ಶಿವಮೊಗ್ಗ : ಕೊಮ್ಮನಾಳು ಭಾಗದ ಜನರಲ್ಲಿ ಭೀತಿ ಹುಟ್ಟಿಸಿದ್ದ ಹೆಣ್ಣು ಚಿರತೆ ಕೊನೆಗೂ ಸೆರೆ
Team Udayavani, Aug 30, 2022, 12:08 PM IST
ಶಿವಮೊಗ್ಗ : ಕಳೆದ ಕೆಲವು ದಿನಗಳಿಂದ ನಗರದ ಕೆಲವು ಕಡೆಗಳಲ್ಲಿ ಗ್ರಾಮದ ಜನರ ನಿದ್ದೆಗೆಡಿಸಿದ್ದ ಹೆಣ್ಣು ಚಿರತೆಯೊಂದು ಕೊನೆಗೂ ಸೆರೆಯಾಗಿದೆ.
ಶಿವಮೊಗ್ಗ ಗ್ರಾಮಾಂತರ ಭಾಗದ ಕೊಮ್ಮನಾಳು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಂಡಿತ್ತು, ಬನ್ನಿಕೆರೆ ಗ್ರಾಮದ ಹೊನ್ನಾಳಿ ಭಾಗದಲ್ಲೂ ಚಿರತೆ ಕಾಣಿಸಿಕೊಂಡು ಜನರು ಭಯಭೀತರಾಗಿದ್ದರು. ಈ ಕುರಿತು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಸೆರೆಗೆ ವ್ಯವಸ್ಥೆ ಮಾಡಿಕೊಂಡಿದ್ದರು ಆದರೆ ಇಂದು ಅರಣ್ಯ ಇಲಾಖೆಯ ಅಧಿಕಾರಿಗಳ ಕಾರ್ಯಾಚರಣೆಗೆ ಯಶಸ್ಸು ಸಿಕ್ಕಿದೆ. ಇದರೊಂದಿಗೆ ಗ್ರಾಮದ ಜನರಲ್ಲಿ ಮನೆಮಾಡಿದ್ದ ಆತಂಕ ದೂರವಾಗಿದೆ.
ಈ ಹಿಂದೆ ಹೊನ್ನಾಳಿಯ ಪಲವನಹಳ್ಳಿ ಗ್ರಾಮದಲ್ಲಿ ಮಹಿಳೆಯೋರ್ವರನ್ನು ಗಾಯಗೊಳಿಸಿತ್ತು.
ಇದನ್ನೂ ಓದಿ : ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಹೇಳಿಕೆ ಪ್ರತಾಪ್ ಸಿಂಹ ವಿರುದ್ಧ ಹೆಚ್.ಡಿಕೆ ಕಿಡಿ