ಬಿದರೆ ಗ್ರಾಮಕ್ಕೆ ಭದ್ರಾ ಕಾಡಾ ಅಧ್ಯಕ್ಷರ ಭೇಟಿ

Team Udayavani, Jan 5, 2021, 3:03 PM IST

ಬಿದರೆ ಗ್ರಾಮಕ್ಕೆ ಭದ್ರಾ ಕಾಡಾ ಅಧ್ಯಕ್ಷರ ಭೇಟಿ

ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯಸೋಮವಾರ ಬಿದರೆ ಗ್ರಾಮಕ್ಕೆ ಭೇಟಿ ನೀಡಿಕೊನೆ ಭಾಗಕ್ಕೆ ನೀರು ಹರಿಸಲು ವ್ಯವಸ್ಥೆ ಮಾಡುವಂತೆ ಸೂಚಿಸಿದರು.

ಕಳೆದ ನವೆಂಬರ್‌ ತಿಂಗಳಲ್ಲಿ ಭದ್ರಾ ಜಲಾಶಯದಿಂದ ಎಡ ಮತ್ತು ಬಲನಾಲೆಗಳಿಗೆ ಹರಿಸುತ್ತಿದ್ದ ನೀರನ್ನು ಈಗಾಗಲೇನಿಲ್ಲಿಸಿದ್ದು, ಸಾಕಷ್ಟು ವರ್ಷಗಳಿಂದಹೂಳು ತೆಗೆಯುವ ಕೆಲಸ ಇಲಾಖೆಯವತಿಯಿಂದ ಆಗದೆ ಜಲಾಶಯದಿಂದ ನೀರುಬಿಟ್ಟಾಗ ರೈತರಿಗೆ ಪೂರ್ಣ ಪ್ರಮಾಣದಲ್ಲಿನೀರು ಲಭಿಸುವುದರಲ್ಲಿ ಸ್ವಲ್ಪ ಮಟ್ಟಿನತೊಂದರೆಯಾಗುತ್ತಿರುವುದು ದೊಡ್ಡಸಮಸ್ಯೆಯಾಗಿ ಉಳಿದಿತ್ತು. ಈ ನಿಟ್ಟಿನಲ್ಲಿಕಾರ್ಯಪ್ರವೃತ್ತರಾಗಿ ಯೋಚಿಸಿದಾಗ ಕೋವಿಡ್‌-19 ಸಂಕಷ್ಟದ ಸಮಯದಲ್ಲಿರಾಜ್ಯ ಸರ್ಕಾರಕ್ಕೆ ಎದುರಾಗಿರುವ ಆರ್ಥಿಕ ಸಂಕಷ್ಟವನ್ನು ಮನಗಂಡು ಕೇಂದ್ರಸರ್ಕಾರದ ಮಹಾತ್ಮ ಗಾಂ  ಉದ್ಯೋಗ ಖಾತ್ರಿ ಯೋಜನೆಯಡಿ ಹೂಳು ತೆಗೆಸುವ ಕಾಮಗಾರಿ ಕೈಗೊಂಡರೆ ಕೆಲಸವಿಲ್ಲದ ಗ್ರಾಮೀಣ ಭಾಗದ ದುಡಿಯುವ ಕೈಗಳಿಗೆ ಕೆಲಸ ಕೊಟ್ಟಂತಾಗುತ್ತದೆ.

ರೈತರ ಸಮಸ್ಯೆಗೆ ಸ್ವಲ್ಪ ಮಟ್ಟಿನ ಕಾಯಕಲ್ಪ ನೀಡಿದಂತಾಗುತ್ತದೆ ಎಂದು ಆಲೋಚಿಸಿಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ ಅವರನ್ನು ಭೇಟಿ ಮಾಡಿ ಕಾಡಾ ವ್ಯಾಪ್ತಿಯ ಗ್ರಾಪಂ‌ಳಿಗೆ ನರೇಗಾಯೋಜನೆಯ ಅಡಿಯಲ್ಲಿ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಸಲ್ಲಿಸಿದ್ದರು.

ಅದರಂತೆ ಈ ಮನವಿಗೆ ಸ್ಪಂದಿಸಿ ಎಲ್ಲಾ ಗ್ರಾಪಂ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಅನುದಾನ ಬಿಡುಗಡೆ ಮಾಡಿದ್ದಾರೆ. ಜಿಲ್ಲೆಯ ಹಲವಾರುಕಡೆ ಈಗಾಗಲೇ ನರೇಗಾ ಅಡಿ ಹೂಳು ತೆಗೆಯುವ ಕಾರ್ಯ ಆರಂಭವಾಗಿದೆ. ಜಲಾಶಯದಿಂದ ನೀರು ನಿಲ್ಲಿಸಿರುವ ಈ ಬಿಡುವಿನ ಅವ ಧಿಯಲ್ಲಿ ಕಾಲುವೆಗಳಲ್ಲಿತುಂಬಿಕೊಂಡಿರುವ ಹೂಳನ್ನು ಎತ್ತುವ ಹಾಗೂ ಕಾಲುವೆಗಳ ಬದಿಯಲ್ಲಿ ಯಥೇತ್ಛವಾಗಿ ತುಂಬಿರುವ ಗಿಡ ಗಂಟೆಗಳನ್ನು ತಗೆಸುವ ಕೆಲಸ ಪ್ರಗತಿಯಲ್ಲಿದ್ದು ಅಧಿಕಾರಿಗಳೊಂದಿಗೆ ಗ್ರಾಮದ ರೈತರೊಂದಿಗೆ ಭೇಟಿ ಮಾಡಿಪರಿಶೀಲನೆ ನಡೆಸಿ ಕಾಮಗಾರಿಯ ಗುಣಮಟ್ಟ ವೀಕ್ಷಿಸಿದರು.

ಭದ್ರಾ ಅಚ್ಚುಕಟ್ಟು ಭಾಗದ ರೈತರು ಅನೇಕ ವರ್ಷಗಳಿಂದ ಎದುರಿಸುತ್ತಿರುವ ಕೊನೆಯ ಭಾಗದ ರೈತರಿಗೆ ನೀರು ತಲುಪುತ್ತಿಲ್ಲ ಎಂಬ ಕೂಗಿಗೆ ನಾನು ಧ್ವನಿಯಾಗಿ ನಿಲ್ಲಲು ಈಗಾಗಲೇ ಯೋಜನೆ ರೂಪಿಸುತ್ತಿದ್ದುಈ ನಿಟ್ಟಿನಲ್ಲಿ ಕಾರ್ಯ ಆರಂಭಿಸಿದ್ದೇನೆ. ಕೊನೆಯ ಭಾಗಕ್ಕೆ ನೀರು ಮುಟ್ಟ ಬೇಕೆಂದು,ರೈತರು ಹಸನ್ಮುಖರಾಗಬೇಕೆಂದು ನನ್ನ ಕನಸಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಭಾನುವಾರ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭದ್ರಾ ಎಡದಂಡೆನಾಲೆಯ ಶಿವಮೊಗ್ಗ ತಾಲೂಕು ಸೋಗಾನೆಬಳಿ ಇರುವ ಕೆರೆಯನ್ನು ವೀಕ್ಷಿಸಿದರು.ಸುದೀರ್ಘ‌ ರೈತ ಹೋರಾಟದಲ್ಲಿದ್ದಸಂದರ್ಭದಲ್ಲಿ ಕೂಡ ಭದ್ರಾ ಅಚ್ಚುಕಟ್ಟುವ್ಯಾಪ್ತಿಯ ರೈತರಿಗೆ ಜಲಾಶಯದಿಂದ ನೀರುಬಿಟ್ಟಾಗ ಅದು ಕೊನೆಯ ಭಾಗಕ್ಕೆ ತಲುಪದೆಇರುವುದು ನನ್ನ ಗಮನಕ್ಕೆ ಬಂದಿದ್ದುಕೂಡಲೇ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.