ಬೆಳಗಾವಿಯ ಜನರ ನಿದ್ದೆಗೆಡಿಸಿದ್ದ ಚಿರತೆ ಕಾರ್ಯಾಚರಣೆಗೆ ಶಿವಮೊಗ್ಗದಿಂದ ಸ್ಪೆಷಲ್ ಟೀಂ
Team Udayavani, Aug 23, 2022, 3:28 PM IST
ಶಿವಮೊಗ್ಗ : ಬೆಳಗಾವಿ ನಗರದಲ್ಲಿ ಕಳೆದ ಕೆಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಇನ್ನೂ ಅರಣ್ಯ ಇಲಾಖೆಯ ಕಣ್ಣು ತಪ್ಪಿಸಿಕೊಂಡಿದ್ದು ಇದೀಗ ಚಿರತೆ ಸೆರೆಗೆ ಶಿವಮೊಗ್ಗದಿಂದ ವಿಶೇಷ ತಂಡ ಬೆಳಗಾವಿಗೆ ಹೊರಟಿದೆ.
ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜನರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಸೆರೆಗೆ ಅರಣ್ಯ ಇಲಾಖೆ ನಾನಾ ರೀತಿಯ ಕಾರ್ಯಾಚರಣೆ ನಡೆಸಿದರೂ ಪತ್ತೆಯಾಗಿಲ್ಲ, ಇದೀಗ ಶಿವಮೊಗ್ಗದ ಡಾಟಿಂಗ್ ಸ್ಪೆಷಲಿಸ್ಟ್ ವನ್ಯಜೀವಿ ತಜ್ಞ ಡಾ. ವಿನಯ್ ನೇತೃತ್ವದಲ್ಲಿ ವಿಶೇಷ ತಂಡವೊಂದು ಬೆಳಗಾವಿಗೆ ತೆರಳಲು ಸಿದ್ಧವಾಗಿದೆ, ಇದರಲ್ಲಿ ಸಕ್ರೇಬೈಲು ಆನೆ ಬಿಡಾರದ ಅರ್ಜುನ ಹಾಗೂ ಆಲೆ ಆನೆಗಳೂ ಸೇರಿ ವೈದ್ಯರು, ಸಹಾಯಕ ಸಿಬ್ಬಂದಿ, ಮಾವುತರು, ಕಾವಾಡಿಗಳು ಮತ್ತು ಬಿಡಾರದ ಸಹಾಯಕ ಸಿಬ್ಬಂದಿ ಸೇರಿದಂತೆ 8 ಜನರ ತಂಡ ಬೆಳಗಾವಿಗೆ ಹೊರಟಿದೆ.
ಚಿರತೆ ಪ್ರತ್ಯಕ್ಷಗೊಂಡ ಹಿನ್ನೆಲೆಯಲ್ಲಿ ಬೆಳಗಾವಿಯ ಕೆಲ ಶಾಲೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ. ಅಲ್ಲದೆ ಸೋಮವಾರ ಮುಂಜಾನೆ ನಗರದ ಪ್ರಮುಖ ರಸ್ತೆಯಲ್ಲೇ ಸಂಚರಿಸಿ ಭೀತಿ ಹುಟ್ಟಿಸಿದೆ.
ಇದನ್ನೂ ಓದಿ : ಐಸಿಸಿ ಪುರುಷರ ಏಕದಿನ ಶ್ರೇಯಾಂಕ: ನ್ಯೂಜಿಲ್ಯಾಂಡ್ ಗೆ ಅಗ್ರಸ್ಥಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು