತದೆ. ಇಲ್ಲಿ ಹಳಬರು, ಹೊಸಬರು ಎಂಬ ವಿಚಾರವೇ ಬರಲ್ಲ. ಸರ್ಕಾರ ಉಳಿಸದವರಿಗೂ, ಸಾಮಾನ್ಯ ಕಾರ್ಯಕರ್ತರಿಗೂ ತೃಪ್ತಿ ತರೋ ಆಯ್ಕೆ ನಡೆಯಲಿದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ವಿಚಾರವಾಗಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಬಳಿಕ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ನಾಯಕರು ನಿರ್ಧಾರ ಮಾಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು !
ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು
ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್
ಶಿವಮೊಗ್ಗದಲ್ಲಿ ಫ್ಲೆಕ್ಸ್ ಪಾಲಿಟಿಕ್ಸ್; ಈಶ್ವರಪ್ಪಗೆ ಆಯನೂರು ಮಂಜುನಾಥ್ ಟಾಂಗ್
ಡಿಸಿ ಕಚೇರಿ ಮುಂದೆ ಆಜಾನ್ ವಿಚಾರ: ಹಿಂದೂ ಕಾರ್ಯಕರ್ತರಿಂದ ಗೋಮೂತ್ರ ಹಾಕಿ ಸ್ಥಳ ಶುದ್ದೀಕರಣ
MUST WATCH
ಹೊಸ ಸೇರ್ಪಡೆ
ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ
ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ
ಎ. 2 ರಂದು ಸಿತಾರ್-ಬಾನ್ಸುರಿ ಜುಗಲ್ ಬಂದಿ “ಬಸಂತ್ ಉತ್ಸವ್’
ಹೊಸ ವರ್ಷದ ಆರಂಭದಲ್ಲಿ ಸ್ವಚ್ಛ ಭಾರತ ಸಂಕಲ್ಪ ಮಾಡಿ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ಕರೆ
ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ