ಬಡವರಿಗೆ ಸ್ವಂತ ಸೂರು ಕಲ್ಪಿಸಲು ಬದ್ಧ: ಈಶ್ವರಪ್ಪ

­ಕೇಂದ್ರ- ರಾಜ್ಯ ಸರ್ಕಾರ- ಬ್ಯಾಂಕ್‌ಗಳ ಸಹಕಾರದೊಂದಿಗೆ ಮನೆಗಳ ನಿರ್ಮಾಣ

Team Udayavani, Apr 6, 2021, 8:14 PM IST

fndeter

ಶಿವಮೊಗ್ಗ: ನಗರದಲ್ಲಿ ಬಡವರಿಗೆ ಒಂದು ಸ್ವಂತ ಸೂರು ಕಲ್ಪಿಸುವುದು ನನ್ನ ಕನಸಾಗಿತ್ತು. ಅದರಂತೆ ಬೊಮ್ಮನಕಟ್ಟೆ, ವಿರುಪಿನಕೊಪ್ಪ, ಗೋವಿಂದಪುರ, ಗೋಪಿಶೆಟ್ಟಿ ಕೊಪ್ಪ ಸೇರಿದಂತೆ ಅನೇಕ ಕಡೆ ಆಶ್ರಯ ಮನೆಗಳನ್ನು ನಿರ್ಮಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಸೋಮವಾರ ಗೋವಿಂದಪುರದಲ್ಲಿ ಮಹಾನಗರ ಪಾಲಿಕೆ ಮತ್ತು ಆಶ್ರಯ ಸಮಿತಿಯ ಆಶ್ರಯ ದಲ್ಲಿ ಜಿ+2 ಫ್ಲಾಟ್‌ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾವು ಕಡುಬಡತನದಲ್ಲಿರುವ ವೇಳೆ ನಮ್ಮ ತಾಯಿ ಒಂದು ಸ್ವಂತ ಮನೆ ಮಾಡಬೇಕೆಂದು ತಂದೆಯವರನ್ನು ಒತ್ತಾಯಿಸುತ್ತಿದ್ದರು. ಕೊನೆಗೆ ನಮ್ಮ ತಂದೆ ಸಾಲ ಮಾಡಿ ಮನೆ ಕಟ್ಟಿದರು. ಶಾಸಕನಾದ ಕೂಡಲೆ ಹೇಗಾದರೂ ಮಾಡಿ ಬಡವರಿಗೆ ಸರ್ಕಾರದಿಂದ ಸ್ವಂತ ಸೂರು ಕೊಡಿಸುವಂತಹ ಈ ಪ್ರಯತ್ನದ ಹಿಂದೆ ನನ್ನ ತಾಯಿಯವರ ಆಶಯ ಅಡಗಿದೆ. ಅದರಂತೆ ಶಿವಮೊಗ್ಗ ನಗರದ ಎಲ್ಲಾ ಬಡವರಿಗೂ ಸ್ವಂತ ಸೂರು ಒದಗಿಸಲು ಪ್ರಯತ್ನಿಸುತ್ತಿದ್ದೇನೆ. ಈಗಾಗಲೇ ಸಾವಿರಾರು ಮನೆಗಳನ್ನು ಬಡವರಿಗಾಗಿ ಕೊಡಿಸಿದ್ದೇನೆ ಎಂದರು.

ಈಗಾಗಲೇ ಗೋವಿಂದಪುರದಲ್ಲಿ ಸುಮಾರು 3 ಸಾವಿರ ಮನೆಗಳ ಸಮುಚ್ಚಯ ನಿರ್ಮಾಣವಾಗುತ್ತಿದ್ದು, ಅದರ ಫಲಾನುಭವಿಗಳಿಗೆ ಇಂದು ಮಾಡೆಲ್‌ ಹೌಸ್‌ಗಳನ್ನು ತೋರಿಸಲಾಗುತ್ತಿದ್ದು, ಕೇಂದ್ರ ರಾಜ್ಯ ಸರ್ಕಾರ ಮತ್ತು ಬ್ಯಾಂಕ್‌ಗಳ ಸಹಕಾರ ದೊಂದಿಗೆ ಮನೆಗಳ ನಿರ್ಮಾಣವಾಗುತ್ತಿದ್ದು, 3 ವರ್ಷಗಳಲ್ಲಿ ಮನೆ ಸಿಗಲಿದೆ ಎಂದರು.

ಇನ್ನು ಕೆಲವೇ ದಿನಗಳಲ್ಲಿ 1836 ಕ್ಕೂ ಹೆಚ್ಚು ಮನೆಗಳನ್ನು ನೀಡಲು ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗುವುದು. ಶಿವಮೊಗ್ಗ ನಗರದಲ್ಲಿ ಈಗಾಗಲೆ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಅರ್ಜಿ ಸಲ್ಲಿಸುವಂತಿಲ್ಲ. ಯಾರು ಮನೆ, ನಿವೇಶನ ಹೊಂದಿಲ್ಲವೋ ಅವರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು. ಪ್ರಸ್ತುತ ನಿರ್ಮಾಣವಾಗುತ್ತಿರುವ ಅಪಾರ್ಟ್ಮೆಂಟ್‌ಗಳಲ್ಲಿ 2 ಬೆಡ್‌ ರೂಂ ಜೊತೆಗೆ ದೇವರ ಕೋಣೆ, ಅಡುಗೆ ಮನೆ ಸೇರಿದಂತೆ ಪಾರ್ಕ್‌, ಕುಡಿಯುವ ನೀರು, ಯುಜಿಡಿ ವ್ಯವಸ್ಥೆಯೂ ಇರಲಿದೆ. ಅಂಗವಿಕಲರಿಗೆ, ವಯಸ್ಸಾದವರಿಗೆ ಕೆಳ ಅಂತಸ್ತಿನಲ್ಲಿರುವ ಮನೆಗಳನ್ನು ನೀಡಲಾಗುವುದು ಎಂದರು.

ವೇದಿಕೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಮೇಯರ್‌ ಸುನಿತಾ ಅಣ್ಣಪ್ಪ, ಆಯುಕ್ತ ಚಿದಾನಂದ ವಠಾರೆ, ಉಪ ಮೇಯರ್‌ ಶಂಕರ್‌ ಗನ್ನಿ, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್‌, ಆಶ್ರಯ ಸಮಿತಿ ಅಧ್ಯಕ್ಷ ಎಚ್‌.ಶಶಿಧರ್‌ ಸೇರಿದಂತೆ ಹಲವರಿದ್ದರು.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.