ಮಹಿಳೆ-ಮಕ್ಕಳ ಅಕ್ರಮ ಸಾಗಾಟದ ಮೇಲೆ ನಿಗಾ ವಹಿಸಿ

Team Udayavani, Aug 22, 2017, 3:37 PM IST

22-SHIV-1.jpg

ಶಿವಮೊಗ್ಗ: ಗ್ರಾಮ ಮಟ್ಟದಲ್ಲಿ ಮಹಿಳೆ ಮತ್ತು ಮಕ್ಕಳ ಅಕ್ರಮ ಸಾಗಾಟ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ
ಡಾ| ಎಂ. ಲೋಕೇಶ್‌ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟುವ ಸಂಬಂಧ ಜಿಲ್ಲಾಮಟ್ಟದ ಕಾವಲು ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕಳೆದ ವರ್ಷ 200 ಮಹಿಳೆಯರ ನಾಪತ್ತೆ ಪ್ರಕರಣ ವರದಿಯಾಗಿದ್ದು, 169 ಮಂದಿಯನ್ನು ಪತ್ತೆ ಹಚ್ಚಲಾಗಿದೆ. ಈ ಅವಧಿಯಲ್ಲಿ 78 ಮಕ್ಕಳು ನಾಪತ್ತೆಯಾಗಿದ್ದು, 70 ಮಕ್ಕಳನ್ನು ಪತ್ತೆ ಹಚ್ಚಲಾಗಿದೆ. ಪ್ರಸ್ತುತ ವರ್ಷ ಇದುವರೆಗೆ 62 ಮಕ್ಕಳ ನಾಪತ್ತೆ ಪ್ರಕರಣ ವರದಿಯಾಗಿದೆ. ಅದರಲ್ಲಿ 51 ಮಂದಿಯನ್ನು ಪತ್ತೆ ಹಚ್ಚಲಾಗಿದೆ. ಇನ್ನೂ 11 ಮಕ್ಕಳು ಪತ್ತೆಯಾಗಬೇಕಿದೆ ಎಂದು ಮಾಹಿತಿ ನೀಡಿದರು.

ಮಕ್ಕಳ ನಾಪತ್ತೆ ಪ್ರಕರಣಗಳಲ್ಲಿ ಎಫ್‌ಐಆರ್‌ ದಾಖಲಾಗಿರುವುದಕ್ಕೂ ಮಕ್ಕಳ ಕಲ್ಯಾಣ ಸಮಿತಿ ಬಳಿ ಇರುವ ಸಂಖ್ಯೆಗೂ ತಾಳೆಯಾಗುತ್ತಿಲ್ಲ. ಇದಕ್ಕಾಗಿ ಪ್ರತಿ ತಿಂಗಳು ಪೊಲೀಸ್‌, ಮಕ್ಕಳ ಕಲ್ಯಾಣ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಭೆ ಸೇರಿ ಪ್ರಕರಣಗಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ಜಿಪಂ ಸಿಇಒ ರಾಕೇಶ್‌ ಕುಮಾರ್‌ ಮಾತನಾಡಿ, ಗ್ರಾಮ ಮಟ್ಟ ಹಾಗೂ ತಾಲೂಕು ಮಟ್ಟದಲ್ಲಿ ರಚಿಸಲಾಗಿರುವ ಕಾವಲು ಸಮಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ತಮ್ಮ ವ್ಯಾಪ್ತಿಯಲ್ಲಿರುವ ಮಹಿಳೆಯರು ಹಾಗೂ ಮಕ್ಕಳ ಕುರಿತಾಗಿ ದಾಖಲೆಗಳನ್ನು ಇಟ್ಟುಕೊಳ್ಳುವಂತೆ ಈಗಾಗಲೇ ಸೂಚನೆ ನೀಡಿದ್ದರೂ ಬಹುತೇಕ ಗ್ರಾಪಂಗಳಲ್ಲಿ ಮಾಹಿತಿ ಇಟ್ಟಿರುವುದಿಲ್ಲ. ನಿಗದಿತ ಅವಧಿಯೊಳಗೆ ದಾಖಲೆಗಳನ್ನು ಸರಿಪಡಿಸದಿದ್ದರೆ ಆಯಾ ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿಗಳನ್ನು ನೇರ ಹೊಣೆ ಮಾಡಲಾಗುವುದು  ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ 415ಮಕ್ಕಳು ತೀವ್ರ ಪೌಷ್ಟಿಕಾಂಶ ಕೊರತೆಯಿಂದ ಬಳಲುತ್ತಿದ್ದಾರೆ. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಪೌಷ್ಟಿಕಾಂಶ ಕೊರತೆ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು. ಪೌಷ್ಟಿಕಾಂಶ ಕೊರತೆಯಿಂದ ಬಳಲುತ್ತಿರುವ ಪ್ರತಿ ಮಕ್ಕಳ ಕೇಸ್‌ ಶೀಟ್‌ ಪ್ರತಿ ಅಂಗನವಾಡಿಗಳಲ್ಲಿ ತೆರೆದು ಮೂರು ತಿಂಗಳಿಗೊಮ್ಮೆ ವೈದ್ಯರಿಂದ ತಪಾಸಣೆ ನಡೆಸಬೇಕು ಎಂದು ಸೂಚನೆ ನೀಡಿದರು. ಸಭೆಯಲ್ಲಿ ವಿವಿಧ
ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.