ಕಟೀಲ್ ಒಬ್ಬ ಜೋಕರ್, ಅವರಿಗೆ ಉತ್ತರಿಸುವುದು ಸಮಯ ವ್ಯರ್ಥ : ಸಿದ್ದರಾಮಯ್ಯ


Team Udayavani, Oct 29, 2022, 1:09 PM IST

siddaramaiah

ಶಿವಮೊಗ್ಗ: ನಳಿನ್‌ ಕುಮಾರ್‌ ಕಟೀಲ್‌ ಒಬ್ಬ ಜೋಕರ್‌, ಅವರ ಮಾತಿಗೆಲ್ಲ ಉತ್ತರ ಕೊಡುತ್ತಾ ಸಮಯ ವ್ಯರ್ಥ ಮಾಡಲು ನಾನು ಸಿದ್ಧನಿಲ್ಲ ವಿಪಕ್ಷ ನಾಯಕ ಸಿದ್ದ ರಾಮಯ್ಯ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಕಟೀಲ್ ವಿರುದ್ಧ ಕಿಡಿಕಾರಿದರು.

ಪರೇಶ್‌ ಮೇಸ್ತಾ ಸಾವು ಸಂಭವಿಸಿದಾಗ ಬಿಜೆಪಿಯವರು ಸದನದಲ್ಲಿ ಗಲಾಟೆ ಮಾಡಿದರು, ಉತ್ತರ ಕನ್ನಡದಲ್ಲೂ ಗಲಭೆ ಮಾಡಿಸಿದರು. ಈ ಪ್ರಕರಣವನ್ನು ನಾನು ಸಿಬಿಐ ಗೆ ವಹಿಸಿದ್ದೆ. ಆಗ ಪ್ರಧಾನಿಯಾಗಿದ್ದವರು ನರೇಂದ್ರ ಮೋದಿ ಅವರು. ಗೃಹ ಸಚಿವರಾಗಿದ್ದವರು ಅಮಿತ್‌ ಶಾ ಅವರು. ಈಗ ಸಿಬಿಐ ವರದಿಯಲ್ಲಿ ಇದು ಆಕಸ್ಮಿಕ ಸಾವು ಎಂದು ಬಂದಿದೆ. ಅದಕ್ಕೆ ಬಿಜೆಪಿಯವರು ಸಿದ್ದರಾಮಯ್ಯನವರು ಸಾಕ್ಷ್ಯ ನಾಶ ಮಾಡಿದ್ರು ಎನ್ನುತ್ತಿದ್ದಾರೆ, ಇವರ ಯೋಗ್ಯತೆಗೆ 2008 ರಿಂದ 2013ರ ವರಗೆ ಅಥವಾ ಈಗ ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ಪ್ರಕರಣವನ್ನು ಸಿಬಿಐ ಗೆ ವಹಿಸಿದ್ದಾರಾ? ಇದೇ ಬಿಜೆಪಿಯವರು ಹಿಂದೆ ಸಿಬಿಐ ಎಂದರೆ ಕಾಂಗ್ರೆಸ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಶನ್‌ ಎನ್ನುತ್ತಿದ್ದರು, ಜೆಡಿಎಸ್‌ ನವರು ಚೋರ್‌ ಬಚಾವೋ ಇನ್ಸ್‌ಟಿಟ್ಯೂಟ್‌ ಎನ್ನುತ್ತಿದ್ದರು. ಈಗ ಸಿಬಿಐ ಗೆ ಏನಂತ ಕರೀಬೇಕು ನೀವೇ ಹೇಳಿ ನೋಡೋಣ? ಬಿಜೆಪಿ ಅವರ ಕೆಲಸ ಅಪಪ್ರಚಾರ ಮತ್ತು ಸುಳ್ಳು ಹೇಳುವುದು ಎಂದು ಟೀಕಿಸಿದರು.

ಭಾರತ ಐಕ್ಯತಾ ಯಾತ್ರೆಯ ಉದ್ದೇಶ ದ್ವೇಷ ರಾಜಕಾರಣದಿಂದ ಒಡೆದು ಹೋಗಿರುವ ಮನಸುಗಳನ್ನು ಒಂದುಗೂಡಿಸುವುದು, ಬೆಲೆಯೇರಿಕೆ, ನಿರುದ್ಯೋಗ, ರೈತರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರ ಇವುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದಾಗಿದೆ. ಆದರೆ ಬಿಜೆಪಿಯವರು ರಾಹುಲ್‌ ಗಾಂಧಿ ಅವರ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಯಾತ್ರೆಯ ಬಗ್ಗೆ ತಪ್ಪು ಮಾಹಿತಿ ನೀಡಲು ಕುತಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ:ಹಲವಾರು ಪ್ರಮುಖ ವಿರೋಧ ಪಕ್ಷದ ನಾಯಕರ ಭದ್ರತೆ ತೆಗೆದುಹಾಕಿದ ಶಿಂಧೆ ಸರ್ಕಾರ

ಶಿವಮೊಗ್ಗದಲ್ಲಿ ಗಲಾಟೆ ಮಾಡಿಸುವುದು ಈಶ್ವರಪ್ಪನವರು. ಜನರನ್ನು ಎತ್ತಿಕಟ್ಟಿ ಜಗಳ ಮಾಡುವಂತೆ ಮಾಡುವುದು ಅವರೆ. ಹರ್ಷ ಕೊಲೆಯಾದಾಗ ಆತನ ಹೆಣ ಇಟ್ಟುಕೊಂಡು ಮೆರವಣಿಗೆ ಮಾಡಿದರು, ಆಗ 144 ಸೆಕ್ಷನ್‌ ಇತ್ತು. ಸರ್ಕಾರವೂ ಇವರದೇ ಇದೆ ಆದರೂ ಒಬ್ಬ ಮಂತ್ರಿಯಾಗಿ ಈ ರೀತಿ ಮೆರವಣಿಗೆ ಮಾಡಿದರು. ಇತಿಹಾಸದಲ್ಲಿ ಎಲ್ಲೂ ಹೀಗೆ ನಡೆದಿಲ್ಲ. ಈಶ್ವರಪ್ಪ ಅವರಂತವರಿಂದಲೇ ಸಮಾಜದಲ್ಲಿ ಅಶಾಂತಿ ನಿರ್ಮಾಣವಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿ ಆಗುವುದಿಲ್ಲ ಎಂದರು.

ಶ್ರೀರಾಮುಲು ಅವರು ನಾವು ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ನ್ಯಾ. ನಾಗಮೋಹನ್‌ ದಾಸ್‌ ಅವರ ವರದಿ ಜಾರಿ ಮಾಡುತ್ತೇವೆ, ಇದನ್ನು ರಕ್ತದಲ್ಲಿ ಬರೆದುಕೊಡ್ತೀನಿ ಎಂದು ಹೇಳಿದ್ದರು. ಅಧಿಕಾರಕ್ಕೆ ಬಂದು 24 ಗಂಟೆಯೊಳಗೆ ವರದಿ ಜಾರಿ ಮಾಡಿದರಾ? ಶ್ರೀರಾಮುಲು ಸಚಿವರಾಗಿರಲಿಲ್ವಾ? ನಾನು ರಾಮುಲು ಅವರನ್ನು ಪೆದ್ದ ಎನ್ನಲು ಕಾರಣ ಅವರೇ ಒಮ್ಮೆ ತಮ್ಮನ್ನು ತಾವು ಪೆದ್ದ ಎಂದು ಕರೆದುಕೊಂಡಿದ್ದರು. ಕೆಲವು ದಿನಗಳ ಹಿಂದೆ ಅವರು ಮಾತನಾಡುವಾಗ “ನಾನು ಉದ್ದವಿದ್ದೇನೆ ಆದರೂ ಪೆದ್ದ, ಆದರೆ ಬಸವರಾಜ ಬೊಮ್ಮಾಯಿ ಕುಳ್ಳ ಇದ್ದರೂ ಬುದ್ದಿವಂತ’ ಎಂದು ಹೇಳಿದ್ದರು. ಅವರ ಮಾತನ್ನೇ ನಾನು ನೆನಪು ಮಾಡಿದ್ದು ಅಷ್ಟೆ. ಸಮ್ಮಿಶ್ರ ಸರ್ಕಾರ ಇದ್ದಾಗ, ನಮ್ಮ ಪಕ್ಷದ ಪ್ರಿಯಾಂಕ್‌ ಖರ್ಗೆ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದರು ಆಗ ನಾಗಮೋಹನ್‌ ದಾಸ್‌ ಅವರ ಸಮಿತಿ ರಚನೆ ಆಗಿದ್ದು.ಈ ಸಮಿತಿ ವರದಿ ನೀಡಿದ್ದು ಎಂದು ಹೇಳಿದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.