ಸ್ಥಳೀಯ ಸಂಸ್ಥೆ ಚುನಾವಣೆ, ಕೈ-ಜೆಡಿಎಸ್ ಮೈತ್ರಿ; ಜಂಟಿ ಸುದ್ದಿಗೋಷ್ಠಿ

Team Udayavani, May 15, 2019, 5:06 PM IST

ಶಿವಮೊಗ್ಗ:ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಕಾಂಗ್ರೆಸ್ ಜೊತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ ತಿಳಿಸಿದ್ದಾರೆ.

ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮ 29ರಂದು ಐದು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಸ್ಥಳೀಯ ಅಗತ್ಯಕ್ಕನುಗುಣವಾಗಿ ಸೀಟು ಹಂಚಿಕೆ ಮಾಡಿಕೊಂಡು ಈಗಾಗಲೇ ಆಯಾ ಮುಖಂಡರ ಮುಂದಾಳತ್ವದಲ್ಲಿ ಪ್ರಚಾರ ಆರಂಭಿಸಲಾಗಿದೆ ಎಂದರು.

ಒಂದೆರಡು ಕಡೆ ಸಮಸ್ಯೆ ಬಂದರೆ ಅದನ್ನು ಪಕ್ಷದ ಮುಖಂಡರು ಬಗೆಹರಿಸಲಿದ್ದಾರೆ. ಈ ನೆಡೆಯಿದ ಬಿಜೆಪಿಯವರು ವಿಚಲಿತವಾಗಿದ್ದಾರೆ ಎಂದು ಆರೋಪಿಸಿದರು. ಯಾವ ಪಕ್ಷಕ್ಕೆ ಗೆಲುವಿನ ಸಾಧ್ಯತೆ ಹೆಚ್ಚು ಇದೆಯೋ ಆ ಪಕ್ಷಕ್ಕೆ ಹೆಚ್ಚಿನ ಟಿಕೆಟ್ ಸಿಗಲಿದೆ ಎಂದು ತಿಳಿಸಿದರು.

ಸ್ಥಳೀಯ ಅಭ್ಯರ್ಥಿಯ ವರ್ಚಸ್ಸು ಇಲ್ಲಿ ಮುಖ್ಯವಾಗುತ್ತದೆ. ಸುಂದರೇಶ್

ಸ್ಥಳೀಯ ಅಭ್ಯರ್ಥಿಯ ವರ್ಚಸ್ಸು ಇಲ್ಲಿ ಮುಖ್ಯವಾಗುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್‌.ಎಸ್.ಸುಂದರೇಶ್ ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ ಎರಡೂ ಪಕ್ಷದ ಪ್ರಮುಖರೊಂದಿಗೆ ಚರ್ಚಿಸಿ ಮೈತ್ರಿಯ ಬಗ್ಗೆ ಕ್ರಮ ಕೈಗೊಂಡಿದ್ದೇವೆ. ರಾಜ್ಯ ಮಟ್ಟದಲ್ಲಿ ಮೈತ್ರಿ ಇಲ್ಲದಿದ್ದಾಗಲೂ ಜಿಲ್ಲಾ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಸೀಟು ಹಂಚಿಕೆಯಲ್ಲಿ ಯಾವುದೇ ಗೊಂದಲ ಆಗದಂತೆ ನೋಡಿಕೊಳ್ಳಲಿದ್ದೇವೆ ಎಂದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ