ಭಯೋತ್ಪಾದಕ ಸಂಘಟನೆ ನಂಟು; ಶಿವಮೊಗ್ಗ- ಮಂಗಳೂರಿನ ಇಬ್ಬರ ಬಂಧನ
Team Udayavani, Sep 20, 2022, 3:58 PM IST
ಶಿವಮೊಗ್ಗ: ನಿಷೇಧಿತ ಭಯೋತ್ಪಾದಕ ಸಂಘಟನೆಯ ನಂಟು ಹೊಂದಿರುವ ಆರೋಪದಡಿ ಶಿವಮೊಗ್ಗ ಪೊಲೀಸರ ವಿಶೇಷ ತನಿಖಾ ತಂಡವು ಇಬ್ಬರನ್ನು ಬಂಧಿಸಿದ್ದು, ಮತ್ತೋರ್ವನಿಗಾಗಿ ಶೋಧ ನಡೆಸಿದೆ.
ಬಂಧಿತರನ್ನು ಮಂಗಳೂರಿನ 22 ವರ್ಷದ ಮಾಜ್ ಮುನೀರ್ ಅಹಮ್ಮದ್ ಮತ್ತು ಸಿದ್ದೇಶ್ವರ ನಗರದ 21 ವರ್ಷದ ಸಯ್ಯದ್ ಯಾಸೀನ್ ಎಂದು ಗುರುತಿಸಲಾಗಿದೆ.
ತೀರ್ಥಹಳ್ಳಿಯ ಸೊಪ್ಪುಗುಡ್ಡೆ ನಿವಾಸಿ ಶಾರೀಕ್ ಮತ್ತು ಆತನ ಸಹಚರರಾದ ಮಾಜ್ ಮುನೀರ್ ಅಹಮ್ಮದ್ ಹಾಗೂ ಸಯ್ಯದ್ ಯಾಸೀನ್ ನಿಷೇಧಿತ ಭಯೋತ್ಪಾದಕ ಸಂಘಟನೆಯ ನಂಟನ್ನು ಹೊಂದಿರುವ ಕಾರಣಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
ಇದನ್ನೂ ಓದಿ:2015- 16ರ ಶಿಕ್ಷಕರ ಅಕ್ರಮ ನೇಮಕ ಪ್ರಕರಣ ಸಿಐಡಿ ತನಿಖೆಗೆ: ಸಚಿವ ಬಿ.ಸಿ.ನಾಗೇಶ್
ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯಿದೆಯಡಿ ಕೇಸು ದಾಖಲಿಸಿಕೊಂಡಿರುವ ಪೊಲೀಸರು ಮಾಜ್ ಮುನೀರ್ ಅಹಮ್ಮದ್, ಸಯ್ಯದ್ ಯಾಸೀನ್ ಎಂಬಿಬ್ಬರು ದಸ್ತಗಿರಿ ಮಾಡಿ, ನ್ಯಾಯಾಂಗ ಬಂಧನಕ್ಕೆ ಹಾಜರು ಪಡಿಸಲಾಗಿದೆ.