ಕಾಲಮಿತಿಯಲ್ಲಿ ಅನುದಾನ ಬಳಸಿ ಪ್ರಗತಿ ಸಾಧಿಸಿ; ಡಾ| ಎಸ್‌. ಸೆಲ್ವಕುಮಾರ್‌

ಪ್ರಸ್ತುತ ಜಿಲ್ಲೆಯಲ್ಲಿ ಕೊರೊನಾ ಶೂನ್ಯವಾಗಿದೆ

Team Udayavani, Feb 18, 2023, 3:26 PM IST

ಕಾಲಮಿತಿಯಲ್ಲಿ ಅನುದಾನ ಬಳಸಿ ಪ್ರಗತಿ ಸಾಧಿಸಿ; ಡಾ| ಎಸ್‌. ಸೆಲ್ವಕುಮಾರ್‌

ಶಿವಮೊಗ್ಗ: ಹಲವು ಯೋಜನೆಗಳ ಅನುಷ್ಠಾನಕ್ಕಾಗಿ ವಿವಿಧ ಇಲಾಖೆಗಳಿಗೆ ಸರ್ಕಾರ ಬಿಡುಗಡೆಗೊಳಿಸಿದ ಅನುದಾನ ಸರ್ಕಾರಕ್ಕೆ ಹಿಂದಿರುಗಿ ಹೋಗದಂತೆ ನಿಗದಿಪಡಿಸಿದ ಕಾಲಮಿತಿಯೊಳಗೆ ಬಳಸಿ ನಿರೀಕ್ಷಿತ ಪ್ರಗತಿ ಸಾಧಿಸಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ಎಸ್‌. ಸೆಲ್ವಕುಮಾರ್‌ ಅಧಿಕಾರಿಗಳಿಗೆ ಸೂಚಿಸಿದರು.

ಜಿ.ಪಂ. ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ ಸಾಗರ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿಲಯಗಳ ಕಟ್ಟಡ ಕಾಮಗಾರಿಗಳನ್ನು ಪ್ರಸಕ್ತ ಮಾಸಾಂತ್ಯದೊಳಗಾಗಿ ಆರಂಭಿಸುವಂತೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತರ್ಜಾತಿ ವಿವಾಹ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅನುಷ್ಠಾನದಲ್ಲಿರುವ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗಿದೆ. ಉಳಿದ ಫಲಾನುಭವಿಗಳಿಗೆ ಅಗತ್ಯವಿರುವ ಅನುದಾನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶ್ರೀನಿವಾಸ್‌ ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರ ಮತ್ತು ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳಿಗೆ ಅಗತ್ಯವಿರುವ ಔಷಧಗಳ ಖರೀದಿಗೆ ಸರ್ಕಾರ ಅನುದಾನ ಬಿಡುಗಡೆಗೊಳಿಸಿದೆ. ಈ ಔಷಧ ಖರೀದಿ ಪ್ರಕ್ರಿಯೆ ವಿಳಂಬವಾಗದಂತೆ ಸಕಾಲದಲ್ಲಿ ಔಷಧ ಸರಬರಾಜು ಮಾಡುವ ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಿ, ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಇದಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ್‌ ಸುರಗೀಹಳ್ಳಿ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿನ ಎಲ್ಲಾ ಆರೋಗ್ಯ ಕೇಂದ್ರಗಳಿಗೆ ನಿರಂತರವಾಗಿ ಹಾಗೂ ಸಕಾಲದಲ್ಲಿ ಔಷಧ ಒದಗಿಸಲಾಗುತ್ತಿದೆ. ಅಲ್ಲದೆ ಅಗತ್ಯಕ್ಕೆ ತಕ್ಕಂತೆ ಔಷಧ ದಾಸ್ತಾನು ಮಾಡಿಕೊಳ್ಳಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿ ಆರೋಗ್ಯ ಇಲಾಖೆ ಹಾಗೂ ವೈದ್ಯಾಧಿಕಾರಿಗಳು ಸದಾ ಸನ್ನದ್ಧರಾಗಿರುವಂತೆ ನೋಡಿಕೊಳ್ಳಲಾಗಿದೆ. ಈ ಹಿಂದೆ ಗುರುತಿಸಲಾದ 2 ಕೊರೊನಾ ಸೋಂಕಿತರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಿ ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ಕೊರೊನಾ ಶೂನ್ಯವಾಗಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಿರ್ಮಿಸಬೇಕಾದ 2 ಕಟ್ಟಡಗಳ ನಿರ್ಮಾಣ ಕಾರ್ಯವನ್ನು ಮುಂದಿನ 2 ತಿಂಗಳೊಳಗಾಗಿ ಟೆಂಡರ್‌ ಕರೆದು ಪ್ರಕ್ರಿಯೆ ಪೂರ್ಣಗೊಳಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರಲ್ಲದೇ ಶೈಕ್ಷಣಿಕವಾಗಿ ಶೇ.100 ರ ಪ್ರಗತಿ ಸಾಧಿಸಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಭೆಯಲ್ಲಿ ಜಿಲ್ಲಾ ಧಿಕಾರಿ ಡಾ| ಆರ್‌.ಸೆಲ್ವಮಣಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ. ಪ್ರಕಾಶ್‌, ಪ್ರೊಬೇಷನರಿ ಜಿಲ್ಲಾಧಿಕಾರಿ ದಲ್‌ಜಿತ್‌ ಕುಮಾರ್‌ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.