ಗಾಂಧಿ-ನೆಹರೂ ವಿರುದ್ಧ ಪುಸ್ತಕ ಬರೆಯುವವರ ವೈಯಕ್ತಿಕ ಬದುಕು ಕುಲಗೆಟ್ಟು ಹೋಗಿದೆ: ಕಿಮ್ಮನೆ
Team Udayavani, Nov 22, 2021, 1:27 PM IST
ಶಿವಮೊಗ್ಗ: ಗಾಂಧಿ ಹಾಗೂ ನೆಹರೂ ವಿರದ್ಧವಾಗಿ ಕೆಲವರು ಪುಸ್ತಕ ಬರೆಯುತ್ತಾರೆ. ಹೀಗೆ ಪುಸ್ತಕ ಬರೆಯುವವರ ವೈಯಕ್ತಿಕ ಬದುಕು ಕುಲಗೆಟ್ಟು ಹೋಗಿದೆ ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರು ತಮ್ಮ ಮಕ್ಕಳಿಗೆ ಮಾದರಿಯಾಗಲು ಸಾಧ್ಯವಿಲ್ಲ. ಇಂಥವರು ಗಾಂಧಿ ಹಾಗೂ ನೆಹರೂ ವಿರುದ್ಧವಾಗಿ ಪುಸ್ತಕ ಬರೆಯುತ್ತಾರೆಂದು ಚಕ್ರವರ್ತಿ ಸೂಲಿಬೆಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಆರಗ ಜ್ಞಾನೇಂದ್ರ ತೀರ್ಥಹಳ್ಳಿಗೆ ಮಾತ್ರ ಗೃಹಸಚಿವರಾಗಿದ್ದಾರೆ: ಕಿಮ್ಮನೆ ರತ್ನಾಕರ್ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ಚಿನ್ನದ ರಸ್ತೆ ಮಾಡುತ್ತಾರೆ, ದೇಶದ ಸಾಲ ತೀರಿಸಿದ್ದಾರೆ ಎನ್ನುತ್ತಿದ್ದಾರೆ. ಆದರೆ ಸಾಲ ಮಾಡಿ ದೇಶಬಿಟ್ಟು ಓಡಿಹೋದವರು ಯಾರೂ ವಾಪಸ್ ಬಂದಿಲ್ಲ ಎಂದು ಕಿಮ್ಮನೆ ರತ್ನಾಕರ್ ವ್ಯಂಗ್ಯವಾಡಿದರು.